Breaking News

Daily Archives: ಜುಲೈ 30, 2021

ನನಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು BSY : ಯತ್ನಾಳ್ ಹೊಸ ಬಾಂಬ್

ವಿಜಯಪುರ : ನನಗೆ ಮುಖ್ಯಮಂತ್ರಿ ಆಗುವ ಅವಕಾಶ ತಪ್ಪಿಸಿದ್ದು ಬಿ.ಎಸ್. ಯಡಿಯೂರಪ್ಪ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನನಗೆ ಮುಖ್ಯಮಂತ್ರಿ ಆಗುವ ಅವಕಾಶವಿತ್ತು. ಆದರೆ ಯಡಿಯೂರಪ್ಪ ನನಗೆ ಅವಕಾಶ ತಪ್ಪಿಸಿದರು. ಯತ್ನಾಳ್ ಅವರನ್ನು ಸಿಎಂ ಮಾಡಿದ್ರೆ ಮೂರು ತಿಂಗಳಲ್ಲಿ ಸರ್ಕಾರ ಕೆಡವುತ್ತೆನೆಂದು ಕೇಂದ್ರದ ನಾಯಕರ ಮುಂದೆ ಯಡಿಯೂರಪ್ಪ ಬೆದರಿಕೆ ಹಾಕಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ನನಗೆ …

Read More »

ಹೊಸ ವಂಟಮುರಿ, ಮಲಹೋಳಿಯಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮುರಿ ಮತ್ತು ಮಲಹೋಳಿ ಗ್ರಾಮಗಳಿಗೆ ಇಂದು ಭೇಟಿ ನೀಡಿ, ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ರಾಹುಲ್ ಅವರು ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಬೆಳೆ ಹಾನಿಯನ್ನು ಪರಿಶೀಲಿಸಿ ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆಗಳ ವೀಕ್ಷಣೆ ಮಾಡಿದರು. ಹಾನಿಯ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ಅವರ ಗಮನಕ್ಕೆ ತಂದು, ಸಂತ್ರಸ್ತರಿಗೆ ಸರ್ಕಾರದಿಂದ …

Read More »

ದೆಹಲಿಯತ್ತ ಸಿಎಂ ಬೊಮ್ಮಾಯಿ, ಇಂದೇ ಫೈನಲ್ ಆಗುತ್ತಾ ಸಚಿವರ ಲಿಸ್ಟ್!

ಬೆಂಗಳೂರು: ಮುಖ್ಯಮಂತ್ರಿಯಾಗಿ ಚುಕ್ಕಾಣಿ ಹಿಡಿದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲ ಬಾರಿ ದೆಹಲಿ ವಿಮಾನ ಏರಿದ್ದಾರೆ. ಸಿಎಂ ದೆಹಲಿ ಭೇಟಿ ರಾಜ್ಯದ ಸಚಿವ ಸ್ಥಾನಾಕಾಂಕ್ಷಿಗಳ ನೀರಿಕ್ಷೆ ಹೆಚ್ಚಿಸುವಂತೆ ಮಾಡಿದೆ. ಸಿಎಂ ಬೊಮ್ಮಾಯಿ ಇಂದು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ತನ್ನನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲು ತಾನು ದೆಹಲಿಗೆ ಹೋಗುತ್ತಿರುವುದಾಗಿ ಬೊಮ್ಮಾಯಿ ಹೇಳಿಕೆ …

Read More »

ಬಸವರಾಜ ಬೊಮ್ಮಾಯಿ ಅವರು ಸಮತೋಲನ ಆಡಳಿತ ನೀಡುತ್ತಾರೆ :ಮುರುಘಾ ಶರಣರು

ಗೋಕಾಕ: ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ನೀಡಿದ ಹೊಸ ಯೋಜನೆಗಳನ್ನು ಮತ್ತು ಜನಹಿತ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಮೂಲಕ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮತೋಲನ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸವಿದೆ’ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಇಲ್ಲಿನ ಶೂನ್ಯ ಸಂಪಾದನಮಠದಲ್ಲಿ ಪಾದಪೂಜೆ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದರು. ‘ಬಸವರಾಜ ಅವರು ಯಡಿಯೂರಪ್ಪ ಮಾರ್ಗದರ್ಶನ ಪಡೆಯಲಿದ್ದಾರೆ. ರಾಜ್ಯದ ಗೃಹ ಮಂತ್ರಿಯಾಗಿ ಮತ್ತು …

Read More »

ಘಟಪ್ರಭೆ, ಮಲಪ್ರಭೆ ಅಬ್ಬರ ಕಡಿಮೆ, ಕೃಷ್ಣೆ ಯಥಾಸ್ಥಿತಿ

ಬೆಳಗಾವಿ/ಬಾಗಲಕೋಟೆ: ಜಿಲ್ಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ ತೀರದಲ್ಲಿರುವ ಚಿಕ್ಕೋಡಿ, ಅಥಣಿ, ಕಾಗವಾಡ, ರಾಯಬಾಗ ತಾಲ್ಲೂಕುಗಳಲ್ಲಿನ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಮಹಾರಾಷ್ಟ್ರದ ಕಡೆಯಿಂದ 3.43 ಲಕ್ಷ ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ಬುಧವಾರ 3.82 ಲಕ್ಷ ಕ್ಯುಸೆಕ್‌ ನೀರು ಬರುತ್ತಿತ್ತು. 24 ಗಂಟೆಗಳ ಅವಧಿಯಲ್ಲಿ ನೀರಿನ ಹರಿವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗುರು ವಾರ ಮಲಪ್ರಭಾ ಹಾಗೂ …

Read More »