ನವ ದೆಹಲಿ, ಜು. 17: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. “2023ರಲ್ಲಿ ನಡೆಯುವ ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ” ಎಂದು ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಮಾಹಿತಿ ಕೊಟ್ಟಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ …
Read More »Daily Archives: ಜುಲೈ 17, 2021
ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಹೊರ ಹಾಕಿದ ತಹಶೀಲ್ದಾರ.
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …
Read More »ಪದವಿ ಕಾಲೇಜುಗಳ ಆರಂಭದ ಕುರಿತು ನೂತನ ಮಾರ್ಗಸೂಚಿ ಪ್ರಕಟ!
ನವದೆಹಲಿ : ಪದವಿ ಕಾಲೇಜುಗಳ ಆರಂಭದ ಕುರಿತಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಕ್ಟೋಬರ್ 1 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದೆ. ಯುಜಿಸಿ ಮಾರ್ಗಸೂಚಿ ಪ್ರಕಾರ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷ / ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ ಲೈನ್, ಆಫ್ ಲೈನ್ ಅಥವಾ ಬ್ಲೆಂಡ್ ಮಾಡಿದ ಮೋಡ್ ನಲ್ಲಿ ಆಗಸ್ಟ್ 31 ರೊಳಗೆ ಪೂರ್ಣಗೊಳಿಸಬೇಕು. ಇದಲ್ಲದೆ, ಆಂತರಿಕ ಮೌಲ್ಯಮಾಪನ ಮತ್ತು …
Read More »ಬಾಕಿ ಉಳಿದಿರುವ ಡಿಪ್ಲೊಮಾ, ಪದವಿ ಪರೀಕ್ಷೆಗಳಿಗೆ ದಿನಾಂಕ ನಿಗದಿ
ಬೆಂಗಳೂರು: ಪದವಿ ಮತ್ತು ಡಿಪ್ಲೊಮೊ ಸೆಮಿಸ್ಟರ್‌ಗಳ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಕ್ರಮವಾಗಿ ಅಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಒಳಗಾಗಿ ಮುಗಿಸಬೇಕು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಎಲ್ಲ ವಿಶ್ವವಿದ್ಯಾಲಯ ಹಾಗೂ ಪಾಲಿಟೆಕ್ನಿಕ್‌ಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರದಂದು ಪರೀಕ್ಷೆಗಳು ಹಾಗೂ ಕಾಲೇಜುಗಳನ್ನು ತೆರೆಯುವ ಬಗ್ಗೆ ಉನ್ನತ ಅಧಿಕಾರಿಗಳು ಹಾಗೂ ಉನ್ನತ ಶಿಕ್ಷಣ ಮಂಡಳಿ ಸದಸ್ಯರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ …
Read More »