Breaking News

Daily Archives: ಜುಲೈ 14, 2021

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈ ಜೋಡಿಸಿ,ಪ್ರಗತಿ ಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ.

  ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ …

Read More »

ಲಂಚ ಪಡೆಯುತ್ತಿದ್ದ ನಗರಸಭೆ ಎಇಇ ಎಸಿಬಿ ಬಲೆಗೆ!

ಗದಗ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ -ಬೆಟಗೇರಿ ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವರ್ಧಮಾನ ಎಸ್. ಹುದ್ದಾರ ಅವರು ಸಿಕ್ಕಿಬಿದ್ದಿದ್ದಾರೆ. ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರನಿಗೆ ಅನುದಾನ ಬಿಡುಗಡೆ ಮಾಡಲು 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಅಬ್ದುಲ್ ಸಲಾಂ ಮನಿಯಾರ್ ಎಂಬುವವರು ಎಸಿಬಿ ಅಧಿಕಾರಿಳಿಗೆ ದೂರು ನೀಡಿದ್ದರು. …

Read More »

ಪ್ರೀತಿಗಾಗಿ ತಾಯಿ ವಿರುದ್ಧವೇ ಎಸ್ಪಿಗೆ ದೂರು ಕೊಟ್ಟ ಮಗಳು.

ಗದಗ​: ಮಹಿಳಾ ಪೊಲೀಸ್​ ಸಬ್ ​ಇನ್​ಸ್ಪೆಕ್ಟರ್​ ಮಗಳೊಬ್ಬಳು ಪ್ರಿಯಕರನೊಂದಿಗೆ ಮನೆ ಬಿಟ್ಟು ಹೋಗಿ ಮದುವೆ ಮಾಡಿಕೊಂಡ ಪ್ರಕರಣವೀಗ ಎಸ್ಪಿ ಅಂಗಳಕ್ಕೆ ಬಂದಿದೆ. ನಾವಿಬ್ಬರೂ 7 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ನಮ್ಮಿಬ್ಬರ ಮದುವೆಗೆ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ. ಹಾಗಾಗಿ ನಾವು ಬೇರೆಡೆ ಹೋಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆ. ಪಿಎಸ್​ಐ ಆಗಿರುವ ನನ್ನ ತಾಯಿಯೇ ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಅವರು ನಮ್ಮನ್ನು ಬದುಕಲು ಬಿಡಲ್ಲ. ನಮಗೆ ರಕ್ಷಣೆ ಕೊಡಿ ಎಂದು ತಾಯಿ ವಿರುದ್ಧವೇ ಯುವತಿ …

Read More »

ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು’ ಗೃಹ ಇಲಾಖೆ ಎಚ್ಚರಿಕೆ

ನವದೆಹಲಿ: ಗಿರಿಧಾಮಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹಸಚಿವಾಲಯವು ಬುಧವಾರ ಸೂಚನೆ ನೀಡಿದೆ. ಈ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, ‘ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ …

Read More »

ಕೆಎಲ್ ಇ ಕಾಲೇಜು ಮುಂದೆ ಪ್ರತಿಭಟನೆ!

ಬೆಂಗಳೂರು: ನಗರದ ಕರ್ನಾಟಕ ಲಿಂಗಾಯತ ಎಜುಕೇಷನ್​ ಸೊಸೈಟಿ(KLE) ಕಾಲೇಜು ಆಡಳಿತ ಮಂಡಳಿ ವಿರುದ್ಧ ಕಾಲೇಜು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಜಾಜಿನಗರದ ಸೆಕೆಂಡ್​ ಬ್ಲಾಕ್​ನಲ್ಲಿರುವ ಕೆಎಲ್​ಇ ಕಾಲೇಜಿನ ಸಿಬ್ಬಂದಿಯನ್ನು ಆಡಳಿತ ಮಂಡಳಿ ಏಕಾಏಕಿ ಕೆಲಸದಿಂದ ವಜಾಗೊಳಿಸಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಕೆಲಸದಿಂದ ತೆಗೆದು ಹಾಕಿರುವುದನ್ನು ವಿರೋಧಿಸಿ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದು, ವಿದ್ಯಾರ್ಥಿಗಳು ಕೂಡ ಪ್ರತಿಭಟನೆ ಸಾಥ್​ ನೀಡಿದ್ದಾರೆ.

Read More »

ಕಂಟೈನರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವು!

ಬೆಳಗಾವಿ: ಕಂಟೈನರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡೂ ವಾಹನಗಳ ಚಾಲಕರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಸುತಗಟ್ಟಿ ಬಳಿ ಇಂದು ನಸುಕಿನ ಜಾವ ನಡೆದಿದೆ. ಮಹಾರಾಷ್ಟ್ರದ ಬೀಡ್ ಮೂಲದ ಲಾರಿ ಚಾಲಕ ರಾಜೇಂದ್ರ ಡೊಯ್ಪಡೆ ಹಾಗೂ ಕಂಟೈನರ್ ಚಾಲಕ ನೀರಜ್ ಮೃತಪಟ್ಟ ವ್ಯಕ್ತಿಗಳು. ಹಾವೇರಿ ಜಿಲ್ಲೆಯ ಶಿಗ್ಗಾವಿಯಿಂದ ಮಹಾರಾಷ್ಟ್ರದ ಕಡೆಗೆ ಜೋಳದ ಹಿಟ್ಟು ತುಂಬಿಕೊಂಡು ಬರುತ್ತಿದ್ದ ಕಂಟೈನರ್ ಸುತಗಟ್ಟಿ ಇಳಿಜರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ …

Read More »

ಕುಡಿದ ಅಮಲಿನಲ್ಲಿ ರೈಲಿಗೆ ತಲೆ ಕೊಟ್ಟ ವ್ಯಕ್ತಿ.

ಘಟಪ್ರಭಾ :ಕುಡಿದ ಅಮಲಿನಲ್ಲಿ ರೈಲಿಗೆ ವ್ಯಕ್ತಿಯೊರ್ವ ತಲೆ ಕೊಟ್ಟ ಘಟನೆ ನಿನ್ನೆ ರಾತ್ರಿ ಘಟಪ್ರಭಾ ರೈಲ್ವೆ ಗೇಟ್ ಹತ್ತಿರ ನಡೆದಿದೆ. ಮೃತ ವ್ಯಕ್ತಿಯನ್ನು ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ನಿಂಗಪ್ಪ ಗವಾನಿ(55) ಎಂದು ತಿಳಿದು ಬಂದಿದೆ. ಈತ ಕಳೆದ ಕೆಲವು ವರ್ಷಗಳಿಂದ ಮಲ್ಲಾಪೂರ ಪಿ.ಜಿಯ ಒಬ್ಬರ ಹೊಲಗದ್ದೆಯಲ್ಲಿ ಕುಟುಂಬ ಸಮೇತ ದುಡಿಯಲು ಇದ್ದನೆಂದು ತಿಳಿದು ಬಂದಿದೆ. ಈತ ಕುಡಿತದ ಚಟದ ಹಿಂದೆ ಬಿದ್ದು, ಮದ್ಯದ ದಾಸನಾಗಿದ್ದನೆಂದು ಹೇಳಲಾಗುತ್ತಿದೆ. ಈತ ಕುಡಿಯಲು …

Read More »

ಬೆಳಗಾವಿ ಮಹಾನಗರ ಪಾಲಿಕೆ ರಾರಾಜಿಸುತ್ತಿದೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಧ್ವಜ.

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ದ್ವಾರದ ಬಳಿಯ ಧ್ವಜಸ್ತಂಭದಲ್ಲಿದ್ದ ಹಳೆಯದಾಗಿದ್ದ ಕನ್ನಡ ಬಾವುಟವನ್ನು ಬದಲಿಸಿ, ಹೊಸದನ್ನು ಮಂಗಳವಾರ ಹಾಕಲಾಗಿದೆ. ಇದರೊಂದಿಗೆ ಕನ್ನಡ ಹೋರಾಟಗಾರರ ಒತ್ತಾಯಕ್ಕೆ ಮನ್ನಣೆ ಸಿಕ್ಕಂತಾಗಿದೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಧ್ವಜ ರಾರಾಜಿಸುತ್ತಿದೆ. ಹಳೆಯ ಬಾವುಟವನ್ನು ಬದಲಿಸಿ ಹೊಸದಾಗಿ ಧ್ವಜಾರೋಹಣಕ್ಕೆ ಮುಂದಾಗಿದ್ದ ಹಲವು ಜನ ಕನ್ನಡ ಹೋರಾಟಗಾರರನ್ನು ಜು.5ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಧ್ವಜವನ್ನು ಕನ್ನಡ ಹೋರಾಟಗಾರರೇ ಕಳೆದ ವರ್ಷ ಡಿ.28ರಂದು ಸ್ಥಾಪಿಸಿದ್ದರು. ಬಾವುಟದ ಬಣ್ಣ ಮಾಸಿ …

Read More »

ಸಾರಿಗೆ ಸಚಿವರೇ ನಿಮ್ಮ ತವರು ಜಿಲ್ಲೆಯಲ್ಲೇ ಹೊಂಡ-ಗುಂಡಿ ಕೆಸೆರು ಗದ್ದೆಯಂತಾಗಿದೆ ಬೆಳಗಾವಿ ಬಸ್ ನಿಲ್ದಾಣ.

ಬೆಳಗಾವಿ: ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ನಿಲ್ದಾಣದ ಮರು ನಿರ್ಮಾಣ ಕಾಮಗಾರಿಯು ಕುಂಟುತ್ತಾ ಸಾಗಿರುವುದು ಪ್ರಯಾಣಿಕರಿಗೆ ಶಾಪವಾಗಿ ಪರಿಣಮಿಸಿದೆ. ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳನ್ನು ಸಂಪರ್ಕಿಸುವ ಬಸ್‌ಗಳ ಪ್ರಮುಖ ನಿಲ್ದಾಣ ಎಂಬ ಹೆಗ್ಗಳಿಕೆ ಗಳಿಸಿದ್ದು, ಸಿದ್ಧಗೊಳ್ಳುವುದು ಯಾವಾಗ ಎನ್ನುವ ಪ್ರಶ್ನೆ ಪ್ರಯಾಣಿಕರಿಂದ ಕೇಳಿಬರುತ್ತಿದೆ. ಸದ್ಯ ಮಳೆಗಾಲವಾದ್ದರಿಂದ ಆವರಣವೆಲ್ಲವೂ ಕೆಸೆರು ಗದ್ದೆಯಂತಾಗಿದೆ. ಹೊಂಡ-ಗುಂಡಿಯೊಳಗೆ ಸರ್ಕಸ್ ಮಾಡಿಕೊಂಡು ಸಾಗಬೇಕಾದ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ …

Read More »

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ: ಶಾಸಕ ಅನಿಲ ಬೆನಕೆ

ಬೆಳಗಾವಿ: ‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಅಧಿಕಾರಿಗಳು ಆದ್ಯತೆ ನೀಡುತ್ತಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು. ನಗರದ ಸುರೇಶ ಯಾದವ ಪ್ರತಿಷ್ಠಾನದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿಗೆ ವಿತರಿಸಲು ನೀಡಲಾದ 13ಸಾವಿರ ಮಾಸ್ಕ್‌ಗಳನ್ನು ಡಿಡಿಪಿಐ ಎ.ಬಿ. ಪುಂಡಲೀಕ ಅವರಿಗೆ ಬುಧವಾರ ಹಸ್ತಾಂತರಿಸಿ ಅವರು ಮಾತನಾಡಿದರು. ‘ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ …

Read More »