ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27ರಂದು ಸಂಯುಕ್ತ ಕಿಸಾನ್ ಮೋರ್ಚಾ ಬಂದ್ ಗೆ ಕರೆ ನೀಡಿದ್ದು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿವೆ ಎಂದರು. …
Read More »Monthly Archives: ಸೆಪ್ಟೆಂಬರ್ 2021
ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ: ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ರಾಯಬಾಗ ಮತಕ್ಷೇತ್ರದ ನಾಗರಮುನ್ನೋಳಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಭೀಮ ವಸತಿ ನಿಲಯದ ಹೊಸ ಕಟ್ಟಡದ ಉದ್ಘಾಟನೆಯನ್ನೂ ಮಾಡಿದರು. ನಂತರ ಮಾತನಾಡಿದ ಅವರು, ಪಕ್ಷ ಸಂಘಟನೆಯಲ್ಲಿ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು. ಪಕ್ಷದ ನಂತರದ ಬ್ಲಾಕ್ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಲಾಗಿದೆ. ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ: ಸಮಾಜದಿಂದ ವಿವಿಧ ಸೌಲಭ್ಯಗಳನ್ನು …
Read More »ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಚೆಕ್ ವಿತರಣೆ!
ಗೋಕಾಕ: ದಿ.23-4-2021ರಂದು ಸಿಡಿಲು ಬಡಿದು ಮೃತಪಟ್ಟ ಕುಟುಂಬಗಳಾದ ರಾಜನಕಟ್ಟಿ ಗ್ರಾಮದ ಅನುಸೂಯಾ ಬಾದರವಾಡಿ ಹಾಗೂ ಅಕ್ಕತಂಗೇರಹಾಳ ಗ್ರಾಮದ ಬಸವ್ವ ವ್ಯಾಪಾರಗಿ ಅವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ರಮೇಶ್ ಜಾರಕಿಹೊಳಿ* ಅವರು ಜಿಲ್ಲಾಧಿಕಾರಿಗಳ ನಿಧಿ ನಾಲ್ಕು ಲಕ್ಷ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿ ಒಂದು ಲಕ್ಷ ಸೇರಿ ಒಟ್ಟು 5 ಲಕ್ಷ ರೂಗಳ ಚೇಕನ್ನು ಶುಕ್ರವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರೇಡ್ …
Read More »ಕರ್ತವ್ಯ ನಿರತ ವೈದ್ಯರ ಮೇಲೆ ಗೋಕಾಕ ಪಿಎಸ್ಐ ದರ್ಪ : ಕಾನೂನು ಕ್ರಮಕ್ಕೆ ಆಗ್ರಹ !
ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಅಸಭ್ಯ ವರ್ತನೆ ಹಾಗೂ ಹಲ್ಲೆ ಮಾಡಲು ಯತ್ನಿಸಿದ ಗೋಕಾಕ ಶಹರ್ ಪೋಲಿಸ್ ಠಾಣೆಯ ಪಿಎಸ್ಐ ಅಮ್ಮಿನಬಾವಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಬೆಳಗಾವಿ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಿದರು. ಗೋಕಾಕ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರತರಾದ ಡಾ.ವಿಶ್ವನಾಥ …
Read More »ಪ್ರಶಸ್ತಿಗಾಗಿ ಬಿಜೆಪಿ ಕಂಡಲೆಲ್ಲ ಶೌಚಾಲಯ ನಿರ್ಮಾಣ: ಸತೀಶ ಜಾರಕಿಹೊಳಿ ವಾಗ್ದಾಳಿ
ಬೆಳಗಾವಿ: ” ಪ್ರಶಸ್ತಿಗಾಗಿ ಬಿಜೆಪಿ ಕಂಡಲೆಲ್ಲ ಶೌಚಾಲಯ ನಿರ್ಮಾಣ ಮಾಡಿ, ಮಾರ್ಕ್ಸ್ ತೆಗೆದುಕೊಂಡಿದೆ. ಸದ್ಯ ಶೌಚಾಲಯಗಳು ನಿರ್ವಹಣೆ, ನೀರಿನ ವ್ಯವಸ್ಥೆ ಇಲ್ಲದೆ ಹಾಳಾಗಿವೆ. ಲೆಕ್ಕ ಮಾತ್ರ ಪಕ್ಕಾ ಆಗಿದೆ ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ವಾಗ್ದಾಳಿ ನಡೆಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ರಾಜೀವ್ ಗಾಂಧಿ ಪಂಚಾಯತ್ ಸಂಘಟನೆ ವತಿಯಿಂದ ಆಯೋಜಿಸಿದ್ದ, ಜಿಲ್ಲಾ ಮಟ್ಟದ ಕಾಂಗ್ರೆಸ್ ಸಮಾವೇಶಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ …
Read More »ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ; ನೂತನ ಗೃಂಥಾಲಯ ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಹುಕ್ಕೇರಿ: ತಾಲೂಕಿನ ಹೆಬ್ಬಾಳ ಗ್ರಾಮದ ಬಸವೇಶ್ವರ ಮಂದಿರದಲ್ಲಿ ಬಸವ ಬಳಗದ ವತಿಯಿಂದ ಶ್ರಾವಣ ಮಾಸದ ನಿಮಿತ್ಯ ಇಂದು ಹಮ್ಮಿಕೊಂಡಿದ್ದ ಶರಣರ ಚರಿತಾಮೃತ ಮಹಾಮಂಗಲೋತ್ಸವ ಹಾಗೂ ವಚನ ಪಲ್ಲಕ್ಕಿ ಉತ್ಸವ ಶೃದ್ಧಾಭಕ್ತಿಯಿಂದ ನೆರವೇರಿತು. ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಬಸವೇಶ್ವರ ಮಂದಿರದಲ್ಲಿ ನೂತನ ಗೃಂಥಾಲಯವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಾಹುಲ್ ಅವರನ್ನು ಬಸವ ಬಳಗದಿಂದ ಸತ್ಕರಿಸಲಾಯಿತು. ಇದಕ್ಕೂ ಮೊದಲು ಗ್ರಾಮದಲ್ಲಿ ವಚನ ಪಲ್ಲಕ್ಕಿ ಉತ್ಸವ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸಾಧನೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಸಾಧನೆ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿಗೆ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಿದ್ದೇವೆ. ಸ್ಥಳೀಯವಾಗಿ ಶಾಸಕರು ಹಾಗೂ ಸಂಸದರು ಬಿಜೆಯವರೇ ಆಗಿದ್ದಾರೆ. ಆಡಳಿತ ಸರ್ಕಾರವು ಅವರದ್ದೇ ಇದೆ. ಹೀಗಾಗಿ, ಸಹಜವಾಗಿ ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿದೆ. ಇದರ ಹೊರತಾಗಿಯೂ ಕಾಂಗ್ರೆಸ್ ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗಳಿಸಿದೆ …
Read More »ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಮೂಡಲಗಿ : ಶಿಕ್ಷಕರಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಳೆದ ಒಂದೂವರೆ ದಶಕದಿಂದ ಅರಭಾವಿ ಮತಕ್ಷೇತ್ರದಲ್ಲಿ ಶಿಕ್ಷಣದ ಸರ್ವತೋಮುಖ ಏಳ್ಗೆಗಾಗಿ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. …
Read More »ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ!
ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಬಸವರಾಜ …
Read More »ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿಕ್ಷಕರ ದಿನಾಚರಣೆ ಆಚರಿಸಿದ ರಾಹುಲ್, ಪ್ರೀಯಾಂಕ ಜಾರಕಿಹೊಳಿ.
ಗೋಕಾಕ : ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಭಾನುವಾರ ಆಚರಿಸಿದರು. ಬಳಿಕ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ‘ ಶಿಕ್ಷಕ ‘ ಹೆಸರೇ ಸೂಚಿಸುವಂತೆ ಶಿ-ಶಿಸ್ತು, ಕ್ಷ-ಕ್ಷಮೆ, ಕ-ಕರುಣೆ ಅಥವಾ ಶಿಸ್ತುಗಾರನಾಗಿ ವಿದ್ಯಾರ್ಥಿಗಳ ಜ್ನಾನದಾಹಕ್ಕೆ ತಕ್ಕಂತೆ, ಕ್ಷಣ ಕ್ಷಣಕ್ಕು ಉಲ್ಲಾಸ ಬರಿತನಾಗಿ , ಕಠಿಣವಾದದ್ದನ್ನು …
Read More »