Breaking News

Daily Archives: ಮೇ 7, 2021

ಹಿರಿಯ ಪತ್ರಕರ್ತ ಚಂದ್ರಶೇಖರ ಕೊಣ್ಣೂರ ಅವರ ಧರ್ಮಪತ್ನಿ ಶ್ರೀಮತಿ ಜಯಶ್ರೀ ಕೊಣ್ಣೂರ ನಿಧನ

ಗೋಕಾಕ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಹಾಗೂ ತಾ.ಪಂ. ಮಾಜಿ ಸದಸ್ಯ ಶ್ರೀ ಚಂದ್ರಶೇಖರ ಕೊಣ್ಣೂರ ಅವರ ಧರ್ಮಪತ್ನಿ ಮಮದಾಪೂರ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಚಂದ್ರಶೇಖರ ಕೊಣ್ಣೂರ (48) ಅವರು ಇಂದು ದಿ. 7/5/2021 ರಂದು ಸಂಜೆ ನಿಧನರಾದರೆಂದು ತಿಳಿಸಲು ವಿಷಾಧವೆನಿಸುತ್ತದೆ.. ಮೃತರು ಓರ್ವ ಪುತ್ರ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಮರಡಿ ಶಿವಾಪೂರ …

Read More »

ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದಂತ ಕೊರೋನಾ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊಂಡಿಲ್ಲ. ಹೀಗಾಗಿ ರಾಜ್ಯಾಧ್ಯಂತ ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಬೆಳಿಗ್ಗೆ ಸುಮಾರು 2 ಗಂಟೆ ಕಾಲ ನಮ್ಮ ಸಚಿವ ಸಂಪುಟದ ಹಿರಿಯ ಸಹೋದ್ಯೋಗಿಗಳ ಜೊತೆಗೆ, ಕೋವಿಡ್ ನಿಯಂತ್ರಣ ಬಾರದ ಈ ಸಂದರ್ಭದಲ್ಲಿ ಯಾವ ರೀತಿಯ ತೀರ್ಮಾನ …

Read More »

ಗೋಕಾಕ ರಾಮಸೇನಾ ಕರ್ನಾಟಕ ವತಿಯಿಂದ ಕೋವಿಡ ವಾರಿಯರ್ಸಗಳಿಗೆ ಉಪಹಾರದ ವ್ಯವಸ್ಥೆ.

ಗೋಕಾಕ: ಕೋವಿಡ್‌ನ ಎರಡನೇ ಅಲೆಯಿಂದ ಜನತಾ ಕರ್ಫ್ಯೂ ವಿಧಿಸಲಾಗಿದೆ. ಕೋವಿಡ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಮತ್ತು ಕೋವಿಡ್ ಸಂದರ್ಭದಲ್ಲಿ ಕರ್ತವ್ಯದಲ್ಲಿರುವ ಪೋಲಿಸ್ ಸಿಬ್ಬಂದಿಗಳಿಗೆ ಆರೋಗ್ಯ ಸಿಬ್ಬಂದಿಗಳಿಗೆ ನೀರಿನ ಬಾಟಲಿ, ಉಪಹಾರ ವ್ಯವಸ್ಥೆಯನ್ನು ರಾಮಸೇನೆ ಕರ್ನಾಟಕ, ಗೋಕಾಕ ಘಟಕದಿಂದ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ. ನಗರದಲ್ಲಿ ರಾಮಸೇನಾ ಕರ್ನಾಟಕ, ಗೋಕಾಕ ಮುಖ್ಯಸ್ಥರು ಮಾತನಾಡಿ ಕೋವಿಡ ಸಮಯದಲ್ಲಿ ಹಗಲಿರುಳು ನಮಗಾಗಿ ದುಡಿಯುತ್ತಿರುವ ಕೊರೋನಾ ವಾರಿಯರ್ಸಗಳು ತಮ್ಮ ಕುಟುಂಬವನ್ನು ಲೆಕ್ಕಿಸದೆ ನಮಗಾಗಿ ಕೆಲಸ ಮಾಡುತ್ತಿದ್ದಾರೆ, ಅದಕ್ಕಾಗಿ ನಮ್ಮದೊಂದು …

Read More »

ಪಶ್ಚಿಮಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಖಂಡಿಸಿ ಗೋಕಾಕ ಬಿಜೆಪಿಯಿಂದ ಮೌನ ಪ್ರತಿಭಟನೆ.!

ಗೋಕಾಕ: ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಟಿಎಮ್‌ಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿ ಪಕ್ಷದ ಕಾರ್ಯಕರ್ತರಿಗೆ ಕಠೀಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೌನ ಪ್ರತಿಭಟನೆ ಮೂಲಕ ಶುಕ್ರವಾರದಂದು ತಹಶೀಲದಾರರಿಗೆ ಮನವಿ ಸಲ್ಲಿಸಿದರು.     ಪಶ್ಚಿಮ ಬಂಗಾಲ ರಾಜ್ಯದಲ್ಲಿ ಮೇ.೨ ರಂದು ವಿಧಾನಸಭಾ ಫಲಿತಾಂಶದ ನಂತರ ಆರು ಜನ ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ನೂರಾರು ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ತೆರಳಿ ಹಲ್ಲೆ ಮಾಡಿದ್ದು, …

Read More »