Breaking News

Daily Archives: ನವೆಂಬರ್ 10, 2021

ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಕೆಎಂಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು ಬೇಗನೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಕಳೆದ ಸೋಮವಾರದಂದು ಮೂಡಲಗಿ ಹಾಗೂ ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಂತ್ರಸ್ಥ ಕುಟುಂಬಸ್ಥರಿಗೆ ಯಾವುದೇ ತೊಂದರೆಯಾಗದಂತೆ ಕರ್ತವ್ಯ …

Read More »

ಪೋಲಿಸರ ಭರ್ಜರಿ ಬೇಟೆ.! ಅಂದರ್ ಬಾಹರ್ ಆಟಗಾರರು ಅಂದರ್.!

ಗೋಕಾಕ: ಮಂಗಳವಾರ ರಾತ್ರಿ ಭರ್ಜರಿ ಬೇಟೆಯಾಡಿದ ಗೋಕಾಕ ಪೋಲಿಸರು ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜೂಜಾಟದಲ್ಲಿ ತೋಡಗಿದ್ದ ೨೬ಜನರು ಬಂಧಿಸಿ, ೧ಲಕ್ಷಕ್ಕೂ ಹೆಚ್ಚು ಹಣ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನದಲ್ಲಿ ಪ್ರೋಬೇಷನರಿ ಡಿವೈಎಸ್‌ಪಿ ಡಿ ಎಚ್ ಮುಲ್ಲಾ ಮತ್ತು ಸಿಪಿಐ ಗೋಪಾಲ ರಾಠೋಡ ನೇತ್ರತ್ವದಲ್ಲಿ ದೀಪಾವಳಿ ಕಡೆಯ ಪಾಡ್ಯ ಹಬ್ಬದ ದಿನದಂದು ಏಕಕಾಲಕ್ಕೆ ನಾಲ್ಕು ಕಡೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೋಡಗಿದ್ದವರನ್ನು ಬಂಧಿಸಿದ್ದಾರೆ. ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ. …

Read More »

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಮಾಲೋಚನೆ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರಲಿಲ್ಲ. ಹೀಗಾಗಿ, ಸತೀಶ ಜಾರಕಿಹೊಳಿಯವರು ಇಂದು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ. ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಮೇಲ್ಮನೆ ಚುನಾವಣೆಯನ್ನು ಯಾವ …

Read More »