Breaking News

Monthly Archives: ಆಗಷ್ಟ್ 2021

ಜಿಪಂ. ಚುನಾವಣೆ ಗೆಲ್ಲುವಿಗಾಗಿ ನಿಮ್ಮ ಶಕ್ತಿ ಪ್ರದರ್ಶನ ಮಾಡಿ : ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕರಾದ ಪ್ರದೀಪ.ಎಂ.ಜೆ. ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ಅಧಿಕಾರ ಹಸ್ತಾಂತರಿಸಿ, ಸನ್ಮಾನಿಸಿದರು. ಬಳಿಕ ನೂತನ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ., ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನಿಸಿದರು. ತದನಂತರ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಸತೀಶ್ ಜಾರಕಿಹೊಳಿ ಮಾತನಾಡಿದರು. ಸಧ್ಯದಲ್ಲೆ ಜಿಲ್ಲಾ ಪಂಚಾಯತ್ ಚುನಾವಣೆ …

Read More »

ಶ್ರೀಗಳ ನಡಿಗೆ ಭಕ್ತರ ಮನೆ ಕಡೆಗೆ! ಶ್ರೀ ಮುರುಘಾಜೇಂದ್ರ ಮಹಾಸ್ವಾಮಿಜೀಗಳ ವಿಶೇಷ ಕಾರ್ಯ.

ಗೋಕಾಕ: ಶ್ರಾವಣ ಮಾಸದ ಪ್ರಯುಕ್ತ ಸೋಮವಾರದಿಂದ ಒಂದು ತಿಂಗಳಕಾಲ ಶ್ರೀಗಳ ನಡಿಗೆ ಭಕ್ತರ ಮನೆ ಕಡೆಗೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘಾಜೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ ‌. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊರೋನಾ, ಲಾಕಡೌನ ನಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದ್ದು, ಸಾರ್ವಜನಿಕರು ಎಲ್ಲೂ ಹೋಗದೆ ಮನೆಯಲ್ಲಿಯೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ಶ್ರಾವಣ ಮಾಸವನ್ನು ವಿಭಿನ್ನವಾಗಿ …

Read More »

ಕೊಚ್ಚರಿ ಗ್ರಾಮದಲ್ಲಿ ರಾಹುಲ್ ಜಾರಕಿಹೊಳಿ ಬಳಗ ಉದ್ಘಾಟನೆ.

ಹುಕ್ಕೇರಿ : ತಾಲ್ಲೂಕಿನ ಕೊಚ್ಚರಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿತವಾಗಿರುವ ರಾಹುಲ್ ಜಾರಕಿಹೊಳಿ ಬಳಗವನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು, ಶನಿವಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಘದ ಮೂಲಕ ಗ್ರಾಮ ಹಾಗೂ ಸುತ್ತಮುತ್ತಲ್ಲಿನ ಗ್ರಾಮಗಳ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಗೆ ಸಮಸ್ಯೆಗಳಿಗೆ ಸ್ಪಂಧಿಸಬೇಕು. ಬಡವರ ಧ್ವನಿಯಾಗಿ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು. ಸಂಘದಿಂದ ಪ್ರತಿ ವರ್ಷ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ …

Read More »

ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ (Chief Minister Basavaraja Bommai) 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಕೆ.ಎಸ್. ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ನೀಡಲಾಗಿದೆ. ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆರ್. ಅಶೋಕ್-ಕಂದಾಯ ಬಿ.ಶ್ರೀರಾಮುಲು-ಸಾರಿಗೆ ವಿ.ಸೋಮಣ್ಣ- ವಸತಿ ಬಿ.ಸಿ.ಪಾಟೀಲ್-ಕೃಷಿ ಎಸ್.ಟಿ.ಸೋಮಶೇಖರ್-ಸಹಕಾರ ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೆ. ಗೋಪಾಲಯ್ಯ-ಅಬಕಾರಿ ಉಮೇಶ್ …

Read More »

ವಿಕೇಂಡ ಕರ್ಫ್ಯೂ ; ಏನಿರುತ್ತೆ? ಏನಿರಲ್ಲ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬೆಂಗಳೂರು: ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕರ್ನಾಟಕ ಸರ್ಕಾರ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಇಂದು (ಆಗಸ್ಟ್ 6) ಮಧ್ಯಾಹ್ನ ಆದೇಶ ಹೊರಡಿಸಿದ್ದಾರೆ. ಇದೀಗ ರಾತ್ರಿ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೈಡ್‌ಲೈನ್ಸ್‌ ಪ್ರಕಟವಾಗಿದೆ. ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ ಆಗಲಿದೆ. ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ಹಾನಿ: ಗೋವಿಂದ ಕಾರಜೋಳ

ಬೆಳಗಾವಿ: ‘ಪ್ರವಾಹ ಮತ್ತು ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಬೆಳೆ, ಮನೆಗಳು ಹಾಗೂ ರಸ್ತೆ, ಸೇತುವೆ, ಕೆರೆ-ಕಟ್ಟೆ ಮೊದಲಾದ ಮೂಲಸೌಕರ್ಯಗಳು ಸೇರಿದಂತೆ ಒಟ್ಟು ₹ 7,800 ಕೋಟಿ ಹಾನಿಯಾಗಿದೆ’ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘21,300 ವಿದ್ಯುತ್ ಕಂಬಗಳು‌ ಹಾಗೂ 5,300 ಟ್ರಾನ್ಸ್‌ಫಾರ್ಮರ್‌ಗಳು ಮುಳುಗಡೆಯಾಗಿವೆ. ನೀರು ಕಡಿಮೆಯಾದ ಬಳಿಕ ಅವುಗಳ ಹಾನಿ‌ ಅಂದಾಜು ಮಾಡಲಾಗುವುದು’ ಎಂದು ಹೇಳಿದರು. ’51 …

Read More »

ಕುರುಬರ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುವೆ: ಸತೀಶ ಜಾರಕಿಹೊಳಿ

ಬೆಳಗಾವಿ: ಕುರಿ ಸಾಕಾಣಿಕೆ, ಉಣ್ಣೆ ಉತ್ಪಾದಕ ಕೂಲಿ ಕಾರ್ಮಿಕರ ಏಳಿಗೆಗಾಗಿ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಕುರುಬರ ಸಂಘಗಳ ಅಭಿವೃದ್ಧಿಗಾಗಿ ಸರ್ಕಾರದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ಶಿಂದೊಳ್ಳಿ ಗ್ರಾಮದ ಕನಕದಾಸ ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಆವರಣದಲ್ಲಿ, ಬೆಳಗಾವಿ ಜಿಲ್ಲೆಯ ಕುರಿ ಸಂಗೋಪನ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘಗಳ …

Read More »

ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ …

Read More »

ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಗಡಿ ಜಿಲ್ಲೆಯಲ್ಲಿ ವಿಕೇಂಡ ಕರ್ಫ್ಯೂ ಜಾರಿ.

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವಂತ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, …

Read More »

ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ!

ಚಿಕ್ಕೋಡಿ: ಪಿನ್ ಕೇರ್ ಬ್ಯಾಂಕ ವತಿಯಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ಆಹಾರ ಧ್ಯಾನ ವಿತರಣೆ ಮತ್ತು covid-19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಚಿಕ್ಕೋಡಿ ತಾಲ್ಲೂಕಿನ ಕೊಡ್ನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಪ್ರವಾಹ ಪೀಡಿತ ಸದಸ್ಯರಿಗೆ ಪ್ರತಿ ವರ್ಷ್ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ ಈ ವರ್ಷವು ಕೂಡ ಸುಮಾರು ಎರಡು ನೂರು ಸದಸ್ಯರಿಗೆ ಆಹಾರ ಕಿಟ್ ಕೊಡುವುದಾಗಿ ಹೇಳಿದರು ಕೋವಿಡ್ ಜಾಗೃತಿ ಬಗ್ಗೆ ತಿಳಿಸಿದರು. ಈ ಕಾರ್ಯಕ್ರಮದ ಬ್ಯಾಂಕ್ …

Read More »