Breaking News

Monthly Archives: ಆಗಷ್ಟ್ 2020

ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮೆಚ್ಚುಗೆ.

ಮಹಾರಾಷ್ಟ್ರದ ಘಟ್ಟಪ್ರದೇಶಗಳಲ್ಲಿ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಭವಿಸಬಹುದಾದ ವಿಪತ್ತನ್ನು ಕಡಿಮೆ ಮಾಡುವಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ಪಾತ್ರ ದೊಡ್ಡದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಜಲಸಂಪನ್ಮೂಲ ಇಲಾಖೆಯ ಒಂದು ವರ್ಷದ ಸಾಧನೆಗಳ ಕಿರುಹೊತ್ತಿಗೆ ಜಲಯಜ್ಞ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರತಿವರ್ಷ ಮಹಾರಾಷ್ಟ್ರ ಭಾಗದಲ್ಲಿ ಕುಂಭದ್ರೋಣ ಮಳೆ ಆದಾಗಲೆಲ್ಲಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ …

Read More »

ಮುಖ್ಯಮಂತ್ರಿ ಯಡಿಯೂರಪ್ಪ ಜತೆ ಬಿ ಎಲ್ ಸಂತೋಷ್ ಅವರು ಶ್ರೀ ಗೌರಿ ಗಣೇಶ್ ಹಬ್ಬ ಆಚರಣೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆ ಬಿ.ಎಲ್. ಸಂತೋಷ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಿ ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆತ್ಮೀಯರೂ ಆಗಿರುವ ಬಿ.ಎಲ್. ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ …

Read More »

ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!

ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ. ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ …

Read More »

ಕಂದಾಯ ಸಚಿವರು ಬೆಂಗಳೂರು ಬಿಟ್ಟು ಹೊರಗೆ ಬರಲಿ- ಸತೀಶ್ ಜಾರಕಿಹೊಳಿ

ಬೆಳಗಾವಿ: ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ವಿಫಲವಾಗಿದೆ.  ಕಳೆದ ಬಾರಿಯೂ ಪ್ರವಾಹ ಪರಿಹಾರ ಕೊಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಪ್ರವಾಹ ಸೇರಿ ಎಲ್ಲ ವಿಷಯಗಳ ಚರ್ಚೆಗಾಗಿ ಅಧಿವೇಶನ ಕರೆಯುವಂತೆ ಒತ್ತಾಯ ಮಾಡಿದ್ದೇವೆ. ಅಧಿವೇಶದಲ್ಲಿ ಸರ್ಕಾರದ ವೈಫಲ್ಯಗಳ ಬಗ್ಗೆ ಧ್ವನಿ ಎತ್ತುವುದಾಗಿ ಹೇಳಿದರು.  ಕಂದಾಯ ಸಚಿವರು ಬೆಂಗಳೂರು ಬಿಡಲಿ! ಕಳೆದ ಬಾರಿ ಭಾರೀ ಪ್ರವಾಹದಿಂದ  ಮನೆ ಕಳೆದುಕೊಂಡ …

Read More »

ಕೆಆರ್​ಎಸ್​​ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿಎಸ್​ ಯಡಿಯೂರಪ್ಪ || ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸಾಥ್ ||

ಮಂಡ್ಯ: ಸಿಎಂ ಬಿಎಸ್​ ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ದಾರೆ. ಸತತ 5 ಬಾರಿ ಸಿಎಂ ಬಿಎಸ್​ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಬಳಿಕ ಸಿಎಂ ಬಿಎಸ್​ವೈ ಎಚ್​.ಡಿ.ಕೋಟೆಯ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದರು. ಅಲ್ಲಿಯೂ ಸಹ ಕಬಿನಿ …

Read More »

ಆನ್ ಲೈನ್ ಶಿಕ್ಷಣ: ವಿದ್ಯಾರ್ಥಿಗಳ ತೊಂದರೆ ಕೇಳುವವರಾರು? ಎನ್ ಸಿಇಆರ್ ಟಿ ಸಮೀಕ್ಷೆ ಹೇಳಿದ್ದೇನು?

ನವದೆಹಲಿ: ಕೋವಿಡ್-19ನಿಂದಾಗಿ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ತಮ್ಮ ಕೆಲಸ ಕಾರ್ಯಗಳನ್ನು ಮನೆಯಿಂದಲೇ ಮಾಡುತ್ತಲಿದ್ದರೆ, ಇನ್ನು ಕೆಲವರು ಎಲ್ಲಾ ಸುರಕ್ಷತಾ ಕ್ರಮದೊಂದಿಗೆ ಕಚೇರಿ ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ತೆರಳುತ್ತಿರುವರು. ಆದರೆ ಕೊರೋನಾದಿಂದ ದೇಶದ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಮಟ್ಟದ ಪೆಟ್ಟು ಬಿದ್ದಿದೆ. ಜನರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಹೆದರುತ್ತಿರುವುದು ಒಂದೆಡೆಯಾದರೆ, ಸರ್ಕಾರ ಕೂಡ ಶಾಲೆ, ಕಾಲೇಜುಗಳನ್ನು ತೆರೆಯಲು ಇದುವರೆಗೆ ಅನುಮತಿ ನೀಡಿಲ್ಲ. ಹೀಗಾಗಿ ಕೆಲವೊಂದು ರಾಜ್ಯಗಳಲ್ಲಿ ಆನ್ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ವಿರೋಧ ಖಂಡಿಸಿ : ಪ್ರತಿಭಟನೆ

ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು  ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ …

Read More »

ರಾಕೇಟ್ ಕಾರ್ಖಾನೆಗೆ ಎಚ್ಚರಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ನದಿಗೆ ಬಿಟ್ಟರೆ ಕಾನೂನು ಕ್ರಮ ಗೋಕಾಕ : ನಗರದ ಹೊರವಲಯದಲ್ಲಿರುವ ರಾಕೇಟ್ ಇಂಡಿಯಾ ಲಿ., ಕಾರ್ಖಾನೆಯು ರಾಸಾಯನಿಕಗಳಿಂದ ಕೂಡಿದ ಹಾನಿಕಾರಕ ತ್ಯಾಜ್ಯ ವಸ್ತುಗಳನ್ನು ಮಾರ್ಕಂಡೇಯ ನದಿಗೆ ಬಿಡುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ನದಿ ತೀರದ ಜಮೀನುಗಳಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗುತ್ತವೆ. ಮಾರಕವಾಗುವ ತ್ಯಾಜ್ಯ ವಸ್ತುಗಳನ್ನು ಇನ್ನು ಮುಂದೆ ನದಿಗೆ ಬಿಟ್ಟರೆ ಕಾರ್ಖಾನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕ ಹಾಗೂ ಕೆಎಂಎಫ್ …

Read More »

KMF ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ಕಾಳಜಿ ಕೇಂದ್ರದ ಜನರಿಗೆ ಅವಶ್ಯ ವಸ್ತುಗಳ ವಿತರಣೆ

ಗೋಕಾಕ :  ಅರಭಾವಿ ಮತಕ್ಷೇತ್ರದ  ಶಾಸಕ ಬಾಲಚಂದ್ರ ಜಾರಕಿಹೊಳಿ  ಸೂಚನೆ ಮೇರೆಗೆ ಅವರ ಆಪ್ತ ಸಹಾಯಕರು ಕಾಳಜಿ ಕೇಂದ್ರದಲ್ಲಿರುವ ಜನರಿಗೆ ಮೂಲ ಸೌಕರ್ಯ ಒದಗಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನದಿ ದಡದ ಗ್ರಾಮಸ್ಥರಿಗೆ ಪ್ರವಾಹದ ಆಂತಕ ಎದುರಾಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ಮೇರೆಗೆ ಆಪ್ತ ಸಹಾಯಕರು ಸರ್ಕಾರಿ ಅಧಿಕಾರಿಗಳೊಂದಿಗೆ ಸೇರಿ ಕಾಳಜಿ ಕೇಂದ್ರದಲ್ಲಿ ಇರುವವ ಜನರಿಗೆ ಮೂಲ ಸೌಕರ್ಯ …

Read More »

ಸರ್ಕಾರದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌! ಆದರೆ ಹೊಸ ನಿಯಮ.

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕೆಂಬ ಹಲವರ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೆಲವು ನಿಯಮಗಳೊಂದಿಗೆ ಆಚರಣೆಗೆ ಅವಕಾಶ ನೀಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೋವಿಡ್ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳ …

Read More »