Breaking News


ಬೆಳಗಾವಿ/ಚಿಕ್ಕೋಡಿ:ಕೃಷ್ಣಾನದಿ ತೀರದ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.

ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ನೆರೆ ಪರಿಸ್ಥಿತಿಯನ್ನು ಅವಲೋಕಿಸಿದರು. ಶಾಸಕ ಗಣೇಶ ಹುಕ್ಕೇರಿ, ಡಿಸಿ ಎಂ.ಜಿ.ಹಿರೇಮಠ, ಎಸ್‍ಪಿ ಲಕ್ಷ್ಮಣ ನಿಂಬರಗಿ, ಎಸಿ ರವಿಂದ್ರ ಕರಲಿಂಗನ್ನವರ, ತಹಶೀಲ್ದಾರ ಸುಭಾಷ ಸಂಪಗಾವಿ ಅವರು ರಮೇಶ ಜಾರಕಿಹೊಳಿಯರಿಗೆ ಸಾಥ್ ನೀಡಿದರು. ನಂತರ ಯಡೂರ ಗ್ರಾಮದ ನದಿತೀರದಲ್ಲಿ ಲೈಫ್ ಜಾಕೆಟ್ ಧರಿಸಿ ಬೋಟನ ಮೂಲಕ ಪ್ರವಾಹ ಪರಿಸ್ಥಿತಿಯನ್ನು ರಮೇಶ ಜಾರಕಿಹೊಳಿ ಅವಲೋಕಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿ ಕಳೆದ ಬಾರಿಗಿಂತ ಈ ಬಾರಿ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೋಯ್ನಾ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿಲ್ಲ. ಇದರಿಂದ ನದಿತೀರದ ಜನರು ಹೇದರುವ ಅವಶ್ಯಕತೆಯಿಲ್ಲ. ಪ್ರವಾಹ ನಿಯಂತ್ರಣಕ್ಕೆ ಸರ್ಕಾರ ಬದ್ದವಾಗಿದ್ದು..ಪ್ರವಾಹಕ್ಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಡಳಿತ ಅಧಿಕಾರಿಗಳು ಸಹ ಪ್ರವಾಹ ನಿಯಂತ್ರಣಕ್ಕೆ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇನ್ನು ಕಳೆದ ವರ್ಷ ಪ್ರವಾಹದಲ್ಲಿ ಹಾನಿಗೊಳಗಾದ ಮನೆಗಳಿಗೆ ಪರಿಹಾರದ ಹಣ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಶೀಘ್ರವೇ ಆ ಸಮಸ್ಯೆಗಳನ್ನು ಪರಿಹರಿಸಿ ಪರಿಹಾರದ ಹಣವನ್ನು ಒದಗಿಸಲಾಗುವುದು ಎಂದು ರಮೇಶ ಜಾರಕಿಹೋಳಿ ಭರವಸೆ ನೀಡಿದರು.
ಒಟ್ಟಾರೆ ಕೃಷ್ಣಾ ನದಿ ತೀರದ ಪ್ರವಾಹ ಸ್ಥಳಗಳಿಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಎರಡು ಗ್ಯಾಂಗ್ 9 ಜನ ಡಕಾಯಿತರನ್ನು ಬಂಧಿಸಿ; ಚಿನ್ನಾಭರಣ,ನಗದು ಹಣ, ವಾಹನಗಳ ವಶಕ್ಕೆ ಪಡೆದ ಗೋಕಾಕ ಪೋಲಿಸ್!

ಗೋಕಾಕ : ಗೋಕಾಕ ಶಹರ, ಅಂಕಲಗಿ ಮತ್ತು ಗೋಕಾಕ ಗ್ರಾಮೀಣ ಹಳ್ಳಿಗಳಲ್ಲಿ ದರೋಡೆ, ಸುಲಿಗೆ, ಮೋಟಾರ ಸೈಕಲ ಕಳ್ಳತನ, ಜಾನುವಾರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ