ಗೋಕಾಕ : ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಹಾಗೂ ಕೃಷಿ ಸಂಜೀವಿನಿ ವಾಹನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ವೈಜ್ಞಾನಿಕ ಯುಗದಲ್ಲಿ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯ ರೈತರು ಈ ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೃಷಿ ಇಲಾಖೆ ಹಾಗೂ ಇತರ ಕೃಷಿಗೆ …
Read More »Daily Archives: ಜುಲೈ 7, 2022
ಘಟಪ್ರಭಾದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ!
ಗೋಕಾಕ : ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನೂತನವಾಗಿ ಬಸ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕ ವತಿಯಿಂದ ಗುರುವಾರದಂದು ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕೆಂಪಣ್ಣ ಚೌಕಾಶಿ, ಪ್ರಶಾಂತ್ ಅರಳಿಕಟ್ಟಿ , ಸಂತೋಷ ಖಂಡ್ರಿ, ಮಲಿಕಜಾನ ತಲವಾರ, ಶೆಟ್ಟೆಪ್ಪ ಗಾಡಿವಡ್ಡರ, ಅಪ್ಟಸಾಬ ಮುಲ್ಲಾ, ಬಸವರಾಜ ಬೆಡರಟ್ಟಿ, ಮಾರುತಿ ಚೌಕಾಶಿ, ರಾಜು ದೊಡ್ಡಮನಿ, ತಮ್ಮಣ್ಣ ಅರಬಾಂವಿ ಸೇರಿದಂತೆ ಅನೇಕರು ಇದ್ದರು
Read More »ಬಕ್ರೀದ್ ಹಬ್ಬದ ನಿಮಿತ್ಯ ಘಟಪ್ರಭಾದಲ್ಲಿ ಪೂರ್ವಭಾವಿ ಸಭೆ.
ಘಟಪ್ರಭಾ: ಜುಲೈ 10ರಂದು ಬಕ್ರೀದ್ ಹಬ್ಬವು ಶಾಂತರೀತಿಯಿಂದ ಜರುಗುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ಮತ್ತು ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಘಟಪ್ರಭಾ ಪೋಲಿಸ್ ಠಾಣೆಯ ಸಿ ಪಿ ಐ ಶ್ರೀ ಶೈಲ ಬ್ಯಾಕೂಡ ಅವರು ಹೇಳಿದರು. ಅವರು ಬಕ್ರಿದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ,ಜಾನುವಾರು ಸಾಗಾಣಿಕೆ ತಡೆಗಟ್ಟುವ ಕುರಿತಂತೆ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಜುಲೈ6ರಂದು ಸಂಜೆ ನಡೆದ ಪೂರ್ವ ಸಿದ್ಧತೆಯ ಸಭೆಯ …
Read More »*ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ*
ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಉದ್ದೇಶಿಸಿ …
Read More »*ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ
*ಹಿಡಕಲ್ ಡ್ಯಾಂ ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಖಂಡ್ರಟ್ಟಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಹುಂಡೇಕರ* *ಗೋಕಾಕ :* ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ …
Read More »
CKNEWSKANNADA / BRASTACHARDARSHAN CK NEWS KANNADA