ಯಮಕನಮರಡಿ: ಗ್ರಾಮಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದ ಪಾತರೋಟಗಲ್ಲಿಯಲ್ಲಿಒಟ್ಟು 15 ಲಕ್ಷ ವೆಚ್ಚದ ಚರಂಡಿ ಮತ್ತು ಪೇವರಸ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಅವರು ಮಾತನಾಡಿದರು. ಇಂದಿನ ಯುವಕರು ದುಶ್ಚಟಗಳತ್ತ ಮುಖ ಮಾಡದೇ ಗ್ರಾಮಗಳ ಅಭಿವೃದ್ಧಿ ಮಾಡುವತ್ತ ಮುಖ ಮಾಡಬೇಕಿದೆ ಎಂದ ಅವರು, ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ನಮ್ಮ ದೇಶ …
Read More »Daily Archives: ಫೆಬ್ರವರಿ 16, 2022
ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ!
ಗೋಕಾಕ ತಾಲೂಕಾ ಘಟಕದ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ ನೇಮಕ ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ …
Read More »ಶಾಸಕ ಸತೀಶ್ ಜಾರಕಿಹೊಳಿ ಪ್ರಶ್ನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಉತ್ತರ
ಬೆಂಗಳೂರು: ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅವುಗಳನ್ನು ಭರ್ತಿ ಮಾಡಲು ಸರ್ಕಾರ ತೆಗೆದುಕೊಂಡಿರುವ ಕ್ರಮ ಏನು? ಎಂದು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಉತ್ತರಿಸಿದ್ದಾರೆ. ಶಾಸಕ ಸತೀಶ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, 2021-22ನೇ ಸಾಲಿನಲ್ಲಿ ಸರ್ಕಾರ 1171 ಪೊಲೀಸ್ ಸಬ್ …
Read More »ಕವಿ ಚೆನ್ನವೀರ ಕಣವಿ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ
ಬೆಳಗಾವಿ: ಕನ್ನಡ ಸಾಹಿತ್ಯದ ಹಿರಿಯ ಚೇತನ, ಸೌಹಾರ್ದತೆಯನ್ನು ಸಾರುತ್ತಾ ಸಮನ್ವಯ ಕವಿ ಎಂದೇ ಖ್ಯಾತರಾಗಿದ್ದ ಕವಿ ಚೆನ್ನವೀರ ಕಣವಿ ಅವರ ನಿಧನದಿಂದ ಅತೀವ ದು:ಖವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ‘ಕನ್ನಡದ ಸಾಹಿತ್ಯ ಲೋಕದ ನಕ್ಷತ್ರದಂತಿದ್ದ ಚನ್ನವೀರ ಕಣವಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಬಹು ದೊಡ್ಡ ನಷ್ಟ ಎಂದು ಅವರು ಹೇಳಿದ್ದಾರೆ. ವಿಮರ್ಶೆಗಳ ಜತೆಗೆ …
Read More »