Breaking News

Daily Archives: ಜೂನ್ 3, 2021

ವಕೀಲರ ಸಂಕಷ್ಟಕ್ಕೆ ನೆರವಾದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು : ಶಶಿಧರ ದೇಮಶೆಟ್ಟಿ.

ಗೋಕಾಕ:ಕೊರೊನ ಸಂದರ್ಭದಲ್ಲಿ ವಕೀಲರಿಗಾಗಿ 5ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ಘೋಷಿಸಿರುವ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ, ಸಹಕರಿಸಿದ ಕಾನೂನು &ಗೃಹ ಸಚಿವರಾದ ಬಸವರಾಜ ಬೊಮ್ಮಾಯಿಯವರಿಗೆ ರಾಜ್ಯದ ಸಮಸ್ತ ವಕೀಲರ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ವಕೀಲರು ಮತ್ತು ಕಾನೂನು ಪ್ರಕೋಷ್ಟ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಸಂಚಾಲಕರಾದ ಶಶಿಧರ ದೇಮಶೆಟ್ಟಿ ಅವರು ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಪ್ರಭುಲಿಂಗ ನವಡಗಿಯವರ ನೇತೃತ್ವದ ನಿಯೋಗದೊಂದಿಗೆ, ರಾಜ್ಯ ವಕೀಲರ ಪರಿಷತ್ತಿನ ಪರವಾಗಿ ಪರಿಷತ್ತಿನ …

Read More »

ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …

Read More »

ಮತ್ತೆ ಒಂದು ವಾರ ಕರ್ನಾಟಕ ಲಾಕ್ ಡೌನ್: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕೊರೊನಾವನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜೂನ್ 7 ರ ಬೆಳಿಗ್ಗೆ 6 ಗಂಟೆಯಿಂದ ಜೂ. 14ರ ಬೆಳಿಗ್ಗೆ 6 ಗಂಟೆಯವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು. ಆರೋಗ್ಯ ಪರಿಣಿತರ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. …

Read More »

ಕೊಣ್ಣೂರ ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ

ಗೋಕಾಕ್ ತಾಲೂಕಿನ ಕೊಣ್ಣೂರ ಸರಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ  ಕೊರೊನಾ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ನೀಡಲಾಗುತ್ತಿಯೋ ? , ಇಲ್ಲವೋ ಎಂಬುವುದನ್ನು ಪರಿಶೀಲಿಸಿದರು. ಕೋವಿಡ್ ಕೇಸ್ ಗಳ ವರದಿ ಪಡೆದರು‌.  ಜತೆಗೆ ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಸಹ ಆಲಿಸಿದರು‌. ತದನಂತರ ಕೊರೊ‌ನಾ ವಾರಿಯರ್ಸ್‌ ಗಳಾದ ಆಸ್ಪತ್ರೆ ಸಿಬ್ಬಂದಿ, ಪೊಲೀಸರ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ , ಸ್ಯಾನಿಟೈಸರ್ ವಿತರಿಸಿದರು. ಈ …

Read More »

ಕೇಂದ್ರ ಸರಕಾರದ ಮಾದರಿಯಲ್ಲಿ ರಾಜ್ಯದ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ : ಅಶೋಕ್ ಪೂಜಾರಿ ಆಗ್ರಹ.

ಗೋಕಾಕ : ರಾಷ್ಟವ್ಯಾಪ್ತಿ ಎಕೀಕೃತ ಕೇಂದ್ರ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಕಾರ್ಯರೂಪಕ್ಕೆ ತರಲು ಕ್ರಮಕೈಗೊಳ್ಳುತ್ತಿರುವ ಕೇಂದ್ರ ಸರಕಾರದ ಶಿಕ್ಷಣ ನೀತಿಗೆ ಪೂರಕವಾಗಿಯೇ ಕೇಂದ್ರ ಸರಕಾರ ಕೇಂದ್ರೀಯ ಶಿಕ್ಷಣ ಮಂಡಳಿಯಿಂದ ನಡೆಯಲಿರುವ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಯ ೧೨ ನೇ ತರಗತಿಯ ಪರಿಕ್ಷೆಗಳನ್ನು ರದ್ದುಪಡಿಸಿರುವ ನಿರ್ಣಯಕ್ಕೆ ಪೂರಕವಾಗಿಯೇ ಕರ್ನಾಟಕ ರಾಜ್ಯದಲ್ಲಿ ನಡೆಯಬೇಕಾಗಿರುವ ಪಿ.ಯು.ಸಿ. ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದು ಪಡಿಸಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ …

Read More »

ನಾಳೆಯಿಂದ 3 ದಿನ ಸಂಪೂರ್ಣ ಲಾಕ್ ಡೌನ್ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಿ: ಪಿಎಸ್ಐ ನಾಗರಾಜ್ ಖಿಲಾರೆ.

ಗೋಕಾಕ: ಕೊರೋನಾ ನಿಯಂತ್ರಣಕ್ಕೆ ಮಾಡಲು ಜಿಲ್ಲಾಡಳಿತ ವಾರದ ಕೊನೆಯ ಮೂರು ದಿನ ಶುಕ್ರವಾರದಿಂದ ಸೋಮವಾರ ಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಇಲಾಖೆಯೊಂದಿಗೆ ಸಹಕರಿಸುವಂತೆ ಗೋಕಾಕ ಗ್ರಾಮಾಂತರ ಪೋಲಿಸ್ ಠಾಣೆಯ ಪಿಎಸ್ಐ ನಾಗರಾಜ್ ಖಿಲಾರೆ ಅವರು ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ನಿಯಂತ್ರಿಸಲು ಪೊಲೀಸರು …

Read More »

ಗೋಕಾಕ ತಾಲೂಕು ವೈದ್ಯಾಧಿಕಾರಿಗಳೊಂದಿಗೆ ರಾಹುಲ್ ಜಾರಕಿಹೊಳಿ ಚರ್ಚೆ.

ಗೋಕಾಕ ಮತಕ್ಷೇತ್ರದ 22 ಗ್ರಾಪಂ, 4 ಪಪಂ, ಒಂದು ನಗರಸಭೆಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದ ರಾಹುಲ್ ಜಾರಕಿಹೊಳಿ ಗೋಕಾಕ: ಗೋಕಾಕ ಮತಕ್ಷೇತ್ರದ 22 ಗ್ರಾಮ ಪಂಚಾಯತ,  4 ಪಟ್ಟಣ ಪಂಚಾಯತ ಹಾಗೂ ಒಂದು ನಗರಸಭೆಯ ಸಿಬ್ಬಂದಿಗಳಿಗೆ ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಇಂದು ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆ ಮಾಡಿದ್ದಾರೆ. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, …

Read More »