ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ಪೇಟೆಯಲ್ಲಿ ಮಂಗಳವಾರದAದು ಜರುಗಿದ ಕಿತ್ತೂರು ರಾಣಿ ಜಯಂತಿ …
Read More »Monthly Archives: ಅಕ್ಟೋಬರ್ 2024
ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಗೋಕಾಕದಲ್ಲಿ ಕರವೇ ಪ್ರತಿಭಟನೆ
ಗೋಕಾಕ : ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆಸುವ ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತಕರು ನಗರದಲ್ಲಿ ಸೋಮವಾರದಂದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್ ಕರಾಳ ದಿನಾಚರಣೆ ಮಾಡುತ್ತ ಬಂದಿದೆ. ಈ ಬಾರಿ …
Read More »ರಾಜ್ಯದ ಸಮಗ್ರ ಅಭಿವೃದ್ಧಿ ನಮ್ಮ ಬಿಜೆಪಿಯಿಂದ ಮಾತ್ರ ಸಾಧ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅರಭಾವಿ ಕ್ಷೇತ್ರವು ಮತ್ತೊಂದು ಬಾರಿ ಸಾಧನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಿಸಲು ಕಾರ್ಯಕರ್ತರು ಶ್ರಮಿಸುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಬುಧವಾರದಂದು ನಗರದ ಎನ್.ಎಸ್.ಎಫ್ ಕಛೇರಿಯಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದ ಸಕ್ರೀಯ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು ಐವತ್ತು ಸಾವಿರಕ್ಕಿಂತ ಅಧಿಕ ಸದಸ್ಯರನ್ನು …
Read More »ಗೋಕಾಕ ಹಿಲ್ ಗಾರ್ಡನ್ ಕಛೇರಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ
ಗೋಕಾಕ: ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಆಚರಣೆ ಮಾಡಲಾಯಿತು. ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 1857ರಲ್ಲಿ ನಡೆದ ಪ್ರಥಮ ಸ್ವಾತಂತ್ರ ಸಂಗ್ರಾಮದ ಕಿಚ್ಚು ಹೊತ್ತಿಸುವಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಪಾತ್ರ ಪ್ರಮುಖವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಹೇಳಿದರು. ಬ್ರಿಟಿಷರ ವಿರುದ್ಧ ಹೋರಾಡಿ ದೇಶಾಭಿಮಾನ ಮೆರೆದ ಚನ್ನಮ್ಮ ಅವರ ತ್ಯಾಗ ಇಂದಿನ ಯುವ ಜನಾಂಗಕ್ಕೆ ಸ್ಫೂರ್ತಿ ಹಾಗೂ …
Read More »GPL ಕ್ರಿಕೆಟ್ ಪಂದ್ಯಾವಳಿ ಸೀಸನ್ 6; ಗೋಕಾಕ ಚಾಲೆಂಜರ್ಸ್ ಗೆ ಜಯ.
ಗೋಕಾಕ : ಕಳೆದ ಒಂದು ವಾರದಿಂದ ನಡೆಯುತ್ತಿದ್ದ GPL ಕ್ರಿಕೆಟ್ ರೋಚಕ ಪಂದ್ಯಾವಳಿಯಲ್ಲಿ ಗೋಕಾಕ ಚಾಲೆಂಜರ್ಸ್ ತಂಡ ಪಂದ್ಯ ಗೆದ್ದು ಸೀಸನ್ 6 ರ ಕಪ್ ತನ್ನದಾಗಿಸಿಕೊಂಡಿದೆ. ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ GPL ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಯ ಗಳಿಸಿದ ಗೋಕಾಕ ಚಾಲೆಂಜರ್ಸ್ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರಿಂದ 75 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ ಆಫ್ ದ ಗೋಕಾಕ …
Read More »ಮೂಡಲಗಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಎಲ್ಲ 24 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ
ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಧ್ಯಸ್ತಿಕೆ ಮೂಡಲಗಿ; ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಆಯಾ ಇಲಾಖಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನೌಕರರ ಸಂಘದ ನೂತನ ಸದಸ್ಯರು ಶ್ರಮಿಸುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಇದೇ ದಿ 28 ರಂದು ನಡೆಯಬೇಕಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರಿಂದ ಅದರ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, …
Read More »ಲಕ್ಷ್ಮೀ ಎಜುಕೇಷನ್ ಟ್ರಸ್ಟಿನ ನಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಜಯಂತಿ ಆಚರಣೆ!
ಗೋಕಾಕ : ನಗರದ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಭೀಮಶಿ ಜಾರಕಿಹೊಳಿ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು …
Read More »ಹಿಲ್ ಗಾರ್ಡನ್ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ!
ಗೋಕಾಕ : ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವ ಮತ್ತು ಕಾವ್ಯದ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸುವ ಹಿನ್ನಲೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು. ಮಹರ್ಷಿ …
Read More »ಮಹರ್ಷಿ ವಾಲ್ಮೀಕಿ ಜಯಂತಿಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭ ಕೋರಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ಮನುಕುಲಕ್ಕೆ ಮಾರಕವಾಗಿದ್ದ ರಾಕ್ಷಸಿ ಸಮೂಹವನ್ನು ಸಂಹಾರ ಮಾಡಿ ಶೋಷಣೆ ರಹಿತ, ವರ್ಗ ರಹಿತ, ಜಾತಿ ರಹಿತ, ಸಮಪಾಲು- ಸಮಬಾಳು, ಸರಿ ಸಮಾನವಾದ ಅವಕಾಶದ ಸಂದೇಶಗಳನ್ನು ಸಾರಿದ್ದಾರೆ. ಈ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ರಾಮಾಯಣವನ್ನು ರಚನೆ ಮಾಡಿ …
Read More »ಧಾರ್ಮಿಕ ಪರಂಪರೆಯನ್ನು ಬೆಳೆಸಿಕೊಂಡಾಗ ಮಾತ್ರ ಜೀವನ ಸಾರ್ಥಕ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಧಾರ್ಮಿಕ ಪರಂಪರೆಯನ್ನು ಬೆಳೆಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಕಲಾರಕೊಪ್ಪ ಗ್ರಾಮದ ಚಾಮುಂಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈಗಿನ ಯುವ ಪೀಳಿಗೆಗೆ ಧಾರ್ಮಿಕತೆಯ ಬಗ್ಗೆ ಅರಿವು ಮೂಡಿಸಬೇಕಾದ ಅವಶ್ಯವಿದೆ ಎಂದವರು ತಿಳಿಸಿದರು. ಕಳೆದ ಮೂವತ್ತು ವರ್ಷಗಳಿಂದ ಕಲಾರಕೊಪ್ಪ ಗ್ರಾಮಸ್ಥರು ಎಂಥ ಪರಿಸ್ಥಿತಿಯಲ್ಲೂ ನಮ್ಮೊಂದಿಗೆ ಇದ್ದಾರೆ. ನಮ್ಮ ಕುಟುಂಬಕ್ಕೆ …
Read More »