Breaking News

Monthly Archives: ಜುಲೈ 2021

ಯಾವುದೇ ಸಮಸ್ಯೆಯಿದ್ದರೂ ಜನರು ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಮೂಡಲಗಿ: “ಜನರು ತಮ್ಮ ಯಾವುದೇ ಸಮಸ್ಯೆಯಿದ್ದರೂ ನೇರವಾಗಿ ನಮ್ಮನ್ನು ಭೇಟಿ ಮಾಡಬಹುದು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. “ಬೆಳಗಾವಿ ಲೋಕಸಭಾ ಚುನಾವಣೆಯ ನಂತರ ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಸಹಕಾರಕ್ಕೆ ನಾವು ಸದಾ ಸಿದ್ಧರಿದ್ದೇವೆ” ಎಂದು …

Read More »

ವಿದ್ಯುತ್ ಪೂರೈಕೆಯಲ್ಲಿನ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಿ: ಶಾಸಕ ಸತೀಶ ಜಾರಕಿಹೊಳಿ ಸೂಚನೆ

ಹುಕ್ಕೇರಿ: ತಾಲೂಕಿನ ಯಮಕನಮರಡಿ ವಿಧಾನಸಭೆ ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸಂಬಂಧಿತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಸತೀಶ ಜಾರಕಿಹೊಳಿ ಸೂಚಿಸಿದರು. ಪಟ್ಟಣದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಸಭಾಭವನದಲ್ಲಿ ಶುಕ್ರವಾರ ನಡೆದ ಗ್ರಾಹಕರು ಮತ್ತು ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು. ಹೊಲಗದ್ದೆಗಳು, ಗ್ರಾಹಕರಿಗೆ …

Read More »

ಪಶು ಕಟ್ಟಡ ನಿರ್ಮಾಣ ಕಾಮಗಾರಿಗೆ ಸತೀಶ ಜಾರಕಿಹೊಳಿ ಚಾಲನೆ

ಯಮಕನಮರಡಿ: ಯಮಕನಮರಡಿಯಲ್ಲಿ  ಆರ್ ಆಯ್ ಡಿಎಪ್ ಯೋಜನೆ ಅಡಿಯಲ್ಲಿ  43 ಲಕ್ಷ ರೂ. ವೆಚ್ಚದಲ್ಲಿ ಪಶು ಕಟ್ಟಡ  ನಿರ್ಮಾಣ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ  ಜಾರಕಿಹೊಳಿ ಅವರು ಗುರುವಾರ ಚಾಲನೆ ನೀಡಿದರು. ಈ ವೇಳೆ ಸತೀಶ  ಜಾರಕಿಹೊಳಿ ಅವರು ಮಾತನಾಡಿ, ಜಾನುವಾರುಗಳ ಪಾಲನೆ- ಪೋಷಣೆಗಾಗಿ  ಯಮಕನಮರಡಿಯಲ್ಲಿ ಪಶು ಕಚೇರಿ ಅಗತ್ಯವಿದೆ. ಹೀಗಾಗಿ ಸುಸಜ್ಜಿತವಾದ ಕಟ್ಟಡ ನಿರ್ಮಾಣಕ್ಕೆ  ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಓಂಕಾರ ತುಬಚಿ, ಕಿರಣ್ ರಜಪೂತ್ ಹಾಗೂ …

Read More »

ಎಸಿಬಿ ಬಲೆಗೆ ಬಿದ್ದ ಸದಲಗಾ ಪಿಎಸ್ಐ, ಇಬ್ಬರು ಪೇದೆಗಳು!

ಬೆಳಗಾವಿ: ‘ಅನಧಿಕೃತವಾಗಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ’ ಎಂದು ಹೆದರಿಸಿ ಅದರ ಮಾಲಿಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಇಬ್ಬರು ಕಾನ್ಸಟೆಬಲ್ ಗಳು ಭೃಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಇಂದು ಸಂಜೆ ಠಾಣೆಯ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪಿಎಸ್ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೆಬಲ್ ಗಳಾದ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ರೂ.೪೦ ಸಾವಿರ ಲಂಚ ಪಡೆಯುವಾಗ …

Read More »

ಕುಲಗೋಡ ಪಿಎಚ್‍ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕುಲಗೋಡದಲ್ಲಿ ನಾಡಕಛೇರಿ ಮಂಜೂರಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ಮೂಡಲಗಿ : ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೊರೋನಾ …

Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ. ಅಣ್ಣಾಮಲೈ ನೇಮಕ!

ಚೆನ್ನೈ: ಕರ್ನಾಟಕ ಕೇಡರ್​ನ ಮಾಜಿ ಐಪಿಎಸ್​​​​ ಅಧಿಕಾರಿ ಕೆ.ಅಣ್ಣಾಮಲೈಗೆ ಅದೃಷ್ಟ ಒಲಿದು ಬಂದಿದೆ. ಸಂಪುಟ ವಿಸ್ತರಣೆ ಬೆನ್ನಲ್ಲೇ ಅಣ್ಣಮಲೈರನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಎಲ್​.ಮುರುಗನ್​ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷರ ಹುದ್ದೆಗೆ ಅಣ್ಣಮಲೈರನ್ನು ನೇಮಿಸಲಾಗಿದೆ. ಖಡಕ್​​ ಅಧಿಕಾರಿಯಾಗಿ ಗುರುತ್ತಿಸಿಕೊಂಡಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು. ತಮಿಳುನಾಡಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಅವರಕುರುಚಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ …

Read More »

ಕೋವಿಡ್ ಮರಣ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ವಿತರಣೆ, ಬೆಳೆ ವಿಮೆ ಪರಿಹಾರ ವಿತರಣೆ ಸಮಸ್ಯೆ: ಶಾಸಕರ ಆಕ್ರೋಶ

ಬೆಳಗಾವಿ: ಎಲ್ಲರಿಗೂ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯೊಂದಿಗೆ ಪ್ರಧಾನಮಂತ್ರಿಗಳು ಜಲಜೀವನ ಮಿಷನ್ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಐದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕೇಂದ್ರ ಸರಕಾರದ ಈ ಹಣಕಾಸು ನೆರವು ಬಳಸಿಕೊಂಡು ಜಿಲ್ಲೆಯಲ್ಲಿ ಕುಡಿಯುವ ನೀರು ಒದಗಿಸುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಗುರುವಾರ (ಜು.8) ನಡೆದ 2021-22 ನೇ ಸಾಲಿನ …

Read More »

ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಲು ರಮೇಶ್ ಜಾರಕಿಹೊಳಿ ಪತ್ರ!

ಗೋಕಾಕ : ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಪತ್ರಗಳನ್ನು ಕಳುಹಿಸುವ ಮೂಲಕ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಹುಮ್ಮಸ್ಸು ತುಂಬಲು ಪ್ರಯತ್ನಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕರಿಗೆಲ್ಲ ಪತ್ರ (ಇನ್‌ಲ್ಯಾಂಡ್ ಲೆಟರ್) ಬರೆದದ್ದಾರೆ. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ಮಕ್ಕಳಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಓದಿನತ್ತ ಗಮನಹರಿಸುವಂತೆ ಸಲಹೆ ನೀಡಿದ್ದಾರೆ. ಈ ಪತ್ರ ಅಭಿಯಾನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರಲ್ಲಿ ಹುಮ್ಮಸ್ಸು …

Read More »

ನಾಲ್ಕು ದಿನ ಮಳೆ ಆಗುವ ಸಾಧ್ಯತೆ, ಹಲವೆಡೆ ಯೆಲ್ಲೋ ಅಲರ್ಟ್‌ ಘೋಷಣೆ.

ಬೆಂಗಳೂರು : ವಾಯಭಾರ ಕುಸಿತದ ಹಿನ್ನೆಲೆ ಜುಲೈ 8 ರಿಂದ 11ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್‌ ಪಾಟೀಲ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ಜುಲೈ 8 ಹಾಗೂ 9ರಂದು ರಾಜ್ಯಾದ್ಯಂತ ಮಳೆ ತೀವ್ರತೆ ಹೆಚ್ಚಳವಾಗುವ ಸಾಧ್ಯತೆ ಇದೆ, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹಲವೆಡೆ …

Read More »

ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ!

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾಗಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಕು. ಶೋಭಾ ಕರಂದ್ಲಾಜೆ ಅವರು ನವದೆಹಲಿಯಲ್ಲಿಂದು ಅಧಿಕಾರ ಸ್ವೀಕರಿಸಿದರು. ನಿನ್ನೆ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದಂತ ಕರ್ನಾಟಕ ಶೋಭಾ ಕರಂದ್ಲಾಜೆಗೆ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಖಾತೆಯನ್ನು ಹಂಚಿಕೆ ಮಾಡಲಾಗಿತ್ತು. ಇಂತಹ ಖಾತೆಯನ್ನು, ಇಂದು ನವದೆಹಲಿಯ ಕೃಷಿ ಭವನದಲ್ಲಿನ ಕಚೇರಿಯಲ್ಲಿ …

Read More »