Breaking News

Daily Archives: ಜುಲೈ 18, 2021

ಲಂಚ ಪಡೆಯುವ ಪ್ರಕರಣದಲ್ಲಿ ಕಂದಾಯ ಇಲಾಖೆ ನಂ 1.

ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಘಟಕದಲ್ಲಿ ದಾಖಲಾಗಿರುವ ಇದುವರೆಗಿನ ಒಟ್ಟಾರೆ ಲಂಚ ಪಡೆದ ಪ್ರಕರಣಗಳ ಪೈಕಿ ಸರ್ಕಾರದ ವಿವಿಧ ಇಲಾಖೆಗಳಿಗೆ ಮಾತೃ ಇಲಾಖೆ ಎನಿಸಿಕೊಂಡಿರುವ ಕಂದಾಯ ಇಲಾಖೆ ಮೊದಲ ಸ್ಥಾನದಲ್ಲಿದೆ. ಹೌದು, ಜಿಲ್ಲೆಯಲ್ಲಿ 2016 ರಿಂದ ತನ್ನ ಕಾರ್ಯಾರಂಭ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಲ್ಲಿ ದಾಖಲಾಗಿರುವ ಅಂಕಿ, ಅಂಶಗಳೇ ಜಿಲ್ಲೆಯಲ್ಲಿ ಇತರೇ ಸರ್ಕಾರಿ ಇಲಾಖೆಗಳಗಿಂತ ಸಾರ್ವಜನಿಕ ಸಂಪರ್ಕ ಹೆಚ್ಚಿರುವ ಕಂದಾಯ ಇಲಾಖೆಯಲ್ಲಿ ಮೀತಿ ಮೀರಿದ ಭ್ರಷ್ಟಾಚಾರ …

Read More »

ನಕಲಿ ಕೋವಿಡ ಪಾಸಿಟಿವ್ ರಿಪೋರ್ಟ್ ಸೃಷ್ಟಿಸಿದವರ ಬಂಧನ!

  ಬಾಗಲಕೋಟೆ: ನಕಲಿ ಗಂಟಲು ದ್ರವ ಮಾದರಿ ಸಂಗ್ರಹಿಸಿ ಅದನ್ನು ಕೋವಿಡ್ ಪಾಸಿಟಿವ್ ಎಂದು ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದಿಂದ ಪರಿಹಾರದ ಮೊತ್ತ ಪಡೆಯುವ ಪ್ರಯತ್ನ ನಡೆಸಿದ್ದ ಇಲ್ಲಿನ ಜಿಲ್ಲಾ ಆಸ್ಪತ್ರೆಯ ಇಬ್ಬರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿಯವರು ನಡೆಸುವ ಸಿಟಿ ಸ್ಕ್ಯಾನ್ ವಿಭಾಗದ ಸ್ಟಾಫ್ ನರ್ಸ್ ಬಸವರಾಜ ಬಿಲಕೇರಿ ಹಾಗೂ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಮೇಲೆ ನೇಮಕವಾಗಿದ್ದ ಡಾಟಾ ಎಂಟ್ರಿ ಆಪರೇಟರ್ ಬಸನಗೌಡ ಗಿರಿಯಪ್ಪಗೌಡ ಬಂಧಿತರು. …

Read More »

ಸೇತುವೆಯ ಮೇಲೆ ಮಳೆಯ ನೀರು,ಯುವಕರು ಸೇತುವೆ ದಾಟುವ ದುಸ್ಸಾಹಸ

ದಾವಣಗೆರೆ: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ದಾವಣಗೆರೆ ಸಮೀಪದ ಮಾಗಾನಹಳ್ಳಿ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ದಾವಣಗೆರೆ- ಹರಪನಹಳ್ಳಿ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಮಳೆ ಮುಂದುವರಿದರೆ ಈ ಭಾಗದ ಸಂಪರ್ಕ ಸ್ಥಗಿತವಾಗುವ ಭೀತಿ ಎದುರಾಗಿದೆ. ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದರೂ ಕೆಲವೊಂದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಕೆಲವು ಯುವಕರು ಸೇತುವೆ …

Read More »

2018 ರಲ್ಲಿ ಗೋಕಾಕ ನಿಪ್ಪಾಣಿಗಳ ಜೊತೆ ಮಂಜೂರಾಗಿದ್ದ ಚಿಕ್ಕೋಡಿ ಆಸ್ಪತ್ರೆಯ ಕಟ್ಟಡ ಕಾಮಗಾರಿ ಇನ್ನೂ ಮುಗಿದಿಲ್ಲ.!

ಚಿಕ್ಕೋಡಿ: ಚಿಕ್ಕ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕೋಡಿಯಲ್ಲಿ ಆರಂಭವಾದ 20 ಕೋಟಿ ರೂ ವೆಚ್ಚದ ತಾಯಿ-ಮಗು ಆಸ್ಪತ್ರೆಯ ಕಟ್ಟಡ ಕಾಮಗಾರಿ ಕುಂಟುತ್ತಾ ಸಾಗಿರುವುದು ಗಡಿ ಜನರಲ್ಲಿ ಅಸಮಾಧಾನ ಮೂಡಿಸಿದೆ. ಮೂರನೆ ಅಲೆ ಬರುವುದರೊಳಗೆ ಆಸ್ಪತ್ರೆ ಕಟ್ಟಡ ಕಾಮಗಾರಿ ಮುಕ್ತಾಯಗೊಳಿಸಿ ಮಕ್ಕಳ ಚಿಕಿತ್ಸೆಗೆ ಬೇಕಾಗುವ ಮೂಲಭೂತ ಸೌಲಭ್ಯ ಒದಗಿಸಲು ಆರೋಗ್ಯ ಇಲಾಖೆ ಮುಂದಾಗಬೇಕು ಎನ್ನುವುದು ನಿಯೋಜಿತ ಚಿಕ್ಕೋಡಿ ಜಿಲ್ಲೆಯ ಜನರ ಒತ್ತಾಯವಾಗಿದೆ. ನಗರದ ಹೊರವಲಯದ ಬಾಣಂತಿಕೋಡಿ ಬಳಿ 100 ಹಾಸಿಗೆಯ ತಾಯಿ-ಮಗು …

Read More »

BREAKING NEWS : ನಾಳೆಯಿಂದ ‘ಥಿಯೇಟರ್’, ಜುಲೈ.26ರಿಂದ ‘ಪದವಿ ಕಾಲೇಜು’ಗಳ ಆರಂಭ!

ಬೆಂಗಳೂರು : ಇಂದು ಮುಖ್ಯಮಂತ್ರಿಗಳು ತಮ್ಮ ನಿವಾಸದಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದರು. ಈ ಸಭೆಯಲ್ಲಿ ನಾಳೆಯಿಂದ ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ಚಿತ್ರಮಂದಿರ ಹಾಗೂ ಜುಲೈ.26ರಿಂದ ಪದವಿ ಕಾಲೇಜುಗಳನ್ನು ತೆರೆಯೋದಕ್ಕೆ ಅನುಮತಿಸುವಂತ ನಿರ್ಣಯವನ್ನು ಕೈಗೊಂಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳಿಸಲಾಗುತ್ತಿದೆ. ಈ ಮಾರ್ಗಸೂಚಿಯಂತೆ ನೈಟ್ ಕರ್ಪ್ಯುನ್ನು ರಾತ್ರಿ 10 …

Read More »

ಗೋಕಾಕದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

ಗೋಕಾಕ: ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು ,ಮಂಜು ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜು ಮುರಕಿಭಾವಿ,ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟ‌ನೆ ನಡೆದಿದೆ.

Read More »