Breaking News

Monthly Archives: ಸೆಪ್ಟೆಂಬರ್ 2021

ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು. ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ …

Read More »

ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು

ಯಮಕನಮರಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟಾಂಗ್ ನೀಡಿದರು. ಮತಕ್ಷೇತ್ರದ ಪಾಶ್ಚಾಪುರ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ 50 ವರ್ಷಗಳ ಕಾಲ ದೇಶವನ್ನು ಆಳಿದೆ. ಅನೇಕ ಉದ್ಯೋಗಗಳನ್ನು ಸೃಷ್ಟಿಸಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ. ಇದನ್ನು ವಿಜಯೇಂದ್ರಗೆ ತಿಳಿದುಕೊಳ್ಳಬೇಕು ಎಂದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರದ 7 ವರ್ಷಗಳ ಆಡಳಿತಾವಧಿಯಲ್ಲಿ ಎಷ್ಟು …

Read More »

ಕೋವಿಡ್ ನಿರ್ಮೂಲನೆಗಾಗಿ ಸರ್ಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು. ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ ಲಸಿಕೆ ಗುರಿಯನ್ನು ಹೊಂದಿದ್ದು, ಇಲ್ಲಿಯವರಿಗೆ ಸುಮಾರು 1.60 ಲಕ್ಷ ಜನರಿಗೆ ಲಸಿಕೆಗಳನ್ನು ಹಾಕಲಾಗಿದ್ದು, ಕೊವೀಡ್ …

Read More »

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾದ ಲಸಿಕಾ ಮೆಗಾ ಮೇಳವನ್ನು ಯಶಸ್ವಿಗೊಳಿಸಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಪ್ರಧಾನಿ ನರೇಂದ್ರ ಮೋದಿಯರವ ಹುಟ್ಟು ಹಬ್ಬದಂದು ರಾಜ್ಯ ಆರೋಗ್ಯ ಇಲಾಖೆ ಲಸಿಕೆ ಮೆಗಾ ಮೇಳ ಹಮ್ಮಿಕೊಂಡಿದ್ದು, ಲಸಿಕೆ ಮೆಗಾ ಮೇಳ ಕಾರ್ಯಕ್ರಮದ ಸದುಪಯೋಗವನ್ನು ಅರಭಾoವಿ ಮತಕ್ಷೇತ್ರದ ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸೆ.17 ಶುಕ್ರವಾರದಂದು ತಾಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರು ನಿಮ್ಮ ಗ್ರಾಮದ …

Read More »

ಮೋದಿಜೀಯವರ ೭೧ನೇಯ ಜನ್ಮದಿನ ಅಂಗವಾಗಿ ವಿವಿಧ ಕಾರ್ಯಕ್ರಮ-ಭೀಮಶಿ ಭರಮಣ್ಣವರ.!

ಗೋಕಾಕ: ವಿಶ್ವದ ಅಗ್ರಗಣ್ಯ ನಾಯಕ, ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ ೭೧ನೇಯ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿ.೧೭ ರಂದು ಮುಂಜಾನೆ ೧೦ ಗಂಟೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ, ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‌ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ …

Read More »

ಬೆಳಗಾವಿಯಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಸಿದ್ಧತೆ!

ಬೆಳಗಾವಿ: ಅನಧಿಕೃತವಾಗಿ ನಿರ್ಮಾಣ ಗೊಂಡಿರುವ ಧಾರ್ಮಿಕ ಕೇಂದ್ರಗಳ ತೆರವಿಗೆ ಸುಪ್ರೀಂ ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೂ ಕಾರ್ಯಾಚರಣೆಗೆ ಮುಂದಾಗಿದ್ದು, ಬೆಳಗಾವಿ ಮಹಾನಗರದಲ್ಲಿರುವ 39 ಧಾರ್ಮಿಕ ಕೇಂದ್ರಗಳ ತೆರವು ಆಗಲಿದೆ. ಆದರೆ ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ದೇಶಾದ್ಯಂತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವು ಮಾಡಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಯೂ ಜಿಲ್ಲಾಡಳಿತ ಕೇಂದ್ರಗಳನ್ನು ಗುರುತಿಸಿದೆ. ಅದರಂತೆ ಈಗ ಸದ್ಯ …

Read More »

ಗೋಕಾಕ ವಾರ್ಡ ನಂ 7ರಲ್ಲಿ ಗಣೇಶೋತ್ಸವ ಆಚರಣೆ !

ಗೋಕಾಕ: ನಗರದ ನಾಯಕ ಗಲ್ಲಿಯಲ್ಲಿ ಶ್ರೀ ಗಜಾನನ ಯುವಕ ಮಂಡಳಿ ವತಿಯಿಂದ ಸರಳವಾಗಿ ಗಣೇಶೋತ್ಸವ ಆಚರಿಸಿ, ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು. ನಂತರ ಗಜಾನನ ಯುವಕ ಮಂಡಳಿಯಿಂದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ರವಿ ಲಕ್ಕಪ್ಪ ಮುಡ್ಡಪ್ಪಗೋಳ ,ಎಸ್ಪಿ ಉಪಾಧ್ಯಕ್ಷರಾದ ಪುಂಡಲಿಕ ಪೂಜಾರಿ, ಪರಶುರಾಮ್ ಪೂಜಾರಿ, ಆನಂದ್ ಪೂಜೇರಿ ಲಕ್ಷ್ಮಣ್ ಮುಡ್ಡಪ್ಪಗೋಳ, ಭೀಮರಾಯ ಪೂಜೇರಿ, ಪ್ರದೀಪ್ ತಳವಾರ, ಜಿಲ್ಲಾ ರೈತ …

Read More »

ಇಂದಿನ ಯುವಕರು ಸರ್ ಎಂ ವಿಶ್ವೇಶ್ವರಯ್ಯ ಅವರ ಹಾದಿಯಲ್ಲಿ ಸಾಗಿ: ಶಿವನಗೌಡ ಪಾಟೀಲ್

ಗೋಕಾಕ :ಸರ್​ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಪ್ರಯುಕ್ತ 1968ರಿಂದ ಪ್ರತಿ ವರ್ಷ ಸೆಪ್ಟೆಂಬರ್​ 15ನೇ ತಾರೀಖನ್ನು ಭಾರತದಲ್ಲಿ ಇಂಜಿನಯರ್​ಗಳ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಆ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು, ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳುವ ಕೆಲಸ ಆಗುತ್ತಿದೆ. ನಗರದ ಲಕ್ಷ್ಮೀ ದೇವಸ್ಥಾನ ಹತ್ತಿರವಿರುವ ಸರ್ ಎಂ ವಿಶ್ವೇಶ್ವರಯ್ಯ ಅವರ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ವಿಶ್ವೇಶ್ವರಯ್ಯ ಸೊಸೈಟಿಯ ಅಧ್ಯಕ್ಷರಾದ ಶಿವನಗೌಡ ಪಾಟೀಲ್ …

Read More »

ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಡಿಪಾಯವನ್ನು ಹಾಕಿಕೊಂಡಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳನ್ನು ಗಳಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಹೊರಗಿನವರಿಗೆ ಕಾಂಗ್ರೆಸ್ ಪಕ್ಷ ಹಿನ್ನಡೆ ಅನುಭವಿಸಿದೆ ಎಂಬಂತೆ ಬಿಂಬಿತವಾಗಿದೆ. ಆದರೆ, ನಮ್ಮ ನಿರೀಕ್ಷೆಗೆ ತಕ್ಕಷ್ಟೇ ಸ್ಥಾನಗಳನ್ನು ನಾವು ಚುನಾವಣೆಯಲ್ಲಿ ಗಳಿಸಿದ್ದೇವೆ ಎಂದರು. ದಕ್ಷಿಣ ವಿಧಾನಸಭಾ …

Read More »

ರಾಜಾಪೂರದಲ್ಲಿ ಗಜಾನನ ಉತ್ಸವಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

ಅರಭಾವಿ: ಸಮೀಪದ ರಾಜಾಪೂರ ಗ್ರಾಮದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಬೀರಸಿದ್ದೇಶ್ವರ ಗಜಾನನ ಯುವಕ ಮಂಡಳದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಗಜಾನನ ಉತ್ಸವಕ್ಕೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು, ಯುವಕ ಮಂಡಳದಿಂದ ಗ್ರಾಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾಕೂಟಗಳನ್ನು ಆಯೋಜಿಸಬೇಕು. ಜೊತೆಗೆ ಗ್ರಾಮದಲ್ಲಿನ ಎಲ್ಲ ಮಕ್ಕಳು ಶಿಕ್ಷಣ ಪಡೆಯುವಂತೆ ಸಂಘದಿಂದ ಮಕ್ಕಳನ್ನು ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು. …

Read More »