ಬೆಳಗಾವಿ : ಪ್ರತಿ ವರ್ಷ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದಂದು ಮಾನವ ಬಂಧುತ್ವ ವೇದಿಕೆ ನಡೆಸುವ ಮೌಢ್ಯ ವಿರೋಧಿ ದಿನವನ್ನು ಡಿಸೆಂಬರ್ 6ರಂದು ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಆಚರಿಸಲಾಗುತ್ತಿದೆ. ಪ್ರತಿ ವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಸೇರಿ ಮೌಢ್ಯ ವಿರೋಧಿ ದಿನವನ್ನು ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹಾಗೂ ಕೋವಿಡ್ ನಿಯಮಾವಳಿಯ ಮಿತಿ ಇರುವ ಕಾರಣ, ಆ ಮಿತಿ ಮೀರದಂತೆ …
Read More »Daily Archives: ಡಿಸೆಂಬರ್ 3, 2021
ಕಾಂಗ್ರೆಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ: ರಮೇಶ ಜಾರಕಿಹೊಳಿ
ನಿಪ್ಪಾಣಿ : ಕಾಂಗ್ರೆಸ್ ಪಕ್ಷ ದುಡ್ಡಿನ ಮೇಲೆ ನಿಂತಿದ್ದು, ದುಡ್ಡು ಇದ್ದವರಿಗೆ ಮಾತ್ರ ಆ ಪಕ್ಷದಲ್ಲಿ ಬೆಲೆ ಇದೆ. ಹಿಂದುಳಿದ ವರ್ಗಗಳ ನಾಯಕರಿಗಂತೂ ಬೆಲೆಯೇ ಇಲ್ಲ. ಹೀಗಾಗಿ ಆ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಬೇಕಾಯಿತು ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ನಿಪ್ಪಾಣಿ ಮತಕ್ಷೇತ್ರದ ಗ್ರಾಪಂ, ಪಪಂ ಹಾಗೂ ನಗರಸಭೆ ಸದಸ್ಯರಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸಮಗ್ರ ಪ್ರಗತಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ …
Read More »ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡಿ:ಲಖನ್ ಜಾರಕಿಹೊಳಿ
ನಿಪ್ಪಾಣಿ : ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು. ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ ಭವನದಲ್ಲಿ ಹಮ್ಮಿಕೊಂಡ ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಪಕ್ಷಾತೀತವಾಗಿ ನನಗೆ ಬೆಂಬಲ …
Read More »ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ : ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿಯೇ ಬಂಡಾಯವಾಗಿ ಸ್ಪರ್ಧೆ ಮಾಡಿದ್ದಾರೆ. ಮೊದಲು ತಮ್ಮ ಪಕ್ಷದ ಬಗ್ಗೆ ವಿಚಾರ ಮಾಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದಲ್ಲಿ ಇರುವಂತ ಮತಗಳಲ್ಲಿ ಎರಡು ಸ್ಥಾನ ಗೆಲ್ಲಲ್ಲಿಕ್ಕೆ ಸಾಧ್ಯವಿಲ್ಲ. ಅವರ ಪಕ್ಷದಲ್ಲಿಯೇ ಗೊಂದಲವಿದೆ. ರಮೇಶ್ ಜಾರಕಿಹೊಳಿ ಒಂದು ಲಖನ್ ಜಾರಕಿಹೊಳಿ ಅಥವಾ …
Read More »