Breaking News

Daily Archives: ಮಾರ್ಚ್ 2, 2021

ನವೀಕರಣಗೊಂಡ ಅಂಬೇಡ್ಕರ್ ಮೂರ್ತಿ ಪರಿಶೀಲಿಸಿದ ಶಾಸಕ ಸತೀಶ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಂಗಳವಾರ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸಭೆ ನಡೆಸಿ, ಕುಂದುಕೊರತೆ ಆಲಿಸಿದರು. ಸಭೆಯ ನಂತರ ಪಾಲಿಕೆಯ ಆವರಣದಲ್ಲಿರುವ ನವೀಕರಿಸಲಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ಪರಿಶೀಲಿಸಿದರು. ಮೂರ್ತಿಯ ಸುತ್ತ ಉದ್ಯಾನ ಹಾಗೂ ದೀಪಾಲಂಕಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ, ಪಾಲಿಕೆಯ …

Read More »

15 ದಿನದಲ್ಲಿ  ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ

ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ  ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ  ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ   ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ ಪ್ರಾಣಿ …

Read More »