Breaking News

Daily Archives: ಫೆಬ್ರವರಿ 15, 2021

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, …

Read More »

ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ ಇಲ್ಲ, ಹಿಂದೆ ಇದ್ದ ಮಾನದಂಡವೇ ಮುಂದುವರಿಕೆ: ಉಮೇಶ್ ಕತ್ತಿ.

ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಜ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಯೂಟರ್ನ್ ಹೊಡೆದಿದ್ದು, ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ …

Read More »

ಸಮಾಜಕ್ಕೆ ಸಂತ ಸೇವಾಲಾಲ್ ರ ಕೊಡುಗೆ ಅಪಾರ : ರಾಹುಲ್ ಜಾರಕಿಹೊಳಿ

ಬೆಳಗಾವಿ: “ಸಂತ ಸೇವಾಲಾಲ್ ರು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಅವರ ತತ್ವಾದರ್ಶನಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು” ಎಂದು ಯುವ ಮುಖಂಡ ರಾಹುಲ್ ಜಾರಕಿಹೊಳಿ ಹೇಳಿದರು. ತಾಲೂಕಿನ ಅಲತಗಾ ಖಡಿಮಶಿನ್ ಗ್ರಾಮದಲ್ಲಿ ಸಂತ ಸೇವಾಲಾಲ್ ಮಂಡಳಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ರ 282ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂತ ಸೇವಾಲಾಲ್ ಅವರು ಮಹಾನ್ ದಾರ್ಶನಿಕರಾಗಿದ್ದರು. ಜೊತೆಗೆ ಮಹಾನ್ ಕಾಲಜ್ಞಾನಿಯೂ …

Read More »