ಬೆಂಗಳೂರು: ವಿಧಾನಸೌಧದ ಕಾರಿಡಾರ್ನಲ್ಲಿ ಮಾಧ್ಯಮ ನಿರ್ಬಂಧ ಎಂಬ ಆದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಪಸ್ ಪಡೆದಿದ್ದಾರೆ. ಈ ಆದೇಶ ಹಿಂಪಡೆಯದಿದ್ದರೆ ಎಲ್ಲಾ ಸರ್ಕಾರಿ ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿಗಳ ಕಾರ್ಯಕ್ರಮ ಬಾಯ್ಕಾಟ್ ಮಾಡಲು ಮಾಧ್ಯಮ ಪ್ರತಿನಿಧಿಗಳು ತೀರ್ಮಾನಿಸಿದ್ದರು. ಆ ಹಿನ್ನೆಲೆಯಲ್ಲಿ, ಇದೀಗ ವಿಧಾನಸೌಧದ ಕಾರಿಡಾರ್ನಲ್ಲಿ ಮಾಧ್ಯಮ ನಿರ್ಬಂಧ ಆದೇಶ ಹಿಂಪಡೆಯಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಮಾಧ್ಯಮ ನಿರ್ಬಂಧ ಹಿಂಪಡೆಯುವ ಬಗ್ಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ಗೆ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ …
Read More »Daily Archives: ಜುಲೈ 20, 2021
ಗ್ಯಾಂಗ್ ವಾರ್, ಹೆದ್ದಾರಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಹೈಟೆಕ್ ದರೋಡೆಕೋರರ ಬಂಧನ.
ಚಿಕ್ಕಮಗಳೂರು: ಗ್ಯಾಂಗ್ ವಾರ್, ಹೆದ್ದಾರಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಹೈಟೆಕ್ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Read More »ಮಾರ್ಗಸೂಚಿ ಅನುಸರಿಸಿ ಬಕ್ರೀದ್ ಹಬ್ಬ ಆಚರಿಸಿ: ಡಿಸಿ ಎಮ್.ಜಿ.ಹಿರೇಮಠ ಆದೇಶ
ಬೆಳಗಾವಿ: ಬೆಳಗಾವಿ ಜಿಲ್ಲೆಯಾದ್ಯಂತ (ಬೆಳಗಾವಿ ತಾಲೂಕು ಹೊರತುಪಡಿಸಿ) ಬಕ್ರೀದ್ ಹಬ್ಬವನ್ನು ಆಚರಿಸಲಿರುವ ಪ್ರಯುಕ್ತ ಜು.21 ರ ಬೆಳಿಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲ ಮದ್ಯದ ಅಂಗಡಿ ಹಾಗೂ ಮದ್ಯ ತಯಾರಿಕಾ ಘಟಕಗಳನ್ನು ಬಂದ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಎಮ.ಜಿ.ಹಿರೇಮಠ ಅವರು ಸೂಚಿಸಿರುತ್ತಾರೆ. ಸಾರ್ವಜನಿಕ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳಲು ಮಾಲೀಕರು ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮದ್ಯದ ಅಂಗಡಿಗಳನ್ನು ಮತ್ತು …
Read More »ರೈತರಿಗೆ ಕೂಡಲೇ ರಸಗೊಬ್ಬರ ಪೂರೈಸಿ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ …
Read More »ಯಡಿಯೂರಪ್ಪರನ್ನು ತೆಗೆದರೆ ಬಿಜೆಪಿ ಹಾಳಾಗುತ್ತದೆ ಅನ್ನೋಕೆ ಶಾಮನೂರು, ಎಂ.ಬಿ.ಪಾಟೀಲ ಯಾರು?: ಬಸನಗೌಡ ಪಾಟೀಲ ಯತ್ನಾಳ
ವಿಜಯಪುರ: ಯಡಿಯೂರಪ್ಪ ಪರವಾಗಿ ಮಾತನಾಡುವ ನೈತಿಕತೆ ಕಾಂಗ್ರೆಸ್ ಲಿಂಗಾಯತ ನಾಯಕರಿಗಿಲ್ಲ. ಯಡಿಯೂರಪ್ಪ ಅವರನ್ನು ತೆಗೆದರೆ ಬಿಜೆಪಿ ಹಾಳಾಗುತ್ತದೆ ಅನ್ನೋಕೆ ಶಾಮನೂರು, ಎಂ.ಬಿ.ಪಾಟೀಲ ಯಾರು? ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡೋದು ಬಿಜೆಪಿ ಹೈಕಮಾಂಡ್ ಕೈಯಲ್ಲಿದೆ. ಬಿಜೆಪಿ ನಾಯಕತ್ವ, ಆಂತರಿಕ ವಿಚಾರದ ಬಗ್ಗೆ ಮಾತನಾಡೋಕೆ ಇವರ್ಯಾರು ಎಂದರು. ಲಿಂಗಾಯತರ ಮೂಲಕ ಬಿಜೆಪಿಯನ್ನ ಮುಗಿಸುವುದಕ್ಕೆ ಕಾಂಗ್ರೆಸ್ ಯೋಜನೆ …
Read More »ಜನರ ಸಮಸ್ಯೆಗೆ ಸ್ಪಂದಿಸುವುದೇ ನಮ್ಮ ಗುರಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಸವದತ್ತಿ: ಲೋಕಸಭಾ ಉಪಚುನಾವಣೆಯಲ್ಲಿ ಸೋತರೂ ಕೂಡ ಜನರ ಮನಸ್ಸಿನಲ್ಲಿ ನಾವಿದ್ದೇವೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಮಸ್ಯೆಗೆ ಸ್ಪಂದಿಸುವುದೇ ನಮ್ಮ ಗುರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಮತಕ್ಷೇತ್ರದ ಸತ್ತಿಗೇರಿ,ಸೊಪಡ್ಲಾ, ಯರಗಟ್ಟಿ ಹಾಗೂ ಇಟ್ನಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಂದು (ಮಂಗಳವಾರ) ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ಗ್ರಾಮದ ಜನರಿಗೆ ಖುದ್ದಾಗಿ ಭೇಟಿಯಾಗಿ ಧನ್ಯವಾದ ಸಲ್ಲಿಸಲು …
Read More »ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ!
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು …
Read More »ಶ್ರೀದೇವಿ ಇನ್ಸೂರೆನ್ಸ್ ಜೋನ್ ಉದ್ಘಾಟಸಿದ ಸತೀಶ್ ಜಾರಕಿಹೊಳಿ
ಸವದತ್ತಿ:ಕೆಪಿಸಿಸಿ ಕಾರ್ಯಾಧಕ್ಷ ಸತೀಶ ಜಾರಕಿಹೋಳಿ ಅವರು ಹಾಗೂ ಸವದತ್ತಿ ತಾಲೂಕಿನ ಕಾಂಗ್ರೆಸ್ ಮುಖಂಡ ಪಂಚನಗೌಡ ದ್ಯಾಮನಗೌಡ ಅವರ ನೇತೃತ್ವದಲ್ಲಿ ಯರಗಟ್ಟಿಯಲ್ಲಿ ಶ್ರೀದೇವಿ ಇನ್ಸೂರೆನ್ಸ್ ಜೋನ್ ಉದ್ಘಾಟನೆಯ ಮಾಡಲಾಯಿತು ಹಾಗೂ ಹೊಲಸೇಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಕಾಂಗ್ರೆಸ್ ಮುಖಂಡರು ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಸವದತ್ತಿ ತಾಲೂಕಿನ ಯುವ ನಾಯಕರು ಆಗಿರುವ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ,D.D. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ …
Read More »ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳು;ಪರಿಹಾರಕ್ಕೆ ಆಗ್ರಹ.
ಮದ್ದೂರು: ಕಲ್ಲು ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳಿಗೆ ಡಿಬಿಎಲ್ ಕಂಪನಿ ವಿರುದ್ಧ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಚಂದಹಳ್ಳಿದೊಡ್ಡಿ ಗ್ರಾಮಸ್ಥರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರೂಪಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಗ್ರಾಮದಮಹಿಳೆಯರು ತಾಲೂಕು ಆಡಳಿತ ಹಾಗೂ ದಿಲೀಪ್ ಬಿಲ್ಡ್ ಖಾನ್ ಕಂಪನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಬೆಳೆ ಬೆಳೆಯಲು ಕಷ್ಟ: ಮೈಸೂರು, …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕೆ ದಿನಾಂಕ ನಿಗದಿ.
ಬೆಂಗಳೂರು: ಇದೇ 19ರಂದು ನಡೆದ ಹಾಗೂ 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುರೇಶ್ ಕುಮಾರ್ ಹೇಳಿದರು. ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. …
Read More »