Breaking News

Monthly Archives: ಜುಲೈ 2022

ಕುಲಗೋಡ ಪೋಲಿಸರ ಭರ್ಜರಿ ಭೇಟೆ; 95 ಕೆ.ಜಿ ಗಾಂಜಾ ವಶ.!

ಕುಲಗೋಡ : ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮ ಗಾಂಜಾ ಬೆಳೆಯುತ್ತಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ, ಸುಮಾರು 95 ಕೆ.ಜಿ, ₹ 9.51 ಲಕ್ಷ ಮೌಲ್ಯದ ಗಾಂಜವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಬಸಪ್ಪ ರಾಮಪ್ಪ ಲಗಳಿ. ಸಿದ್ದಪ್ಪಾ ಬಸಪ್ಪಾ ಲಗಳಿ ಬಂಧಿತ ಆರೋಪಿಗಳು. ಪಿಎಸ್ಐ ಗೋವಿಂದಗೌಡ ಎಸ್ ಪಾಟೀಲ್, ಎಎಸ್ಐ ಬಿ ವೈ ಅಂಬಿ, ಕಲ್ಮೇಶ್ ಬಾಗಲಿ, ಸಿದ್ದು ಮಂಗಿ, ಮಾಳಪ್ಪಾ ಆಡಿನ, ಮಹೇಶ್ ಲದ್ದಿ, ಎಸ್ ವಿ ಹಂಜಿ, ಮಾರುತಿ ಕುರಿನವರ್, …

Read More »

ಕೃಷಿ ಸಂಜೀವಿನಿ ವಾಹನಕ್ಕೆ ಶಾಸಕ ರಮೇಶ ಜಾರಕಿಹೊಳಿ ಚಾಲನೆ!

ಗೋಕಾಕ : ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹೆಚ್ಚಿನ ಪ್ರಗತಿ ಸಾಧಿಸುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೃಷಿ ಇಲಾಖೆಯ ಮುಂಗಾರು ಹಂಗಾಮಿನ ಕೃಷಿ ಅಭಿಯಾನ ಹಾಗೂ ಕೃಷಿ ಸಂಜೀವಿನಿ ವಾಹನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ವೈಜ್ಞಾನಿಕ ಯುಗದಲ್ಲಿ ಯಂತ್ರಗಳ ಅಳವಡಿಕೆಯಿಂದ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯ ರೈತರು ಈ ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕೃಷಿ ಇಲಾಖೆ ಹಾಗೂ ಇತರ ಕೃಷಿಗೆ …

Read More »

ಘಟಪ್ರಭಾದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ!

ಗೋಕಾಕ : ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನೂತನವಾಗಿ ಬಸ ನಿಲ್ದಾಣ ನಿರ್ಮಿಸುವಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟದ ತಾಲೂಕು ಘಟಕ ವತಿಯಿಂದ ಗುರುವಾರದಂದು ನಗರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಕೆಂಪಣ್ಣ ಚೌಕಾಶಿ, ಪ್ರಶಾಂತ್ ಅರಳಿಕಟ್ಟಿ , ಸಂತೋಷ ಖಂಡ್ರಿ, ಮಲಿಕಜಾನ ತಲವಾರ, ಶೆಟ್ಟೆಪ್ಪ ಗಾಡಿವಡ್ಡರ, ಅಪ್ಟಸಾಬ ಮುಲ್ಲಾ, ಬಸವರಾಜ ಬೆಡರಟ್ಟಿ, ಮಾರುತಿ ಚೌಕಾಶಿ, ರಾಜು ದೊಡ್ಡಮನಿ, ತಮ್ಮಣ್ಣ ಅರಬಾಂವಿ ಸೇರಿದಂತೆ ಅನೇಕರು ಇದ್ದರು

Read More »

ಬಕ್ರೀದ್ ಹಬ್ಬದ ನಿಮಿತ್ಯ ಘಟಪ್ರಭಾದಲ್ಲಿ ಪೂರ್ವಭಾವಿ ಸಭೆ.

ಘಟಪ್ರಭಾ: ಜುಲೈ 10ರಂದು ಬಕ್ರೀದ್ ಹಬ್ಬವು ಶಾಂತರೀತಿಯಿಂದ ಜರುಗುವಂತೆ ಮತ್ತು ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ಮತ್ತು ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಘಟಪ್ರಭಾ ಪೋಲಿಸ್ ಠಾಣೆಯ ಸಿ ಪಿ ಐ ಶ್ರೀ ಶೈಲ ಬ್ಯಾಕೂಡ ಅವರು ಹೇಳಿದರು. ಅವರು ಬಕ್ರಿದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ,ಜಾನುವಾರು ಸಾಗಾಣಿಕೆ ತಡೆಗಟ್ಟುವ ಕುರಿತಂತೆ ಪೋಲಿಸ್ ಠಾಣೆಯ ಸಭಾಂಗಣದಲ್ಲಿ ಜುಲೈ6ರಂದು ಸಂಜೆ ನಡೆದ ಪೂರ್ವ ಸಿದ್ಧತೆಯ ಸಭೆಯ …

Read More »

*ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ*

ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು ಉದ್ದೇಶಿಸಿ …

Read More »

*ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ

*ಹಿಡಕಲ್ ಡ್ಯಾಂ ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಖಂಡ್ರಟ್ಟಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಹುಂಡೇಕರ* *ಗೋಕಾಕ :* ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ …

Read More »

ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರ ರಾಜ್ಯಸಭೆಗೆ ನಾಮನಿರ್ದೇಶನ!

ನವದೆಹಲಿ: ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ ಅವರನ್ನು ಅಭಿನಂದಿಸಿದ್ದಾರೆ. ಇಳಯರಾಜಾ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ‘ಇಳಯರಾಜಾ ಜೀ ಅವರ ಸೃಜನಶೀಲ ಪ್ರತಿಭೆ ತಲೆಮಾರುಗಳಾದ್ಯಂತ ಜನರನ್ನು ಮಂತ್ರಮುಗ್ಧರನ್ನಾಗಿಸಿದೆ. ಅವರ ಕೃತಿಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅಷ್ಟೇ …

Read More »

ಬೈಕ್ ಕಳ್ಳರನ್ನ ಹೆಡೆಮೂರಿ ಕಟ್ಟಿದ ಗೋಕಾಕ ಪೋಲಿಸ್ ಇಲಾಖೆ, 20 ಬೈಕ್ ಪತ್ತೆ!

ಗೋಕಾಕ : ನಗರದಲ್ಲಿ ಕೆಲವು ತಿಂಗಳಿಂದ ಬೈಕ್ ಕಳ್ಳತನ ಹೆಚ್ಚಾಗಿತ್ತಿದ್ದು, ಇಂದು ಪೋಲಿಸ್ ಇಲಾಖೆ ಕಳ್ಳರನ್ನು ಬಂಧಿಸಿದ್ದಾರೆ. ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಮೋಟಾರ ಸೈಕಲಗಳು ಕಳ್ಳತನವಾಗುತ್ತಿದ್ದು , ಈ ಬಗ್ಗೆ ಪ್ರಕರಣಗಳು ದಾಖಲಾಗಿದ್ದು , ಅವುಗಳ ಪತ್ತೆಗಾಗಿ ಬೆಳಗಾವಿ ಆರಕ್ಷಕ ಅಧೀಕ್ಷಕರು ಸಂಜೀವ ಪಾಟೀಲ, ಹಾಗೂ ಬೆಳಗಾವಿ ಹೆಚ್ಚುವರಿ ಎಸ್ ಪಿ ಮಹಾನಿಂಗ ನಂದಗಾವಿ, ಗೋಕಾಕ ಡಿಎಸ್‌ಪಿ ಮನೋಜಕುಮಾರ ನಾಯಿಕ ರವರ ಮಾರ್ಗದರ್ಶನದಲ್ಲಿ , …

Read More »

*ಬಕ್ರೀದ್ ಹಬ್ಬ; ಗೋಕಾಕ ಗ್ರಾಮಿಣ ಪೋಲಿಸ್ ಠಾಣೆಯಲ್ಲಿ ಶಾಂತಿ ಸಭೆ!*

ಗೋಕಾಕ : ನಗರದ ಗ್ರಾಮಿಣ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಸಲಾಯಿತು. ಜುಲೈ 10ರಂದು ನಡೆಯಲಿರುವ ಬಕ್ರೀದ್ ಹಬ್ಬದ ನಿಮಿತ್ತ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಪ್ರಕಾಶ್ ಹೋಳಪ್ಪಗೋಳ, ಸಿಪಿಐ ಗೋಪಾಲ ರಾಠೋಡ, ನಗರಸಭೆ ಸ ಕಾ ಅ ಪರಿಸರ ಎಂ ಗಜಕೋಶ, ಪಸು ಸಂಗೋಪನಾ ಇಲಾಖೆ ಅಧಿಕಾರಿ ಮೋಹನ ಕಮತ್, ಪಿಎಸ್ಐ ಎನ್ ಕಿಲಾರಿ, ತೌಸಿಪ್ ಘೋರಿ ರವರ ನೇತೃತ್ವದಲ್ಲಿ ಶಾಂತಿಃ ಸಭೆ ನಡೆಸಲಾಗಿದ್ದು, …

Read More »

ಪತ್ರಕರ್ತರು ವೃಕ್ಷದ ಹಾಗೆ ಎಲ್ಲರಿಗೂ ಒಳ್ಳೆಯ ಮಾಡುವಲ್ಲಿ ಕಾರ್ಯಪ್ರವೃತ್ತವಾಗಬೇಕು : ಸರ್ವೋತ್ತಮ ಜಾರಕಿಹೊಳಿ

ಬೆಳಗಾವಿ : ಪತ್ರಕರ್ತರು ಸಮಾಜದ ಮೂರನೇ ಕಣ್ಣು ಎಂದು ಗೋಕಾಕನ ಎಲ್.ಆರ್.ಜೆ ಪದವಿಪೂರ್ವ ಮಹಾವಿದ್ಯಾಲಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಕರ್ತರು ವೃಕ್ಷದ ಹಾಗೆ ಎಲ್ಲರಿಗೂ ಒಳ್ಳೆಯ ಮಾಡುವಲ್ಲಿ ಕಾರ್ಯಪ್ರವೃತ್ತವಾಗಬೇಕು. ಪತ್ರಕರ್ತರ ತಮ್ಮ …

Read More »