ಯರಗಟ್ಟಿ: ” ಜೀವನದಲ್ಲಿ ಬದಲಾವಣೆಯಾದ ಬಳಿಕ ಆದಿಕವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಭಾರತೀಯರ ಸಂಸ್ಕೃತಿಯನ್ನು ಪರಿಚಯಿಸಿ, ಅಮರಕವಿಯಾದರು. ಯುವಕರು ವಾಲ್ಮೀಕಿಯವರ ಬಗ್ಗೆ ಆಳವಾದ ಅಧ್ಯಯನ ಮಾಡಿದಾಗ ಮಾತ್ರ ಶ್ರೇಷ್ಠ ವ್ಯಕ್ತಿಗಳಾಗಲು ಸಾದ್ಯ” ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಆಲದಕಟ್ಟಿ ಕೆ. ಎಂ. ಗ್ರಾಮದಲ್ಲಿ ಗುರುವಾರ ಆಯೋಜಿಸಲಾಗಿದ್ದ, ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿ ದೇವಸ್ಥಾನ ಹಾಗೂ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ …
Read More »Monthly Archives: ಅಕ್ಟೋಬರ್ 2021
ಒಬಿಸಿ ಮೋರ್ಚಾ ಹಾಗೂ ವಾರ್ಡ ನಂ 19&20 ರ ಬಿಜೆಪಿ ಕಾರ್ಯಕರ್ತರಿಂದ ನರೇಂದ್ರ ಮೋದಿ ಅವರಿಗೆ ಶುಭಾಶಯಗಳ ಪತ್ರ!
ಗೋಕಾಕ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 20 ವರ್ಷಗಳ ಸೇವೆ ಮತ್ತು ಸಮರ್ಪಣೆಯ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಮತ್ತು ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7ರ ವರೆಗೆ ಪ್ರಧಾನಮಂತ್ರಿಗಳಿಗೆ ಶುಭಾಶಯ, ಅಭಿನಂದನಾ ಪತ್ರ ಬರೆಯುವ ಪೋಸ್ಟ್ ಕಾರ್ಡ್ ಮಹಾ ಅಭಿಯಾನವನ್ನು ನಗರದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಹಾಗೂ ವಾರ್ಡ ನಂ 19 ಮತ್ತು 20 ರ ವತಿಯಿಂದ ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಮ್ಮಿಕೊಂಡಿದ್ದರು. ನಮ್ಮ ನೆಚ್ಚಿನ …
Read More »ಹಿರಿಯ ರೈತ ಹೋರಾಟಗಾರ, ಪತ್ರಕರ್ತ ಕಲ್ಯಾಣರಾವ್ ಮುಚಳಂಬಿ(72) ವಿಧಿವಶ!
ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಏಳೆದಿದ್ದಾರೆ. ರೈತ ಸಂಘದ ಸಂಸ್ಥಾಪಕರಾದ ದಿ.ಪ್ರೊ.ನಂಜುಂಡಸ್ವಾಮಿ ಒಡನಾಡಿಯಾಗಿದ್ದ ಕಲ್ಯಾಣರಾವ್ ಮುಚಳಂಬಿ, 35 ವರ್ಷಗಳ ಹಿಂದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ‘ಹಸಿರು ಕ್ರಾಂತಿ’ ಪತ್ರಿಕೆ ಸ್ಥಾಪನೆ ಮಾಡಿದ್ದರು. ರೈತಪರ, ಕನ್ನಡಪರ ಹಾಗೂ ಗಡಿ ಹೋರಾಟದಲ್ಲಿ ಸಕ್ರಿಯರಾಗಿದ್ದರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ರೈತರ ಆತ್ಮಹತ್ಯೆ ತಡೆಗೆ ವಿವಿಧ ಮಠಾಧೀಶರ ಜೊತೆ 150ಕ್ಕೂ ಹೆಚ್ಚು ಗ್ರಾಮಗಳಿಗೆ ಪಾದಯಾತ್ರೆ ಮಾಡಿದ್ದರು. …
Read More »ಕರವೇ ಘಟಕ ಉದ್ಘಾಟಿಸಿದ ಯುವ ನಾಯಕರಾದ ರಾಹುಲ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ
ಗೋಕಾಕ: ತಾಲೂಕಿನ ಗಣೇಶವಾಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕವನ್ನು ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮ ನಾಡಿನ ಮಹಾನ ವ್ಯಕ್ತಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಕಲಾವಿದರು, ಕ್ರೀಡಾಪಟುಗಳು ಸೇರಿ ಅನೇಕರು ದೇಶಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಿ ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ನಾಡಿನಲ್ಲಿ ಜನಿಸಿರುವುದೇ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ …
Read More »ಫೇಸ್ ಬುಕ್, ವಾಟ್ಸಾಪ್ ಸೇವೆ ಸರಿಯಾಗಿದ್ದು, ಬಳಕೆದಾರರು ನಿಟ್ಟುಸಿರು!
ನವದೆಹಲಿ: ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಸೇರಿದಂತೆ ಹಲವು ಜಾಲತಾಣಗಳ ಸರ್ವರ್ ಡೌನ್ ಆಗಿ ಸೇವೆಯಲ್ಲಿ ಅಡಚಣೆಯಾಗಿ ಬಳಕೆದಾರರು ಗಂಟೆಗಟ್ಟಲೆ ತೊಂದರೆ ಅನುಭವಿಸಿದ್ದಾರೆ. ರಾತ್ರಿ 9 -10 ಗಂಟೆ ಸುಮಾರಿಗೆ ಈ ಅಡಚಣೆ ಉಂಟಾಗಿದ್ದು, ಬಳಕೆದಾರರು ತಮಗೆ ಆದ ತೊಂದರೆಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್, ವಾಟ್ಸಾಪ್, ಇನ್ ಸ್ಟಾಗ್ರಾಂ ಸೇರಿದಂತೆ ಹಲವು ಜಾಲತಾಣಗಳ ಸೇವೆಯಲ್ಲಿ ವ್ಯತ್ಯಯವಾಗಿದೆ. ಹೊಸ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗಿಲ್ಲ. ಸಾಮಾಜಿಕ ಜಾಲತಾಣಗಳಾದ …
Read More »22 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ರಾಹುಲ್ ಜಾರಕಿಹೊಳಿ ಚಾಲನೆ
ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು. ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. …
Read More »