Breaking News

Monthly Archives: ಫೆಬ್ರವರಿ 2025

ರಾಜ್ಯಾದ್ಯಂತ ಕಾವೇರಿ 2.0 ತಂತ್ರಾಂಶ ಸಮಸ್ಯೆ ಕ್ಲಿಯರ್ : ಇಂದಿನಿಂದ ಎಂದಿನಂತೆ ನೋಂದಣಿ

ರಾಜ್ಯದಲ್ಲಿನ ಆಸ್ತಿ ದಸ್ತಾವೇಜು ನೋಂದಣಿ ಪ್ರಕ್ರಿಯೆ ಹಾಗೂ ಇಸಿ/ಸಿಸಿ ಸೇವೆ ನೀಡುವ ಕಾವೇರಿ 2.0 ತಂತ್ರಾಂಶದಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಏಳನೇ ಸಾರ್ವಜನಿಕರು ಪರದಾಡುವಂತಾಗಿದೆ.ಕಳೆದ ಒಂದು ವಾರದಿಂದ ಇದ್ದ ಸರ್ವರ್ ಸಮಸ್ಯೆ ಬುಧವಾರವೂ ಮುಂದುವರೆದಿದ್ದು, ಬೆಳಗ್ಗೆಯೂ ಕಾವೇರಿ 2.0 ತಂತ್ರಾಂಶದ ನಾಗರಿಕರ ಲಾಗಿನ್ ತೆರೆದುಕೊಳ್ಳಲಿಲ್ಲ. ಉಪ ನೋಂದಣಾಧಿಕಾರಿಗಳ ಲಾಗಿನ್ ತೆರೆದು ಕೊಂಡಿದ್ದರೂ ತಾಂತ್ರಿಕ ಸಮಸ್ಯೆ ಮುಂದು ವರೆದಿದ್ದರಿಂದಗೊಂದಲಗಳಿಗೆ ಇನ್ನೂ ಮುಕ್ತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಆದರೆ ಸಂಜೆ ವೇಳೆಗೆ ಪತ್ರಿಕಾ ಹೇಳಿಕೆ …

Read More »

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ; FIR ದಾಖಲು.!

ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ.ಈ ಸಂಬಂಧ ಚೇರ್ಮನ್ ಡಾ.ವಿಶ್ವನಾಥ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಜ.23 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿವಿಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿದ್ದು, ಪರೀಕ್ಷೆಗೂ ಮೊದಲೇ ವಾಟ್ಸಾಪ್ ನಲ್ಲಿ ಪ್ರಶ್ನೆ ಪತ್ರಿಕೆಗಳು ಹರಿದಾಡಿತ್ತು, …

Read More »

ಕೇಂದ್ರದ ಬಜೆಟ್ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕೇಂದ್ರ ಸರ್ಕಾರದ ಬಜೆಟ್ ರಾಜ್ಯದ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್ನಿಂದ ಕರ್ನಾಟಕದ ಯಾವುದೇ ಬೇಡಿಕೆ ಈಡೇರಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಈ ಬಜೆಟ್‌ ನೋಡಿದರೆ ರಾಜ್ಯದ ಕೇಂದ್ರ ಸಚಿವರೆಲ್ಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ಬಜೆಟ್ ಅನ್ನು ಟೀಕಿಸಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 8ನೇ ಬಾರಿಗೆ ಬಜೆಟ್ ಮಂಡಿಸಿದ್ದು, …

Read More »

ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ.  ಒಟ್ಟಿನಲ್ಲಿ ಈ ಬಜೆಟ್ ಎಲ್ಲ ವರ್ಗಗಳಿಗೆ ಸಹಕಾರಿಯಾಗಿದೆ. ಜನಪರ, ರೈತಪರ, …

Read More »

ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹಾಗೂ ಉದ್ಯಮಿಗಳಾದ ಸಂತೋಷ್ ಜಾರಕಿಹೊಳಿ ಅವರ ಪುತ್ರರಾದ ಸೂರ್ಯಶ್ರೇಷ್ಠ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಸಮಾಜಮುಖಿಯಾಗಿ ಸರಳವಾಗಿ ಆಚರಿಸಿದರು. ಶ್ರೇಷ್ಠ ಫೌಂಡೇಶನ್ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಉಪಹಾರ, ಸಿಹಿ ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ನಂತರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಸಿಬ್ಬಂದಿಗಳೊಂದಿಗೆ ಹಾಗೂ …

Read More »

ಗೋಕಾಕದ ಹಿಲ್ ಗಾರ್ಡನ್ ಕಛೇರಿಯಲ್ಲಿ ವೀರ ಗಣಾಚಾರಿ ಮಡಿವಾಳ ಮಾಚಿದೇವ ಅವರ ಜಯಂತಿ ಆಚರಣೆ.

ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಕಾಯಕವೇ ನೈಜ ಭಕ್ತಿ, ಪರರ ಸೇವೆಯೇ ನೈಜ ಧರ್ಮ ಎಂದು ಸಾರಿದ ವಚನಕಾರ, ವಚನ ಸಾಹಿತ್ಯ ಸಂರಕ್ಷಿಸಿದ ವೀರ ಗಣಾಚಾರಿ ಮಡಿವಾಳ ಮಾಚಿದೇವ ಅವರ ಜಯಂತಿ ಆಚರಣೆ ಮಾಡಲಾಯಿತು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಅವರು ಮಾತನಾಡಿ ಅಂದು ಮಾಚಿದೇವರು ವಚನಸಾಹಿತ್ಯವನ್ನು ರಕ್ಷಿಸದಿದ್ದಲ್ಲಿ ಶರಣ ಧರ್ಮಕ್ಕೆ, ಶರಣ ಸಂಸ್ಕೃತಿಗೆ, ಶರಣ ಸಾಹಿತ್ಯಕ್ಕೆ ಇಂದು ಜೀವಂತಿಕೆ ಇರುತ್ತಿರಲಿಲ್ಲ. ವ್ಯಕ್ತಿತ್ವ ವಿಕಸನ ಮತ್ತು …

Read More »