ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.
Read More »Daily Archives: ಆಗಷ್ಟ್ 15, 2020
ಸಚಿವ ರಮೇಶ ಜಾರಕಿಹೊಳಿ, ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಗೋಕಾಕ ಹಾಗೂ ಮೂಡಲಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ವೈದ್ಯಕೀಯ ಉಪಕರಣಗಳ ಪೂರೈಕೆ
ಘಟಪ್ರಭಾ: ಕೋರೋನಾದಂತಹ ಮಾರಕ ಕಾಯಿಲೆಗಳ ಮಧ್ಯ ಬಳಲುತ್ತಿರುವ ಕೊರೋನಾ ಸೊಂಕಿತರ ಆರೈಕೆ ಮತ್ತು ಸುರಕ್ಷತೆಗಾಗಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಾಡುತ್ತಿರುವ ಮಾನವೀಯ ಮೌಲ್ಯಗಳು ಮಾದರಿಯಾಗಿದೆ. ರಾಜ್ಯ ಹಾಗೂ ರಾಷ್ಟ್ರದಲ್ಲಿಯೇ ಅವರ ಸೇವೆ ಅನುಪಮವಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಹೇಳಿದರು. ಶನಿವಾರದಂದು ಇಲ್ಲಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »ಹೈದರಾಬಾದ್: ತಹಶೀಲ್ದಾರ್ ಮನೆ ಮೇಲೆ ಎಸಿಬಿ ದಾಳಿ ಒಂದು ಕೋಟಿ ರೂಪಾಯಿ ಜಪ್ತಿ!
ಹೈದರಾಬಾದ್: ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ. ತೆಲಂಗಾಣದಲ್ಲಿ ನಿನ್ನೆ ತಹಶೀಲ್ದಾರ್ವೊಬ್ಬರ ಮನೆ ಮೇಲೆ ನಡೆದ ಎಸಿಬಿ ದಾಳಿ ವೇಳೆ ಬರೋಬ್ಬರಿ 1 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗದು ಹಣವನ್ನ ಜಪ್ತಿ ಮಾಡಲಾಗಿದೆ. ಮೆಡ್ಚಲ್-ಮಲ್ಕಜ್ಗಿರಿ ಜಿಲ್ಲೆಯ ಕೀಸಾರಾ ತಹಶೀಲ್ದಾರ್ ಇರ್ವ ಬಾಲರಾಜು ನಾಗರಾಜು, ತಮ್ಮ ಮನೆಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆ ನಾಗರಾಜು ಹಾಗೂ …
Read More »ಎಲ್ಲ ಭಾರತೀಯರು ಭಾರತ ದೇಶಕ್ಕಾಗಿ ಹಿರಿಯರು ಕಂಡ ಕನಸು ನನಸು ಮಾಡುವ ನಿಟ್ಟಿನಲ್ಲಿ ಶ್ರಮಿಸಲು ಸತೀಶ ಜಾರಕಿಹೊಳಿ ಕರೆ
ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ ಜನರು ಸಮಾನತೆಯಿಂದ ಬಾಳಬೇಕು ಮತ್ತು ಅಭಿವೃದ್ಧಿ ಹೊಂದಬೇಕು …
Read More »ಬೆಳಗಾವಿ:ಮಳೆಯಲ್ಲೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ
ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು, ಜಿಟಿ ಜಿಟಿ ಮಳೆ ನಡುವೆಯೂ ಸರಳವಾಗಿ ಸಮಾರಂಭ ಆಚರಿಸಲಾಯಿತು. ಕೋವಿಡ್ ಹಿನ್ನೆಲೆಯಲ್ಲಿ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸಾರ್ವಜನಿಕ ಸಹಭಾಗಿತ್ವ ಇಲ್ಲದೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಮಾತ್ರ ಭಾಗಿಯಾಗಿದ್ದರು. ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸನ್ಮಾನ: ಇದೇ ವೇಳೆ ಇಲಾಖೆಯ ವಸತಿ …
Read More »
CKNEWSKANNADA / BRASTACHARDARSHAN CK NEWS KANNADA