Breaking News

Daily Archives: ಜುಲೈ 11, 2021

ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು : ನಗರದ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇದರಿಂದಾಗಿ ಕಾರ್ಖಾನೆಯ ಮೊದಲ ಮಹಡಿ ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿ ಇರುವಂತ ಡೈಸಿ ಡೀಡ್ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದಾಗಿ, ಕಾರ್ಖಾನೆಯ ಇತರೆ ಭಾಗಕ್ಕೂ ವ್ಯಾಪಿಸಿದ ಪರಿಣಾಮ, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಆಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇದೀಗ ಬೆಂಕಿ …

Read More »

ಮುರ್ಡೇಶ್ವರದಲ್ಲಿ ಇಬ್ಬರು ನೀರು ಪಾಲು,ಒಬ್ಬನ ಶವ ಪತ್ತೆ

ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದ ಶಿವಮೊಗ್ಗ ಜಿಲ್ಲೆಯ ನಾಲ್ವರು ಪ್ರವಾಸಿಗರಲ್ಲಿ, ಇಬ್ಬರು ಸಮುದ್ರದಲ್ಲಿ ಭಾನುವಾರ ನೀರು ಪಾಲಾಗಿದ್ದಾರೆ. ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರಿಗೆ ಹುಡುಕಾಟ ಮುಂದುವರಿದಿದೆ. ಈಜಲು ಸಮುದ್ರಕ್ಕೆ ಇಳಿದಿದ್ದವರ ಪೈಕಿ ಇಬ್ಬರು ಅಲೆಗಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ. ಬೇಕರಿ ಮಂಜುನಾಥ ಎಂಬುವವರ ಮೃತದೇಹ ದಡಕ್ಕೆ ತೇಲಿಕೊಂಡು ಬಂದಿದೆ. ಭಟ್ಕಳದಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಸೆಳೆತ ಜೋರಾಗಿದೆ. ಸಮುದ್ರ ಪ್ರಕ್ಷುಬ್ಧವಾಗಿರುವ ಕಾರಣ ದೇವಸ್ಥಾನದ ಬಲಭಾಗದಲ್ಲಿ …

Read More »

ಶಾಲೆ ಆರಂಭದ ಬಗ್ಗೆ ತಜ್ಞರು ಹೇಳಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಅಬ್ಬರ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತಂತೆ ಚರ್ಚೆ ನಡೆಸಲಾಗುತ್ತಿದ್ದು, ಜುಲೈ ಮೂರನೇ ವಾರದ ಬಳಿಕ ಶಾಲೆ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊರೊನಾದಿಂದ ರಾಜ್ಯದಲ್ಲಿ ಸುಮಾರು 15 ತಿಂಗಳಿನಿಂದ ಶಾಲೆ ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆಯಲ್ಲಿ ಗ್ರಾಮೀಣಾ ಪ್ರದೇಶದ ಮಕ್ಕಳಿಗೆ ಸರಿಯಾಗಿ ಆನ್ ಲೈನ್ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ರಾಜ್ಯದಲ್ಲಿ ಶಾಳೆ ಆರಂಭಿಸಲು ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ. ಶಾಲೆ …

Read More »

ಜೀವ ಜಲ ಪೋಲು , ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ!

ಹರಿಹರ: ಜಲಸಿರಿ ಯೋಜನೆಯ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳ ಸಮನ್ವಯದ ಕೊರತೆಯಿಂದ ನಗರದ ಒಂದು ಭಾಗದಲ್ಲಿ ಲಕ್ಷಾಂತರ ಲೀಟರ್‍ ಜೀವಜಲ ಪೋಲಾಗುಗುತ್ತಿದ್ದರೆ, ಮತ್ತೊಂದು ಭಾಗದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ನಗರದ ಮಹಾತ್ಮ ಗಾಂಧಿ ಕೊಳೆಗೇರಿ ಪ್ರದೇಶದ 5 ಲಕ್ಷ ಲೀಟರ್‍ ಸಾಮರ್ಥ್ಯದ ಓವರ್‍ ಹೆಡ್‍ ಟ್ಯಾಂಕ್‍ಗೆ ಹೆಚ್ಚುವರಿ ನೀರು ಹರಿಸುವುದರಿಂದ ಟ್ಯಾಂಕ್‍ ತುಂಬಿ ನಿತ್ಯ ಲಕ್ಷಾಂತರ ಲೀಟರ್ ‍ನೀರು ಅಪವ್ಯಯವಾಗುತ್ತಿದೆ. ಭಾರತ್‍ ಆಯಿಲ್‍ ಮಿಲ್‍ ಕಾಂಪೌಂಡ್‍, ಬಾತಿ ಶಿವನಾಗಪ್ಪ ಕಾಂಪೌಂಡ್‍ ಹಾಗೂ …

Read More »

ನಟ ದರ್ಶನ್ ಗೆ ವಂಚಿಸಲು ಬಂದು ಸಿಕ್ಕ ಬಿದ್ದ ಮಹಿಳೆ

ನಟ ದರ್ಶನ್ ಅವರನ್ನು ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಹೇಳಿಕೊಂಡಿದ್ದಂತ ಮಹಿಳೆಯೊಬ್ಬರು, ಭೇಟಿಯಾಗಿ ನಿಮ್ಮ ಹೆಸರಿನಲ್ಲಿ 25 ಕೋಟಿ ರೂಪಾಯಿಗೆ ಲೋನ್ ಗಾಗಿ ಸ್ನೇಹಿತರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಆ ಕುರಿತು ವಿಚಾರಿಸೋದಕ್ಕೆ ಬಂದಿರೋದಾಗಿ ತಿಳಿಸಿದ್ದರು. ಆದ್ರೇ ಹಾಗೇ ಯಾರೂ ಲೋನ್ ಗಾಗಿ ಅರ್ಜಿ ಸಲ್ಲಿಸಿದ ಬಗ್ಗೆ ನಟ ದರ್ಶನ್ ಗೆ ಮಾಹಿತಿ ಇರಲಿಲ್ಲ.ಈ ಬಳಿಕ, ನಟ ದರ್ಶನ್ ಸ್ನೇಹಿತ ಹರ್ಷ ಎಂಬುವರು ಮೈಸೂರಿನಲ್ಲಿ ನಟ ದರ್ಶನ್ ಗೆ ಕೋಟಿ ಕೋಟಿ ವಂಚಿಸಲು …

Read More »

ಬೆಳಗಾವಿಯ ವಿವಿಧ ಪ್ರವಾಸಿ ತಾಣಗಳಿಗೆ ವಿಶೇಷ ಬಸ್ ಗಳ ಸೌಲಭ್ಯ!

ಬೆಳಗಾವಿ:ಉತ್ತರ ಕರ್ನಾಟಕ ಭಾಗದ ಕಾಶ್ಮೀರ ಎಂದು ಕರೆಸಿಕೊಳ್ಳುವ ಕುಂದಾನಗರಿ ಬೆಳಗಾವಿಯಲ್ಲಿ ಹಲವು ಪ್ರೇಕ್ಷಣೀಯ ಸ್ಥಳಗಳಿವೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ NWKRTC ವಿಭಾಗ, ಪ್ರವಾಸಿಗರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಮಳೆಗಾಲ ಬಂದರೆ ಸಾಕು ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಿಂದ ಪ್ರವಾಸಿಗರು ಬೆಳಗಾವಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಇದೀಗ ಲಾಕ್‌ಡೌನ್ ತೆರವಾಗಿದ್ದು, ಉತ್ತಮ ಮಳೆ ಕೂಡ ಆಗುತ್ತಿರುವುದರಿಂದ, ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಅಧಿಕವಾಗಿದೆ. ಪ್ರವಾಸಿ …

Read More »

ಕಾಂಗ್ರೆಸ್ ಪಕ್ಷದಲ್ಲಿ ಬಾರಿ ಬದಲಾವಣೆ ಸಾಧ್ಯತೆ, ಮಲ್ಲಿಕಾರ್ಜುನ ಖರ್ಗೆಗೆ ಉನ್ನತ ಜವಾಬ್ಧಾರಿ?

ನವದೆಹಲಿ: ಉತ್ತರಪ್ರದೇಶ ಮತ್ತು ಪಂಜಾಬ್‌ನಂತಹ ಪ್ರಮುಖ ರಾಜ್ಯಗಳ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್‌ ತನ್ನ ಸಂಘಟನಾತ್ಮಕ ಸ್ವರೂಪದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಯುವ ನಾಯಕ ಸಚಿನ್‌ ಪೈಲಟ್‌, ಟಿ.ಎಸ್‌.ಸಿಂಗ್‌ ದೇವ್‌ ಅವರು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಇಷ್ಟಾದರೂ ಗಾಂಧಿ ಕುಟುಂಬದವರೇ ಪಕ್ಷದ ಅಗ್ರನಾಯಕತ್ವ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ರಾಹುಲ್‌ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನ …

Read More »

ಬೆಳೆದ ಬೆಳೆಗೆ ರೋಗ;ನಷ್ಟದಿಂದ ಬೆಳೆದಿದ್ದ ದಾಳಿಂಬೆ ತೋಟ ನಾಶ ಪಡೆಸಿದ ಬೆಳೆಗಾರ!

ಬೆಳಗಾವಿ: ಬೆಳೆದ ಬೆಳೆಗೆ ರೋಗ ತಗುಲಿದ್ದು ಯುವ ರೈತ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ದಾಳಿಂಬೆ ತೋಟವನ್ನು ನಾಶಪಡಿಸಿರುವ ಘಟನೆ ಅಥಣಿ ತಾಲೂಕಿನ ಆಜೂರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಜೂರ ಗ್ರಾಮದ ರೈತ ನವನಾಥ ಮಾನೆ ಎಂಬುವವರು ಸುಮಾರು 6 ವರ್ಷಗಳಿಂದ ಬೆಳೆಸುತ್ತಾ ಬಂದಿದ್ದ ದಾಳಿಂಬೆ ತೋಟವನ್ನು ತಾವೆ ಸ್ವತಃ ನಾಶ ಮಾಡಿದ್ದಾರೆ. ಪ್ರತಿ ವರ್ಷ ಸುಮಾರು 4-5 ಲಕ್ಷದವರೆಗೆ ದಾಳಿಂಬೆ ತೋಟದ ನಿರ್ವಹಣೆಗೆ ಖರ್ಚು ಮಾಡಿರುವ …

Read More »

ಕೃಷ್ಣಾ ನದಿ ಪಾತ್ರದ ಜನರಿಗೆ ಮಳೆ ಭೀತಿ; ಡಂಗುರ ಸಾರಿ ಎಚ್ಚರಿಕೆ!

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಜನರಿಗೆ ಆತಂಕ ಶುರುವಾಗಿದೆ. ಜುಲೈ 9ರಿಂದ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೃಷ್ಣಾ ನದಿ ಪಾತ್ರದ ಜುಗುಳ, ಮಂಗಾವತಿ, ಶಹಾಪೂರ ಕುಸನಾಳ, ಮೊಳವಾಡ, ಉಗಾರ್ ಕೆಎಚ್, ಬಣಜವಾಡ ಹಾಗೂ ಕಿತ್ತೂರ ಗ್ರಾಮಗಳಲ್ಲಿ ಡಂಗೂರ ಸಾರುವ ಮೂಲಕ …

Read More »

ಆನ್‌ಲೈನ್ ಕ್ಲಾಸ್‌ಗಾಗಿ ನೆಟ್‌ವರ್ಕ್‌ ಸಿಗದೆ ವಿದ್ಯಾರ್ಥಿಗಳು ಪರದಾಟ: ಸರಕಾರದ ವಿರುದ್ಧ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ .

ಬೆಳಗಾವಿ: ಆನ್‌ಲೈನ್ ಕ್ಲಾಸ್‌ಗಾಗಿ ನೆಟ್‌ವರ್ಕ್‌ ಸಿಗದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಖಾನಾಪುರ ತಾಲೂಕಿನ ಮಾನ್, ಸಡಾ, ಪಾರವಾಡ, ಚಿಗುಲೆ ಗ್ರಾಮದ ಮಕ್ಕಳು ನೆರೆಯ ಮಹಾರಾಷ್ಟ್ರದ ಮೊಬೈಲ್ ನೆಟ್ವರ್ಕ್‌ಗಾಗಿ ಗುಡ್ಡ ಹತ್ತುತ್ತಿದ್ದಾರೆ. ಆದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಲ್ಡ್ ಗವರ್ನನ್ಸ್, ಫೇಲ್ಡ್ …

Read More »