Breaking News

Daily Archives: ಜುಲೈ 19, 2021

ಬೆಳಗಾವಿಯ ಬಿಜೆಪಿ ಗೌಪ್ಯ ಸಭೆಯಲ್ಲಿ ನಡಿತಾ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ?

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಆಡಳಿತಾರೂಢ ಬಿಜೆಪಿ ಪ್ರಮುಖರ ಸಭೆ ಇಲ್ಲಿ ಸೋಮವಾರ ಜರುಗಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪಕ್ಷದ ಪ್ರಮುಖರ ಸಭೆ ಗೌಪ್ಯವಾಗಿ ನಡೆದಿರುವುದು ಹಲವು ವಿಶ್ಲೇಷಣೆಗೆ ಮತ್ತು ಚರ್ಚೆಗಳಿಗೆ ಗ್ರಾಸವಾಗಿದೆ. ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ನೇತೃತ್ವದಲ್ಲಿ ನಡೆದ ಚರ್ಚೆಯಲ್ಲಿ ಸಚಿವ ಉಮೇಶ ಕತ್ತಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಮಹೇಶ ಕುಮಠಳ್ಳಿ, ದುರ್ಯೋಧನ ಐಹೊಳೆ, …

Read More »

ಶೀಘ್ರವೇ ಗೋಕಾಕ-ಮೂಡಲಗಿಯಲ್ಲಿ ಹಾಲು ಶಿಥಿಲೀಕರಣ ಘಟಕಗಳು ಆರಂಭ : ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ ೧೬ ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ ೧೦ ಸಾವಿರ ರೂ.ಗಳ ಸಹಾಯಧನದ ಚೆಕ್‌ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ ೧೬ ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‌ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ ನಿವೃತ್ತಿಯಾದ …

Read More »

ಎಟಿಎಂನಿಂದ ಹಣ ದೋಚಲು ಬಂದ ಖದೀಮರ ಗ್ಯಾಂಗ್​​!

ಶಿವಮೊಗ್ಗ:ಖದೀಮರ ಗ್ಯಾಂಗ್​​ ಎಟಿಎಂನಿಂದ ಹಣ ದೋಚಲು ಯತ್ನಿಸಿರುವ ಘಟನೆ ಜಿಲ್ಲೆಯ ಬಿ.ಹೆಚ್ ರಸ್ತೆಯಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್​ಗೆ ಸಂಬಂಧಪಟ್ಟ ಎಟಿಎಂಗೆ ನುಗ್ಗಿದ ಖದೀಮರು, ಮಿಷನ್​ನ್ನ ಸಂಪೂರ್ಣವಾಗಿ ಮುರಿದು ಹಾಕಿದ್ದಾರೆ. ಬಳಿಕ ಹಣ ಬಾರದೇ ಕೃತ್ಯ ಅರ್ಧಕ್ಕೆ ಕೈ ಬಿಟ್ಟು ಪರಾರಿಯಾಗಿದ್ದಾರೆ. ನಗರದ ದೊಡ್ಡಪೇಟೆ ಠಾಣೆ ಪೊಲಿಸರಿಂದ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನ …

Read More »

ಜುಲೈ 30ರ ಬಳಿಕ‌ ಗಡ್ಡದ ಮಹಿಮೆ ರಾಜ್ಯಕ್ಕೆ ತಿಳಿಯಲಿದೆ ಬಸನಗೌಡ ಪಾಟೀಲ ಯತ್ನಾಳ ಅಚ್ಚರಿ ಹೇಳಿಕೆ.

ವಿಜಯಪುರ: ಮುಖ್ಯಮಂತ್ರಿ, ಸಚಿವರ ಬದಲಾವಣೆ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿರುವ ಆಡಿಯೊ ಲೀಕ್ ಪ್ರಕರಣ ಕುರಿತು ತನಿಖೆಯಾಗಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ. ನಗರದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿರುವವರು ಸಿಸಿಬಿಯಲ್ಲಿದ್ದಾರೆ. ಹೀಗಾಗಿ ಎಲ್ಲವೂ ಸೋರಿಕೆಯಾಗುತ್ತಿದೆ ಎಂದು ಆರೋಪಿಸಿದರು. ಖಾಸಗಿಯಾಗಿ ಮಾತನಾಡಿದ್ದನ್ನ ರೆಕಾರ್ಡ್ ಮಾಡಿಕೊಳ್ಳೊದು …

Read More »

ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!

ಬೆಂಗಳೂರು : ನಾಳೆ ಸಂಜೆ 4.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾಳೆ ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆ 4.30 ಕ್ಕೆ ಇಲಾಖೆಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ …

Read More »

ಸಿಎಂ ಸೀಟ್ ಖಾಲಿ ಆದ್ರೆ ಮುಂದಿನ ಸಿಎಂ ನಾನೇ,ಮುಖ್ಯಮಂತ್ರಿ ಸ್ಥಾನಕ್ಕೆ ಕತ್ತಿ ಮತ್ತೆ ವರಸೆ.

ಬೆಳಗಾವಿ: ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಯಾಗುವ ಇಂಗಿತ ವ್ಯಕ್ತಪಡಿಸಿದ್ದ ಸಚಿವ ಉಮೇಶ್​ ಕತ್ತಿ, ಇದೀಗ ಮತ್ತೊಮ್ಮೆ ಅದೇ ಆಸೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಪುನಃ ಚರ್ಚೆ ಆಗಲಾರಂಭಿಸಿರುವ ಬೆನ್ನಿಗೇ ಅವರು ತಮ್ಮ ಆಸೆಯನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಕರೆದ ಸಂಘಟನಾತ್ಮಕ ಸಭೆಗೆ ಬಂದಿದ್ದ ಸಂದರ್ಭದಲ್ಲಿ ಮಾತನಾಡಿರುವ ಆಹಾರ ಸಚಿವ ಉಮೇಶ್​ ಕತ್ತಿ, ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ, …

Read More »

ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಗೂಟಕ್ಕೆ ಅಂಟಿಕೊಂಡಿಲ್ಲ: ಸಚಿವ ಕೆ.ಎಸ್.ಈಶ್ವರಪ್ಪ ಗರಂ.

ಶಿವಮೊಗ್ಗ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನನ್ನು ಯಾರೂ ಏನೂ ಮಾಡಲು ಆಗದು, ನಾನು ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದವನು ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ, ನನ್ನ ವಿರುದ್ಧ ಷಡ್ಯಂತ್ರ ನಡೆದರೂ ತಲೆ ಕೆಡಿಸಿಕೊಳ್ಳಲ್ಲಾ, ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಗೂಟಕ್ಕೆ ಅಂಟಿಕೊಂಡಿಲ್ಲ ಎಂದು ಗರಂ ಆಗಿದ್ದಾರೆ. ನನಗೆ ನಮ್ಮ ಪಕ್ಷದ …

Read More »

ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇವೆ; ಮಧ್ಯಂತರ ಚುನಾವಣೆ ನಡೆದರೂ ನಡೆಯಬಹುದು: ಸತೀಶ್ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ …

Read More »