Breaking News

Monthly Archives: ಮೇ 2023

*ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ಕುಡಿಯುವ ನೀರಿಗಾಗಿ ನಾಳೆಯಿಂದ 5 ದಿನಗಳವರೆಗೆ 2.17 ಟಿಎಮ್‍ಸಿ ನೀರು ಬಿಡುಗಡೆ-ಶಾಸಕ ಬಾಲಚಂದ್ರ ಜಾರಕಿಹೊಳಿ*.

ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ಜನ ಹಾಗೂ ಜಾನುವಾರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನಾಳೆಯಿಂದ 5 ದಿನಗಳವರೆಗೆ ಒಟ್ಟು 2.17 ಟಿಎಮ್‍ಸಿ ನೀರನ್ನು ಹರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮೂಡಲಗಿ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ ತಾಲೂಕುಗಳ ಬಹುಗ್ರಾಮ ಕುಡಿಯುವ ನೀರು ಸರಬುರಾಜು …

Read More »

*ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

ಅರಭಾವಿ ಮಠ(ತಾ.ಮೂಡಲಗಿ)-ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ ಶಿ. …

Read More »

ಹೃದಯ ಶ್ರೀಮಂತ, ಸಾಹುಕಾರ ಸತೀಶ್ ಜಾರಕಿಹೊಳಿ 5ನೇ ಬಾರಿ ಸಚಿವರಾಗಿ ಆಯ್ಕೆ; ರಾಜಕೀಯ ಜೀವನ…..

ಕೆಪಿಸಿಸಿ ಕಾರ್ಯಾಧ್ಯಕ್ಷ ಆಗಿ ಕಾರ್ಯನಿರ್ವಹಿಸುತ್ತಿದ್ದ ಸತೀಶ್ ಜಾರಕಿಹೊಳಿ ಇಂದು 5ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೌಢ್ಯತೆ ವಿರುದ್ಧ ಸಮರ ಸಾರಿ ಮಾನವ ಬಂಧುತ್ವ ವೇದಿಕೆ ಸ್ಥಾಪಿಸಿ ರಾಜ್ಯಾದ್ಯಂತ ಮೂಢನಂಬಿಕೆ ವಿರುದ್ಧ ಹೋರಾಟ ನಡೆಸುತ್ತ ಬಂದಿರುವ ಸತೀಶ್ ಜಾರಕಿಹೊಳಿ ಅಪರೂಪದ ರಾಜಕಾರಣಿ‌. ಸಿದ್ದರಾಮಯ್ಯ ಕಟ್ಟಾ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ರಾಜಕೀಯ ಜೀವನವೇ ವಿಭಿನ್ನ. 1992ರ ಗೋಕಾಕ್ ನಗರಸಭೆ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ …

Read More »

ಚುನಾವಣೆ ನಂತರ ಮತ್ತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಪ್ರತಿ ಶನಿವಾರ ಮತ್ತೆ ಅನ್ನ ಸಂತರ್ಪಣೆ ಪ್ರಾರಂಭ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ   ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಶ್ರೀ ವಿಠ್ಠಲ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »

*ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು.  ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, …

Read More »

ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಿ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್‍ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ …

Read More »

ಸತೀಶ ಜಾರಕಿಹೊಳಿ ಹೆಗಲಿಗೆ ʻಜಿಲ್ಲಾ ಉಸ್ತುವಾರಿʼಹೊಣೆ ?

ಬೆಳಗಾವಿ : 18 ಸ್ಥಾನಗಳಲ್ಲಿ 11 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹಾಂತೇಶ ಕೌಜಲಗಿ, ಮೂರು ಬಾರಿ ಗೆದ್ದಿರುವ ಗಣೇಶ ಹುಕ್ಕೇರಿ ಅಥವಾ ಅವರ ತಂದೆ ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ಲಕ್ಷ್ಮಣ ಸವದಿ, ಮಹಿಳಾ ಕೋಟಾದಲ್ಲಿ ಲಕ್ಷ್ಮೀ ಹೆಬ್ಬಾಳಕರ್, ಕೂಡ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಶನಿವಾರ ಸಂಜೆ ಕುವೆಂಪು ನಗರದ ಸತೀಶ ಜಾರಕಿಹೊಳಿ ಅವರ ನಿವಾಸದಲ್ಲಿ ಲಕ್ಷ್ಮಣ ಸವದಿ ಸೇರಿದಂತೆ ಗೆದ್ದ …

Read More »

ಇಂದಿನ CLP ಸಭೆಗೆ ಅನೇಕ ಶಾಸಕರು ಗೈರು: ಸಿದ್ದುಗೆ 75, ಡಿಕೆಶಿಗೆ 40 ಶಾಸಕರ ಬೆಂಬಲ, ನಾಳೆ ಸಿಎಂ ಆಯ್ಕೆ ಫೈನಲ್

ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷದಿಂದ ಶಾಸಕಾಂಗ ಸಭೆ ನಡೆಯಿತು. ಮಹತ್ವದ ಸಭೆಯಲ್ಲಿ ಸಿಎಲ್ ಪಿ ನಾಯಕನಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಒಂದೇ ಸಾಲಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರಕ್ಕೆ ಬಿಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ.ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯು ಮುಂದುವರೆಯಲಿದ್ದು, ಒಬ್ಬೊಬ್ಬರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಂದೆ ಶಾಸಕರು ತಮ್ಮ ಸಿಎಂ ಅಭ್ಯರ್ಥಿಯ ಆಯ್ಕೆಯ ಮಾಹಿತಿಯನ್ನು ಮುಂದಿಡಲಿದ್ದಾರೆ.   ಅಂದಹಾಗೇ ಇಂದಿನ ಮಹತ್ವದ ಸಿಎಲ್ …

Read More »

ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ ೨ನೇ ಸ್ಥಾನದವರ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಮೊದಲ ಸ್ಥಾನದಲ್ಲಿದ್ದವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕೆಂದು ಅರಬಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ …

Read More »

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ

*ಮೂಡಲಗಿ*: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ‌್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …

Read More »