Breaking News

Daily Archives: ಮೇ 19, 2022

ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಗೋಕಾಕದ ಅಪೇಕ್ಷಾ ಸಾಂಗ್ಲಿಕರ!

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ 99.5% …

Read More »

SSLC ಫಲಿತಾಂಶ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಗೋಕಾಕ ವಲಯಕ್ಕೆ ದ್ವಿತೀಯ ಸ್ಥಾನ : ಶಾಸಕ ರಮೇಶ ಜಾರಕಿಹೊಳಿ ಹರ್ಷ

ಗೋಕಾಕ : ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿರುವುದಕ್ಕೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಗೋಕಾಕ ಶೈಕ್ಷಣಿಕ ವಲಯ ಈ ಬಾರಿಯೂ ದ್ವಿತೀಯ ಸ್ಥಾನ ಗಳಿಸಿದ್ದು, ಶೇ ಶೇಕಡಾ 94.58 ರಷ್ಟು ಫಲಿತಾಂಶ ಬಂದಿದೆ. ಗೋಕಾಕ ವಲಯ ದ್ವಿತೀಯ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ …

Read More »

ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ 9 ಜನ ಬಲಿ; ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ!

ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಪೂರ್ವ ಮಳೆಯಿಂದಾಗಿ ಭಾರೀ ಅನಾಹುತವೇ ಸಂಭವಿಸಿದೆ. ದಿಢೀರ್ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯಾಧ್ಯಂತ ಇಲ್ಲಿಯವರೆಗೆ 9 ಮಂದಿ ಸಾವನ್ನಪ್ಪಿದ್ದರೇ, 29 ಮನೆಗಳು ಸಂಪೂರ್ಣ ಹಾನಿಗೊಂಡಿವೆ. ಈ ಕುರಿತಂತೆ ಕಂದಾಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದುವರೆಗೆ ಬೇಸಿಗೆ ಮಳೆಯಿಂದಾಗಿ 9 ಮಂದಿಗೆ ಸಾವನ್ನಪ್ಪಿದ್ದಾರೆ.204 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 431 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. 29 ಮನೆಗಳು ಸಂಪೂರ್ಣ ಹಾನಿಗೊಂಡಿರೋದಾಗಿ ತಿಳಿಸಿದೆ. ರಾಜ್ಯಾಧ್ಯಂತ ಭಾರೀ …

Read More »

ಎಸ್.ಎಸ್.ಎಲ್.ಸಿ ಫಲಿತಾಂಶ: ಗೋಕಾಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ : ಬಿಇಒ ಜಿ.ಬಿ.ಬಳಗಾರ

ಗೋಕಾಕ: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಗೋಕಾಕ ವಲಯವು ಶೇಕಡಾ 94.58 ಪಡೆದು, A+ ಶ್ರೇಣಿಯೊಂದಿಗೆ ( ಎ+) ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ತಿಳಿಸಿದ್ದಾರೆ.   ಪರೀಕ್ಷೆ ಬರೆದ 4517 ವಿದ್ಯಾರ್ಥಿಗಳಲ್ಲಿ 4272 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 230 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ನಾಲ್ಕು ವಿದ್ಯಾರ್ಥಿಗಳು ರಾಜ್ಯಕ್ಕೆ ಮೂರನೇ ಹಾಗೂ ವಲಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೇ ಅಗ್ರ ಸ್ಥಾನ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ

ಮೂಡಲಗಿ: ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ …

Read More »

SSLC ವಿದ್ಯಾರ್ಥಿಗಳ ಕೈ ಹಿಡಿದ “ಗೆಲುವಿನತ್ತ ನಮ್ಮ ಪಯಣ” ಪುಸ್ತಕ

ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ಯಪಡಿಸಿದ ವಿದ್ಯಾರ್ಥಿಗಳು ಬೆಳಗಾವಿ: ವಿದ್ಯಾರ್ಥಿ ಜೀವನದ ಮಹತ್ವದ ಕಾಲಘಟ್ಟ ಎನಿಸಿರುವ ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಶೈಕ್ಷಣಿಕವಾಗಿ ಬೆಳಗಾವಿ ಜಿಲ್ಲೆಯನ್ನು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಎಂದು ವಿಂಗಡಿಸಲಾಗಿದ್ದು, ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳು ಎ ಗ್ರೇಡ್ ನಲ್ಲಿ ಸಾಧನೆ ಮಾಡಿವೆ. …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ!

https://karresults.nic.in/   2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 85.63 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 7,30, 881 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಅವರಲ್ಲಿ 3.58.602 ಬಾಲಕರು ಪಾಸಾಗಿದ್ದಾರೆ. 3,72,279 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಸಾಧನೆ ಮಾಡಿದ್ದಾರೆ. ‌ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ ದಾಖಲಾಗಿದ್ದರೆ, ಅನುದಾನಿತ ಶಾಲೆಗಳಲ್ಲಿ …

Read More »