Breaking News

Daily Archives: ಫೆಬ್ರವರಿ 25, 2026

ಘಟಪ್ರಭಾ ನೂತನ ಸೇತುವೆ ಶೀಘ್ರ ಪೂರ್ಣಗೊಳಿಸುವಂತೆ ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ

ಬೆಳಗಾವಿ: ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯನ್ನು ನೆಲಸಮ ಮಾಡಲಾಗಿದ್ದು, ನೂತನ ಸೇತುವೆಯನ್ನು 45 ದಿನಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಸಂಕೇಶ್ವರ–ಯರಗಟ್ಟಿ ರಾಜ್ಯ ಹೆದ್ದಾರಿಯ ಘಟಪ್ರಭಾ ಪಟ್ಟಣದ ಸಮೀಪ, ಘಟಪ್ರಭಾ ಕೆನಾಲ್‌ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಹಳೆಯ ಸೇತುವೆ ಗಂಭೀರ ಬಿರುಕು ಬಿಟ್ಟು ಪರಿನಾಮ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದರಿಂದ ಅದನ್ನು ನೆಲಸಮ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ …

Read More »