Breaking News

Monthly Archives: ಜೂನ್ 2022

“ಸಾಹುಕಾರ್ ಕಮಾಲ್ ಮಹಾರಾಷ್ಟ್ರದಲ್ಲಿ ಸಾಹುಕಾರ್ ಶಕ್ತಿ ಪ್ರದರ್ಶನ” ಜಾರಕಿಹೊಳಿ ಅಭಿಮಾನಿಗಳ ಪೋಸ್ಟ್ ವೈರಲ್!

  ಗೋಕಾಕ :ಮಹಾರಾಷ್ಟ್ರದ ಅಘಾಡಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ 15 ರಿಂದ 20 ದಿನ ಮುಂಬೈನಲ್ಲೆ ಸಾಹುಕಾರ್ ಇದ್ದು ಬಿಜೆಪಿ ಸರ್ಕಾರ ತರಲು ಮುಂದಾಗಿದ್ದರು,ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ ಮಹಾರಾಷ್ಟ್ರದ ಮಹಾವಿಕಾಸ ಅಘಾಡಿ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಸಾಹುಕಾರ್ ರಮೇಶ್ ಜಾರಕಿಹೊಳಿ ಎಂದು ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಪೋಸ್ಟ್ ದಲ್ಲಿ ಏನಿದೆ? “ಸಾಹುಕಾರ್ ಕಮಾಲ್ ಸಾಹುಕಾರ್ ಶಕ್ತಿ ಪ್ರದರ್ಶನ …

Read More »

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ ಘೋಷಣೆ!

ನವದೆಹಲಿ: ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ ಬಹುತೇಕ ತೆರೆ ಬಿದ್ದಂತಾಗಿದೆ.ವಿಶ್ವಾಸಮತ ಯಾಚಿಸುವಂತೆ ಸೂಚನೆ ನೀಡಿರುವ ಮಹಾರಾಷ್ಟ್ರ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಕ್ಷಣಗಳಲ್ಲಿ ಫೇಸ್‌ಬುಕ್ ಲೈವ್‌ ಬಂದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ತಮ್ಮ ಎಂಎಲ್ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆ!

ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ …

Read More »

ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಯುವ ನಾಯಕಿ ಪ್ರೀಯಾಂಕ ಜಾರಕಿಹೊಳಿ!

ಗೋಕಾಕ : ೩ನೇ ದಕ್ಷಿಣ ವಲಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಶಾಲಾ ಮಕ್ಕಳಿಗೆ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದರು. ೨೫ ಹಾಗೂ ೨೬ ರಂದು ಶಿವಮೊಗ್ಗದಲ್ಲಿ ನಡೆದ ದಕ್ಷಿಣ ವಲಯ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ೧೭ ವರ್ಷದ ಒಳಗಿನ ಗೋಕಾಕದ ಶಾಲಾ ಮಕ್ಕಳಾದ ಕೇದಾರಿ ಜಿದ್ದಿಮನಿ ಪ್ರಥಮ ಸ್ಥಾನ, ಅಭನ್ ಸಾಬ್ ಮುಲ್ಲಾ‌ ದ್ವಿತೀಯ ಸ್ಥಾನ, ಈಶ್ವರ್ ಗಾಣಿಗೇರ್ ದ್ವಿತೀಯ ಸ್ಥಾನ, ಆದರ್ಶ …

Read More »

ಯುವ ಜನತೆ ದುಶ್ಚಟಗಳತ್ತ ಮುಖ ಮಾಡದೇ ಕ್ರೀಡೆಗಳತ್ತ ಹೆಚ್ಚು ಆಸಕ್ತಿ ಹೊಂದಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ ಕರೆ

ಪಾಶ್ವಾಪುರ: ಇಂದು ಜಾಗತಿಕ ಮಟ್ಟದಲ್ಲಿ ಕ್ರಿಕೆಟ್‌ ಒಂದು ಜನಪ್ರಿಯ ಕ್ರೀಡೆಯಾಗಿದ್ದು , ಎಲ್ಲ ವಿದ್ಯಾರ್ಥಿಗಳು ಸಾಂಘಿಕ ಸ್ಫೂರ್ತಿಯಿಂದ ಭಾಗವಹಿಸಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡರಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಕ್ಷೇತ್ರದ ಬಸ್ಸಾಪುರ ಗ್ರಾಮದಲ್ಲಿ ನಡೆದ ರಾಹುಲ್‌ ಅಭಿಮಾನಿ ಬಳಗ ಹಮ್ಮಿಕೊಂಡಿದ್ದ ಟೆನಿಸ ಬಾಲ್‌ ಹಾಪ್‌ ಪಿಚ್‌ ಕ್ರಿಕೆಟ್‌ ಪಂದ್ಯಾವಳಿಗಳಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಟ್ರೋಫಿ ಹಾಗೂ ಬಹುಮಾನ ವಿತರಿಸಿ ಅವರು ಮಾತನಾಡಿ, ಕ್ರೀಡೆಯು ಜೀವನದ ಮುಖ್ಯ …

Read More »

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡಿ, ಸುಖಾಸುಮ್ಮನೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಪೊಲೀಸರ ತಪಾಸಣೆಗೆ ಬೆದರಿ …

Read More »

ಪೋಲಿಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ!

ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ದೊಡ್ಡ ಮಟ್ಟದ ವರ್ಗಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (ಎಸ್​ಪಿ) ನೇಮಿಸಿ, ವರ್ಗಾವಣೆ ಮಾಡಿದೆ. 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ: ಜೋಶಿ ಶ್ರೀನಾಥ್ ಮಹಾದೇವ್ – IPS (KN- 2012), ಉಪ ಪೊಲೀಸ್ ಆಯುಕ್ತರು, ಆಗ್ನೇಯ ವಿಭಾಗ, ಬೆಂಗಳೂರು ನಗರ ಅವರನ್ನು …

Read More »

ನಾಟಕ, ಸಂಗೀತ ಇತರ ಕಲೆಗಳಿಗೆ ನಿರಂತರ ಪ್ರೋತ್ಸಾಹಕ್ಕೆ ಬದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭ   ಬೆಳಗಾವಿ: ನಾಟಕ, ಸಂಗೀತ ಮತ್ತು ಇತರ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲು ನೂತನ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ …

Read More »

ಎಲ್ಆರ್ ಜೆ ಟ್ರೋಫಿ ‌2022 ಯಲ್ಲಿ ಕೊಲ್ಹಾಪುರ ತಂಡ ಭರ್ಜರಿ ಗೆಲುವು!

ಗೋಕಾಕ : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಎಲ್ಆರ್ ಜೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಲ್ಹಾಪುರ ತಂಡ ಮೊದಲ ಸ್ಥಾನ ಪಡೆದು 1.50.000 ನಗದು ಬಹುಮಾನ ವಿಜೇತರಾಗಿದ್ದಾರೆ. ರಬಕವಿ ಹಾಗೂ ಕೊಲ್ಹಾಪುರ ಅಂತಿಮ ಪಂದ್ಯದಲ್ಲಿ ಕೊಲ್ಹಾಪುರ ತಂಡ ಗೆಲುವು ಸಾಧಿಸಿದೆ. ಎರಡನೇ ಸ್ಥಾನದಲ್ಲಿ ರಬಕವಿ ತಂಡ 75.000 ನಗದು ಬಹುಮಾನ ಪಡೆದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಾವೀದ್ ಗೋಕಾಕ, ಡಿವಾಎಸ್ಪಿ ಮನೋಜಕುಮಾರ ನಾಯ್ಕ್ …

Read More »

ಅಪಘಾತದಲ್ಲಿ 7 ಜನ ಸಾವು; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸಂತಾಪ!

ಗೋಕಾಕ: ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್‌ ವಾಹನ ಬಳ್ಳಾರಿ ನಾಲೆಗೆ ಉರುಳಿ ಬಿದ್ದು 7 ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿ, ಆತ್ಮಕ್ಕೆ ಶಾಂತಿ ಸಿಗಲೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡವರು ಶೀಘ್ರ ಚೆತರಿಸಿಕೊಳ್ಳಲಿ. ಮೃತರ ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು …

Read More »