Breaking News

Monthly Archives: ಜನವರಿ 2022

ಶೀಘ್ರವೇ ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು ಬಾರಿ ಮುಖ್ಯಮಂತ್ರಿಗಳನ್ನು …

Read More »

ಗೋವಾದಲ್ಲಿ ಕಾಂಗ್ರೆಸ್ ಗೆ ಜಯ ನಿಶ್ಚತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಪಣಜಿ: ಗೋವಾ ಚುವಾವಣೆಯಲ್ಲಿ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದಾರೆ, ಕಾಂಗ್ರೆಸ್‌ಗೆ ಅಧಿಕಾರ ಹಿಡಿಯುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಚುನಾವಣಾ ವೀಕ್ಷಕ ಸತೀಶ್ ಜಾರಕಿಹೊಳಿ ವಿಶ್ವಾಸ ಹೊಂದಿದ್ದಾರೆ. ಗೋವಾ ರಾಜ್ಯದ ಮಡಗಾವಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿದ್ದು, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಗೋವಾ ಮತ್ತು ಬೆಳಗಾವಿಗೆ ಉತ್ತಮ ನಂಟು ಹೊಂದಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ …

Read More »

ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ವತಿಯಿಂದ ಸಾರ್ವಜನಿಕ ಸೇವಾ ಸಿಂಧು ಕೇಂದ್ರ ಉದ್ಘಾಟಣೆ

ಗೋಕಾಕ : ನಗರದ ವಲಯ ಮೇಲ್ವಿಚಾರಕ ಕಛೇರಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಸ್ಥೆ ವತಿಯಿಂದ ಸಾರ್ವಜನಿಕ ಸೇವಾ ಸಿಂಧು ಕೇಂದ್ರ ಉದ್ಘಾಟಿಸಲಾಯಿತು. ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಕೇಶವ್ ದೇವಾಂಗ ಅವರು ಮಾತನಾಡಿ, ಕೇಂದ್ರ ಸರ್ಕಾರದ ಸೇವಾ ಸಿಂಧು ಕಾರ್ಯಕ್ರಮದಡಿ ಗೋಕಾಕ ತಾಲೂಕಿನಲ್ಲಿ 44 ಕಾಮನ್‌ ಸರ್ವಿಸ್‌ ಸೆಂಟರ್‌ ತೆರಯಲಾಗಿದೆ. ಈ ಯೋಜನೆಯು ಜನರಿಗೆ ಸರ್ಕಾರ ನಿಗದಿ ಪಡಿಸಿದ ದರದಲ್ಲಿ ಜನನ, ಮರಣ, ಆಯುಶ್ಮಾನ, ಇ-ಶ್ರಮ್‌, ಆಧಾರ, ರೇಶನ್‌ ಕಾರ್ಡ್‌ ಸೇರಿದಂತೆ ಕೇಂದ್ರ …

Read More »

*ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ*

ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ ಅವರು ಶ್ರಮಿಸಬೇಕು. …

Read More »

25 ರಂದು ಸತೀಶ ಶುಗರ್ಸ ಕಾರ್ಖಾನೆಯ ನೂತನ ಎಥೆನಾಲ್ ಘಟಕ ಕಾರ್ಯಾರಂಭ: ಪ್ರದೀಪಕುಮಾರ ಇಂಡಿ

ಗೋಕಾಕ; ಈ ಭಾಗದ ರೈತರ ಜೀವನಾಡಿಯಾಗಿರುವ ” ಸತೀಶ ಶುಗರ್ಸ ಕಾರ್ಖಾನೆಯ  ನೂತನ ಎಥೆನಾಲ್ ಘಟಕವು ಇದೇ 25 ರಂದು  ಮಂಗಳವಾರ ಕಾರ್ಯಾರಂಭಗೊಳ್ಳಲಿದೆ”  ಎಂದು ಕಾರ್ಖಾನೆಯ ಚೇರಮನ್ನ ಮತ್ತು ಸಿಎಪ್ಓ   ಪ್ರದೀಪಕುಮಾರ  ಇಂಡಿ ಅವರು ಹೇಳಿದರು. ದೇಶದ ಪರ್ಯಾಯ ಇಂಧನದ ತುರ್ತು ಅಗತ್ಯತೆಗೆ ಅನುಸಾರವಾಗಿ ನಮ್ಮ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ  ಸತೀಶ ಜಾರಕಿಹೊಳಿ ರವರ ಸಮರ್ಥ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಸಂಬಂಧಿತ ಎಲ್ಲ ಕೆಲಸಗಳನ್ನು  ನಿಗಧಿತ ಅವಧಿಯಲ್ಲಿ ವ್ಯವಸ್ಥಿತವಾಗಿ ಪರಿಪೂರ್ಣಗೊಳಿಸಲಾಗಿದೆ. …

Read More »

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಭಾನುವಾರದಂದು ಹೇಳಿಕೆ ನೀಡಿರುವ ಅವರು, ಉದ್ಧೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ ಅಧಿಕೃತ …

Read More »

ಗೋಕಾಕನಿಂದ ಮೂವರು ಪಿಎಸ್‌ಐ ಹುದ್ದೆಗೆ ಆಯ್ಕೆ ರಮೇಶ ಜಾರಕಿಹೊಳಿ ಹರ್ಷ!

ಗೋಕಾಕ: ಗೋಕಾಕ ತಾಲೂಕಿನ ಇಬ್ಬರು ಯುವತಿಯರು ಮತ್ತು ಒರ್ವ ಯುವಕ ಸೇರಿ ಮೂವರು ಪಿಎಸ್‌ಐ ಹುದ್ದೆಗೆ ನೇಮಕಗೊಂಡಿದ್ದು, ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ತಾಲೂಕಿನ ಮಲ್ಲಾಪೂರ ಪಿಜಿ ಪಟ್ಟಣದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಮಮದಾಪೂರ ಗ್ರಾಮದ ಕೀರ್ತಿ ನಿಂಗಪ್ಪ ಕಮತ, ಶಿವಾಪೂರ(ಕೊ) ಗ್ರಾಮದ ಕಿರಣ ಬಸನಗೌಡ ಪಾಟೀಲ ೨೦೨೦ನೇ ಸಾಲಿನ ಕರ್ನಾಟಕ ಸಿವಿಲ್ ಪೋಲಿಸ್ ಸಬ್ ಇನ್ಸಪೆಕ್ಟರ್ …

Read More »

ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ

ಗೋಕಾಕ:  ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು,  ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನೇತಾಜಿ  ಸುಭಾಷ್ ಚಂದ್ರ ಬೋಸ್‌ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು.  ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ,   ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ …

Read More »

ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಕಾಂಗ್ರೆಸ್ ಸೇವಾದಳ ರಾಷ್ಟ್ರೀಯ ತರಬೇತಿ  ಕೇಂದ್ರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆಯುತ್ತಿರುವ ಸೈನಿಕರು ಮತ್ತು ಪೊಲೀಸ್ ಪೇದೆ ಆಕಾಂಕ್ಷಿಗಳಿಗೆ ನಡೆಯುತ್ತಿರುವ ಉಚಿತ ತರಬೇತಿ ಶಿಬಿರದಲ್ಲಿ ಆಕಾಂಕ್ಷಿಗಳನ್ನು ಉದ್ದೇಶಿಸಿ ಅವರು …

Read More »

ಮಾ 1,2,3 & 4 ರಂದು ಶರಣ ಸಂಸ್ಕೃತಿ ಉತ್ಸವ ಮುರುಘರಾಜೇಂದ್ರ ಶ್ರೀ ಗಳು ಮಾಹಿತಿ

ಗೋಕಾಕ ಜ 22 : ಫೆಬ್ರವರಿ ದಿನಾಂಕ 1,2,3 ಮತ್ತು 4 ರಂದು ನಡೆಯಬೇಕಿದ್ದ 17 ನೇ ಸಾಲಿನ ಶರಣ ಸಂಸ್ಕೃತಿ ಉತ್ಸವವನ್ನು ಕೊರೋನಾ ಹರಡುತ್ತಿರುವದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಮಾರ್ಚ ದಿನಾಂಕ 1,2 ,3 ಮತ್ತು 4 ಕ್ಕೆ ಮುಂದೂಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.   ಶುಕ್ರವಾರ ಸಾಯಂಕಾಲ ಶೂನ್ಯ ಸಂಪಾದನ ಮಠದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿ ಅವರು ಮಾತನಾಡಿದರು   …

Read More »