ವಿಜಯಪುರ: ಯಡಿಯೂರಪ್ಪ ಪರವಾಗಿ ಮಾತನಾಡುವ ನೈತಿಕತೆ ಕಾಂಗ್ರೆಸ್ ಲಿಂಗಾಯತ ನಾಯಕರಿಗಿಲ್ಲ. ಯಡಿಯೂರಪ್ಪ ಅವರನ್ನು ತೆಗೆದರೆ ಬಿಜೆಪಿ ಹಾಳಾಗುತ್ತದೆ ಅನ್ನೋಕೆ ಶಾಮನೂರು, ಎಂ.ಬಿ.ಪಾಟೀಲ ಯಾರು? ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡೋದು ಬಿಜೆಪಿ ಹೈಕಮಾಂಡ್ ಕೈಯಲ್ಲಿದೆ. ಬಿಜೆಪಿ ನಾಯಕತ್ವ, ಆಂತರಿಕ ವಿಚಾರದ ಬಗ್ಗೆ ಮಾತನಾಡೋಕೆ ಇವರ್ಯಾರು ಎಂದರು. ಲಿಂಗಾಯತರ ಮೂಲಕ ಬಿಜೆಪಿಯನ್ನ ಮುಗಿಸುವುದಕ್ಕೆ ಕಾಂಗ್ರೆಸ್ ಯೋಜನೆ …
Read More »Monthly Archives: ಜುಲೈ 2021
ಜನರ ಸಮಸ್ಯೆಗೆ ಸ್ಪಂದಿಸುವುದೇ ನಮ್ಮ ಗುರಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಸವದತ್ತಿ: ಲೋಕಸಭಾ ಉಪಚುನಾವಣೆಯಲ್ಲಿ ಸೋತರೂ ಕೂಡ ಜನರ ಮನಸ್ಸಿನಲ್ಲಿ ನಾವಿದ್ದೇವೆ. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನರ ಸಮಸ್ಯೆಗೆ ಸ್ಪಂದಿಸುವುದೇ ನಮ್ಮ ಗುರಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಮತಕ್ಷೇತ್ರದ ಸತ್ತಿಗೇರಿ,ಸೊಪಡ್ಲಾ, ಯರಗಟ್ಟಿ ಹಾಗೂ ಇಟ್ನಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಂದು (ಮಂಗಳವಾರ) ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಕುಂದುಕೊರತೆಗಳ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. ಗ್ರಾಮದ ಜನರಿಗೆ ಖುದ್ದಾಗಿ ಭೇಟಿಯಾಗಿ ಧನ್ಯವಾದ ಸಲ್ಲಿಸಲು …
Read More »ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ!
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಮಲ್ಲೇಶ್ವರಂನ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಆಧಾರದ ಮೇಲೆ ಪಿಯುಸಿ ಫಲಿತಾಂಶ ನೀಡಿದ್ದೇವೆ. ಅನೇಕ ವಿದ್ಯಾರ್ಥಿಗಳು ಎಕ್ಸಾಂ ಮಾಡುವಂತೆ ಮನವಿ ಮಾಡಿದ್ರು. ಆದರೆ, ಫಲಿತಾಂಶಕ್ಕೆ ಮಾರ್ಗಸೂಚಿ ತಂತ್ರ ಅನುಸರಿಸಲಾಗಿದೆ ಎಂದು …
Read More »ಶ್ರೀದೇವಿ ಇನ್ಸೂರೆನ್ಸ್ ಜೋನ್ ಉದ್ಘಾಟಸಿದ ಸತೀಶ್ ಜಾರಕಿಹೊಳಿ
ಸವದತ್ತಿ:ಕೆಪಿಸಿಸಿ ಕಾರ್ಯಾಧಕ್ಷ ಸತೀಶ ಜಾರಕಿಹೋಳಿ ಅವರು ಹಾಗೂ ಸವದತ್ತಿ ತಾಲೂಕಿನ ಕಾಂಗ್ರೆಸ್ ಮುಖಂಡ ಪಂಚನಗೌಡ ದ್ಯಾಮನಗೌಡ ಅವರ ನೇತೃತ್ವದಲ್ಲಿ ಯರಗಟ್ಟಿಯಲ್ಲಿ ಶ್ರೀದೇವಿ ಇನ್ಸೂರೆನ್ಸ್ ಜೋನ್ ಉದ್ಘಾಟನೆಯ ಮಾಡಲಾಯಿತು ಹಾಗೂ ಹೊಲಸೇಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಕಾಂಗ್ರೆಸ್ ಮುಖಂಡರು ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಸವದತ್ತಿ ತಾಲೂಕಿನ ಯುವ ನಾಯಕರು ಆಗಿರುವ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ,D.D. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ …
Read More »ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳು;ಪರಿಹಾರಕ್ಕೆ ಆಗ್ರಹ.
ಮದ್ದೂರು: ಕಲ್ಲು ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳಿಗೆ ಡಿಬಿಎಲ್ ಕಂಪನಿ ವಿರುದ್ಧ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಚಂದಹಳ್ಳಿದೊಡ್ಡಿ ಗ್ರಾಮಸ್ಥರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರೂಪಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಗ್ರಾಮದಮಹಿಳೆಯರು ತಾಲೂಕು ಆಡಳಿತ ಹಾಗೂ ದಿಲೀಪ್ ಬಿಲ್ಡ್ ಖಾನ್ ಕಂಪನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು. ಬೆಳೆ ಬೆಳೆಯಲು ಕಷ್ಟ: ಮೈಸೂರು, …
Read More »ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕೆ ದಿನಾಂಕ ನಿಗದಿ.
ಬೆಂಗಳೂರು: ಇದೇ 19ರಂದು ನಡೆದ ಹಾಗೂ 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರಂದು ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುರೇಶ್ ಕುಮಾರ್ ಹೇಳಿದರು. ಮೊದಲ ಪತ್ರಿಕೆ ಪರೀಕ್ಷೆ ಪೂರ್ಣ ಯಶಸ್ವಿಯಾಗಿದ್ದು, ಶೇ. 99.6 ರಷ್ಟು ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು. …
Read More »ಬಿಎಸ್ವೈ ಜಾತಿಯಿಂದ ಲಿಂಗಾಯತರು. ಆದರೆ ಅವರು ಮಾಸ್ ಲೀಡರ್; ಸಿಎಂ ಪರ ಮಠಾಧೀಶರು ಬ್ಯಾಟಿಂಗ್.
ಚಿತ್ರದುರ್ಗ: ಜಿಲ್ಲೆಯ ಮುರುಘಾಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವಿಧ ಮಠಾಧೀಶರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಬ್ಯಾಟಿಂಗ್ ಬೀಸಿದ್ದಾರೆ. ಯಡಿಯೂರಪ್ಪ ಈ ನಾಡು ಕಂಡಂತಹ ಶ್ರೇಷ್ಠ ನಾಯಕ. ನಾಲ್ಕು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಕೊರೊನಾ ಸಂದರ್ಭದಲ್ಲಿ ಉತ್ಸಾಹಭರಿತವಾಗಿ ಕೆಲಸ ಮಾಡಿದ್ದಾರೆ. ಕೊರೊನಾ ಕಾಲದ ಸಂಕಷ್ಟವನ್ನ ನಿಭಾಸಿದ್ದಾರೆ. ಕೇಂದ್ರ ಸರ್ಕಾರ ಬಿಎಸ್ವೈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಮುರುಘಾ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ. ಬಿಎಸ್ವೈ ಜಾತಿಯಿಂದ ಲಿಂಗಾಯತರು. ಆದರೆ ಅವರು ಮಾಸ್ ಲೀಡರ್. ಅವರು ಯಾವುದೇ …
Read More »ಆಸ್ಪತ್ರೆಗಳು ಹಣ ಮಾಡುವ ಯಂತ್ರಗಳಾಗುತ್ತಿವೆ: ಸುಪ್ರೀಂ ಕೋರ್ಟ್ ಅಸಮಾಧಾನ.
ನವದೆಹಲಿ: ಆಸ್ಪತ್ರೆಗಳು ದೊಡ್ಡ ಉದ್ಯಮಗಳಾಗಿ ಮಾರ್ಪಟ್ಟಿವೆ ಮತ್ತು ಇವೆಲ್ಲವೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಮೂಲಕ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಖಾಸಗಿ ಆಸ್ಪತ್ರೆಗಳು ಸಣ್ಣ ವಸತಿ ಕಟ್ಟಡಗಳಿಂದ ಕಾರ್ಯನಿರ್ವಹಿಸಲು ಅನುಮತಿಸುವ ಬದಲು, ರಾಜ್ಯ ಸರ್ಕಾರಗಳು ಉತ್ತಮ ಆಸ್ಪತ್ರೆಗಳನ್ನು ಒದಗಿಸಬಹುದು. ‘ಅಂತಹ ಆಸ್ಪತ್ರೆಗಳನ್ನು ಮುಚ್ಚಬೇಕು’ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಂ.ಆರ್. ಶಾ ಅವರ ಪೀಠ, ‘ಆಸ್ಪತ್ರೆಗಳು ದೊಡ್ಡ ಉದ್ಯಮಗಳಾಗಿ ಮಾರ್ಪಟ್ಟಿವೆ. ಜೀವನ ವೆಚ್ಚದಲ್ಲಿ ಅವರು …
Read More »ವಿದ್ಯಾಭ್ಯಾಸಕ್ಕಾಗಿ ಹುಟ್ಟುರು ಬಿಟ್ಟು ಬಂದಿದ ಅಣ್ಣ ತಂಗಿ, ರಾತ್ರೊ ರಾತ್ರಿ ಶವವಾದರು.
ನೆಲಮಂಗಲ: ಧಾರಾಕಾರ ಮಳೆಯಿಂದಾಗಿ ಮನೆ ಮೇಲೆ ಪಕ್ಕದ ಗೋಡೆ ಕುಸಿದು ಬಿದ್ದು, ಸ್ಥಳದಲ್ಲೇ ಅಣ್ಣ-ತಂಗಿ ಇಬ್ಬರೂ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಬಿನ್ನಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ವೇಣುಗೋಪಾಲ(22) ಮತ್ತು ಕಾವ್ಯ(20) ಮೃತ ದುರ್ದೈವಿಗಳು. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಮೂಲದ ಅಣ್ಣ-ತಂಗಿ ಇಬ್ಬರೂ ವಿದ್ಯಾಭ್ಯಾಸದ ಸಲುವಾಗಿ ನೆಲಮಂಗಲದಲ್ಲಿ ಹನುಮಂತರಾಯಪ್ಪ ಎಂಬುವರಿಗೆ ಸೇರಿದ ಸೀಟಿನ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಸೋಮವಾರ ರಾತ್ರಿ ಎಂದಿನಂತೆ ಊಟ …
Read More »ಅಸೆಂಬ್ಲಿಯನ್ನು ವಿಸರ್ಜಿಸಲು ಶಿಫಾರಸು ಮಾಡ್ತಾರಾ ಸಿಎಂ!
ಬೆಂಗಳೂರು, ಜು.20- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಿಂದ ವಾಪಸಾದ ಎರಡು ದಿನಗಳ ನಂತರವೂ ನಾಯಕತ್ವ ಬದಲಾವಣೆಯ ಚರ್ಚೆ ಮುಂದುವರಿಯುತ್ತಲೇ ಇದೆ. ದೆಹಲಿಯಲ್ಲಿ ನಡೆದ ಚರ್ಚೆಗಳು ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಯಾವುದೇ ಸ್ಪಷ್ಟತೆ ಸಿಗುತ್ತಿಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲ ಸಚಿವರು ಹೇಳುತ್ತಿದ್ದಾರೆ. ಆದರೆ, ಈ ತಿಂಗಳ ಅಂತ್ಯದಲ್ಲಿ ಅಥವಾ ಆಗಸ್ಟ್ ತಿಂಗಳಿನಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು ಎಂದು ಪಕ್ಷದೊಳಗಿನ ಕೆಲವರು ಹೇಳುತ್ತಿದ್ದಾರೆ. ಜುಲೈ 26ರಂದು …
Read More »