Breaking News

Monthly Archives: ಜನವರಿ 2026

ಮಹಾರಾಷ್ಟ್ರದಲ್ಲಿ ವಿಮಾನ ಪತನ : DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನಗೊಂಡು, DCM ‘ಅಜಿತ್ ಪವಾರ್’ ಸೇರಿ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ (ಹೆಲಿಕಾಪ್ಟರ್) ಅಪಘಾತಕ್ಕೀಡಾಗಿರುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಈ ಘಟನೆಯು ಅವರ ಸ್ವಕ್ಷೇತ್ರವಾದ ಬಾರಾಮತಿಯಲ್ಲಿ ನಡೆದಿದೆ. ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ವಿವರಗಳು: ಬಾರಾಮತಿ ಕ್ಷೇತ್ರದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಈ …

Read More »

ಅಪೆಕ್ಸ್‌ ನಿರ್ದೇಶಕರ ಜತೆ ಸಿಎಂ ಚಾಯ್‌ ಪೇ ಚರ್ಚಾ ಮಾತುಕತೆ

ಬೆಂಗಳೂರು : ಅಪೆಕ್ಸ್ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳಾದ ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್.ರಾಜಣ್ಣ ಹಾಗೂ ಪರಿಷತ್ ಸದಸ್ಯ ಎಸ್.ರವಿ ಸೇರಿ ಬ್ಯಾಂಕ್ ನಿರ್ದೇಶಕರೊಂದಿಗೆ ಸೋಮವಾರ ಸಭೆ ನಡೆಸಿದರು. ಸಂಜೆ ಚಹಾಕೂಟದ ಹೆಸರಿನಲ್ಲಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕರೊಂದಿಗೆ ಚರ್ಚೆ ನಡೆಸಿರುವ ಸಿದ್ದರಾಮಯ್ಯ, ‘ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧವಾಗಿರಬೇಕು’ ಎಂದು …

Read More »

ಡಾ. ಕೋರೆ ಅವರಿಗೆ ಪದ್ಮಶ್ರೀ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಬೆಳಗಾವಿ- ಶಿಕ್ಷಣ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಬೆಳಗಾವಿಯವರೇ ಆದ ಡಾ.ಪ್ರಭಾಕರ ಕೋರೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆ ಮಾಡಿರುವುದು ಅಭಿನಂದನೀಯವಾದುದು ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹರ್ಷ ವ್ಯಕ್ತಪಡಿಸಿದರು.  ಕೆಎಲ್‌ಇ ಸಂಸ್ಥೆಯ ಮೂಲಕ ಶೈಕ್ಷಣಿಕ ರಂಗದಲ್ಲಿ ಕೋರೆ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಮತ್ತು ಪ್ರಾತಃಸ್ಮರಣೀಯವಾಗಿದೆ. ಕೆಎಲ್‌ಇಯ ನೂರಾರು ಶೈಕ್ಷಣಿಕ ಸಂಸ್ಥೆಗಳ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಕೋರೆ …

Read More »

ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ನಮ್ಮ ದೇಶದಲ್ಲಿರುವ ಕ್ರಿಕೆಟ್‌ ಪಂದ್ಯಕ್ಕೆ ಇರುವ ಜನಪ್ರಿಯತೆ ಬೇರೊಂದು ಕ್ರೀಡೆಗಿಲ್ಲ. ಪ್ರಪಂಚಾದ್ಯಂತ ಪಸರಿಸಿರುವ ಕ್ರಿಕೆಟ್ ಆಟವು ಪ್ರತಿ ಹಳ್ಳಿ- ಹಳ್ಳಿಗೂ, ಗಲ್ಲಿ- ಗಲ್ಲಿಗೂ ಬೆಳೆದಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿಗೆ ಸಮೀಪದ ನಾಗನೂರ ಪಟ್ಟಣದ ಹೊರವಲಯದ ಸರ್ಕಾರಿ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಗುರುವಾರ ನಾಗನೂರ ಪ್ರಿಮಿಯರ್ ಲೀಗ್ (ಎನ್ಪಿಎಲ್)  ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರಿಕೆಟ್ ಪಂದ್ಯವು ಅಂತರರಾಷ್ಟ್ರೀಯ ಕ್ರೀಡೆಯಾಗಿದೆ. ಮೊದಲಿನ ಆಟಕ್ಕೂ, ಈಗಿರುವ …

Read More »

ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ್ ಖಡಕಭಾವಿ, ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಆಯ್ಕೆ

ಗೋಕಾಕ : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಿ.ಬೆಂಗಳೂರು ಇದರ ಗೋಕಾಕ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾವಿ, ತಾಲೂಕು ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಅವರನ್ನು ಆಯ್ಕೆಮಾಡಲಾಯಿತು. ಸುಮಾರು 25 ವರ್ಷಗಳ ಸುದೀರ್ಘವಾಗಿ ಪತ್ರಿಕಾ ರಂಗದಲ್ಲಿ ಹಾಗೂ ನೂತನ ಡಿಜಿಟಲ್ ಮಾಧ್ಯಮದಲ್ಲಿ ತಮ್ಮದೆ ಆದ ಮಾರ್ಗದರ್ಶನ ಮಾಡಿದ ತಾಲೂಕಿನ ಹಿರಿಯ ಪತ್ರಕರ್ತ ಲಕ್ಷ್ಮಣ ಖಡಕಭಾಂವಿ ಅವರು ಗೋಕಾಕ ತಾಲೂಕು ಗೌರವಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ನಗರದಲ್ಲಿ ಸೋಮವಾರದಂದು ರಾಜ್ಯಾಧ್ಯಕ್ಷ …

Read More »