Breaking News

Daily Archives: ಆಗಷ್ಟ್ 19, 2020

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ವಿರೋಧ ಖಂಡಿಸಿ : ಪ್ರತಿಭಟನೆ

ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ …

Read More »

ರಾಕೇಟ್ ಕಾರ್ಖಾನೆಗೆ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ನದಿಗೆ ಬಿಟ್ಟರೆ ಕಾನೂನು ಕ್ರಮ ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ …

Read More »

KMF ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಕಾಳಜಿ ಕೇಂದ್ರದ ಜನರಿಗೆ ಅವಶ್ಯ ವಸ್ತುಗಳ ವಿತರಣೆ

ಗೋಕಾಕ :  ಅರಭಾವಿ ಮತಕ್ಷೇತ್ರದ  ಶಾಸಕ ಬಾಲಚಂದ್ರ ಜಾರಕಿಹೊಳಿ  ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ ಮೂಲ ಸೌಕರ್ಯ …

Read More »