Breaking News

ಕಟ್ಟಡ ಕಾರ್ಮಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ


ಮೂಡಲಗಿ- ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.

ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು ಈ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ. ೬೦ ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು ೩ ಸಾವಿರ ರೂಪಾಯಿ ವೇತನ ನೀಡುತ್ತಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಕಾರ್ಮಿಕರು ಮೃತಪಟ್ಟರೆ ಅಂತಹವರಿಗೆ ರೂಪಾಯಿ ೫ ಲಕ್ಷ ವರೆಗೆ ವಿಮಾ ಸೌಲಭ್ಯವಿದೆ. ಸುಮಾರು ೨ ಲಕ್ಷ ರೂಪಾಯಿವರೆಗಿನ ಆರೋಗ್ಯದ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿ ಗುರುತಿನ ಚೀಟಿಗಳನ್ನು ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ೨೦೨೩-೨೪ ನೇ ಸಾಲಿನ ಕಾರ್ಮಿಕರಿಗೆ ೧೨೦೦ ಕಿಟ್ ಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಿಕ ಅಶೋಕ ವಡ್ಡರ, ಅನ್ವರ ನದಾಫ, ಹಣಮಂತ ಗುಡ್ಲಮನಿ, ಸುಭಾಸ ಗೋಡ್ಯಾಗೋಳ, ಪುರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಹುಕ್ಕೇರಿ : ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು. ಪಟ್ಟಣದಲ್ಲಿ ಮೌಲಾನಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ