ಗೋಕಾಕ: ಸಾರ್ವಜನಿಕರ ರಸ್ತೆ ಸಂಚಾರ ಸುಗಮಕ್ಕಾಗಿ ಕುಸಿದಿರುವ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರದಂದು ಗುದ್ದಲಿ ಪೂಜೆ ನೆರವೇರಿಸಲಾಯಿತು. ಜಿ.ಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಕಳೆದ ಸೋಮವಾರದಂದು ಬೆಳಗಿನ ಜಾವ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಇದರಿಂದ ತುಂಬ ತೊಂದರೆಯಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »Daily Archives: ಅಕ್ಟೋಬರ್ 7, 2020
ಕೋವಿಡ್-೧೯ ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ …
Read More »ಲಂಚ ಪಡೆಯುತ್ತಿದ್ದ ವಿಶೇಷ ಭೃಷ್ಟ ಮಹಿಳಾ ತಹಶೀಲ್ದಾರ್ ಎಸಿಬಿ ಬಲೆಗೆ!
ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ …
Read More »ಊಟ ಮಾಡಿಸಿ ಕೈ ತೊಳೆಯಲು ಹೋದ ಅಮ್ಮ – ಮಹಡಿಯಿಂದ ಬಿದ್ದು ಕಂದಮ್ಮ ಸಾವು
ಮಂಡ್ಯ: ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿಂದ ಬಿದ್ದು ಸಾವನ್ನಪ್ಪಿರುವ ಮನಕಲಕುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿಯ ಮನೆಯಾಗಿದೆ. ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ …
Read More »ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ಅವರ ನಿವಾಸಕ್ಕೆ ಸಿಎಂ ಭೇಟಿ; ಕುಟುಂಬಕ್ಕೆ ಸಾಂತ್ವನ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ನಗರದ ವಿಶ್ವೇಶ್ವರಯ್ಯ ನಗರದ ಸಂಪಿಗೆ ರಸ್ತೆಯಲ್ಲಿ ಇರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಬುಧವಾರ (ಅ.7) ಆಗಮಿಸಿದ ಮುಖ್ಯಮಂತ್ರಿಗಳು, ದಿ.ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು. ನಂತರ ಕುಟುಂಬದ ಸದಸ್ಯರ ಜತೆ ಮಾತನಾಡಿದ ಅವರು, ದಿ.ಸುರೇಶ್ ಅಂಗಡಿ ಅವರ ಸಜ್ಜನಿಕೆಯ …
Read More »
CKNEWSKANNADA / BRASTACHARDARSHAN CK NEWS KANNADA