ಗೋಕಾಕ: ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬಾಂಡೆ ಸಾಮಗ್ರಿಗಳ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ವಿವರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ಹಗೆದಾಳ, ಹಳೆ ಹೊಸುರ ಗ್ರಾಮದ ಸಾಮಾಜಿಕ ಕಾರ್ಯಗಳಿಗೆ ಅನುಕೂಲವಾಗುವಂತೆ ಬಾಂಡೆ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳಾದ ವಿಠ್ಠಲ ಪರಸನ್ನವರ, ಪಾಂಡು ರಂಗಸುಭೆ, ಮಾರುತಿ ಗುಟಗುದ್ದಿ, ಹಾಗೂ ಊರಿನ ಮುಖಂಡರಾದ ಗಂಗಪ್ಪಾ ವರಗ, ಲಗಮಣ್ಣ, ಹುಂದರಿ, ಲಕ್ಷ್ಮಣ ವರಗ, ಲಗಮಪ್ಪಾ …
Read More »Monthly Archives: ನವೆಂಬರ್ 2023
*ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಗೋಕಾಕ- ಅರಭಾವಿ ಶಾಸಕ ಹಾಗೂ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದರು. ಸೋಮವಾರದಂದು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
Read More »ಬಡಿಗವಾಡ ಗ್ರಾಮಕ್ಕೆ ಹೆಚ್ಚುವರಿ ಬಸ ಸೇವೆ ಕಲ್ಪಿಸುವಂತೆ ಕರವೇ ಮನವಿ
ಗೋಕಾಕ : ತಾಲೂಕಿನ ಬಡಿಗವಾಡ ಗ್ರಾಮದ ಪ್ರೌಢಶಾಲೆ, ಕಾಲೇಜಿನ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ಸೌಕರ್ಯವಿಲ್ಲದೇ ಸರಿಯಾದ ಸಮಯಕ್ಕೆ ತರಗತಿಗೆ ಹೋಗಲಾಗುತ್ತಿಲ್ಲ. ಈ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಡಿಪ್ಪೋ ವ್ಯವಸ್ಥಾಪಕರಿಗೆ ಶನಿವಾರದಂದು ಮನವಿ ಸಲ್ಲಿಸಲಾಯಿತು. ಬಸ್ ಸಮಯಕ್ಕೆ ಸರಿಯಾಗಿ ಬಾರದಿರುವುದರಿಂದ ತರಗತಿಗಳಿಗೆ ತಡವಾಗಿ ಬರುವುದು ಅಥವಾ ಬೆಳಗ್ಗೆ ಶಾಲೆಗೆ ಬೇಗ ಬರುವುದಕ್ಕೆ ಹಾಗೂ ಸಂಜೆ ಮನೆಗೆ ಹಿಂದಿರುಗಲು ಗಂಟೆಗಟ್ಟಲೆ ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ …
Read More »ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸಿ: ಸಚಿವ ಸತೀಶ್ ಜಾರಕಿಹೊಳಿ
ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ ಎಂದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಸಮಾಜದಲ್ಲಿನ ಸಮಸ್ಯೆಗಳತ್ತ ಬೆಳಕು ಚೆಲ್ಲುವ ಕೆಲಸವಾಗಬೇಕು. ಮುಖ್ಯವಾಗಿ ಪತ್ರಿಕಾ ರಂಗದಲ್ಲಿ ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸುವ ಕಾರ್ಯವಾಗಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು. ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಳಗಾವಿ ಘಟಕದಿಂದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ಗಿರೀಶ ಕೋಟೆ ಅವರಿಗೆ ಹಮ್ಮಿಕೊಂಡಿದ್ದ ಅಭಿಮಾನದ ಅಭಿವಂದನೆ …
Read More »ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿಗಳ ಹುಟ್ಟು ಹಬ್ಬ; ಗಡಿನಾಡು ಕನ್ನಡ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ
ಗೋಕಾಕ : ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿಗಳಾದ ಬಸವರಾಜ ಇಳಿಗೇರ ಅವರ ಹುಟ್ಟು ಹಬ್ಬವನ್ನು ಗಡಿನಾಡು ಕನ್ನಡ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿಗಳಾದ ಬಸವರಾಜ ಇಳಿಗೇರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಭಾಗದಲ್ಲಿರುವ ಜಾಂಬೋಟಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಇಂದು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ …
Read More »ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ- ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಯಾದವಾಡದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದ ಸಮಾರಂಭ: ಮೂಡಲಗಿ: ಶಿಕ್ಷಣದ ಮೂಲಕ ಸಮಾಜ ಸಂಘಟನೆ ಸಾಧ್ಯ. ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು ರವಿವಾರದಂದು ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜವು ಇನ್ನಷ್ಟು …
Read More »ಗೋಕಾಕದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸಭೆ!
ಗೋಕಾಕ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ವತಿಯಿಂದ ಇಂದು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು. ಯಾರಿಗಾದರು ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸದಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಈ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರು ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಎಲ್ಲ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರು …
Read More »*ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ*: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರ ಹಸು ಮೃತಪಟ್ಟರೇ ಅದಕ್ಕೆ …
Read More »*̊ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*̊
ಮೂಡಲಗಿ: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮಾರ್ಪಾಡಾಗಲಿವೆ ಎಂದು ಹೇಳಿದರು. ಕುಲಗೋಡ ಮತ್ತು ಯಾದವಾಡ ಗ್ರಾಮಗಳು ಸುತ್ತಮುತ್ತಲಿನ …
Read More »*ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ.* *ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ* *ಘಟಪ್ರಭಾ* : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮವನ್ನು ಬರುವ ದಿ. 20 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ …
Read More »