Breaking News

Monthly Archives: ಮೇ 2026

ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದರಾಮಯ್ಯ ತೀರ್ಮಾನ: ನಾಳೆ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು : ತೀವ್ರ ಕುತೂಹಲ ಕೆರಳಸಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಯಲ್ಲಿ ರಾಹುಲ್ ಗಾಂಧಿ ಅವರು ನಾಯಕತ್ವ ಬದಲಾವಣೆ ಪ್ರಸ್ತಾಪ ಮಾಡಿದ್ದು, ಎರಡ್ಮೂರು ಆಫರ್ ನೀಡುವ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಹುಲ್ ಗಾಂಧಿ ಮಾತನ್ನು ತಮ್ಮ ಆಪ್ತರೊಂದಿಗೆ ಸಿದ್ದರಾಮಯ್ಯ ಚರ್ಚಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಹೀಗಾಗಿ ಈ ವಾರದಲ್ಲೇ …

Read More »

ಕರ್ನಾಟಕದ 4 ಸ್ಥಾನ ಸೇರಿ ರಾಜ್ಯಸಭೆಯ 24 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ : ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ .

ಮುಂಬರುವ ರಾಜ್ಯಸಭಾ ಚುನಾವಣೆಯ ದಿನಾಂಕಗಳನ್ನು ಈಗಾಗಲೇ ಘೋಷಿಸಲಾಗಿದೆ. ಚುನಾವಣಾ ಆಯೋಗವು 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಸ್ಥಾನಗಳಿಗೆ ಜೂನ್ 18, 2026 ರಂದು ಚುನಾವಣೆ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತದೆ. ಈ ಪ್ರಕಟಣೆಯ ಬಳಿಕ ಹಲವು ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ಹೆಚ್ಚಾಗಿವೆ, ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆ ಮತ್ತು ಬೆಂಬಲದ ವ್ಯವಸ್ಥೆಯಲ್ಲಿ ತೊಡಗಿವೆ. ಚುನಾವಣಾ ಆಯೋಗದ …

Read More »

*2028 ಕ್ಕೆ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಆಡಳಿತ ಚುಕ್ಕಾಣಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಆತ್ಮವಿಶ್ವಾಸ*

ಖಾನಾಪೂರದ ಕುಸಮಳ್ಳಿಯಲ್ಲಿ ನಡೆಯುತ್ತಿರುವ ಪಂ. ದೀನ ದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತ ಬಲಾಢ್ಯ ರಾಷ್ಟ್ರ *ಬೆಳಗಾವಿ:* ಡಾ. ಶ್ಯಾಂ ಪ್ರಸಾದ ಮುಖರ್ಜಿ ಮತ್ತು ಪಂಡಿತ ದೀನ ದಯಾಳ ಉಪಾಧ್ಯಾಯ ಅವರ ತ್ಯಾಗ, ಬಲಿದಾನಗಳಿಂದ ಬಿಜೆಪಿಯು ಇಂದು ರಾಷ್ಟ್ರ ಮಟ್ಟದಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ರವಿವಾರ ಖಾನಾಪೂರ ತಾಲ್ಲೂಕಿನ ಕುಸಮಳ್ಳಿಯ ಹೊರವಲಯದಲ್ಲಿರುವ …

Read More »

ʻಬೆಳಗಾಂ ಶುಗರ್ಸ ಕಾರ್ಖಾನೆಗೆ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ ಪ್ರಶಸ್ತಿʼ

ಬೆಳಗಾವಿ: ಬೆಳಗಾಂ ಶುಗರ್ಸ್ ಪ್ರೈ.ಲಿ ಸಕ್ಕರೆ ಕಾರ್ಖಾನೆಗೆ 2024-25 ನೇ ಸಾಲಿನ ಉತ್ತರ ಕರ್ನಾಟಕ ವಲಯದ ಅತ್ಯುತ್ತಮ ತಾಂತ್ರಿಕ ಕಾರ್ಯನಿರ್ವಹಣೆ ಪ್ರಶಸ್ತಿಯನ್ನು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಬೆಳಗಾವಿ ನೀಡಿ ಗೌರವಿಸಿದೆ.  ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶನಿವಾರ 16 ರಂದು ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ, ಸಭಾಂಗಣದಲ್ಲಿ ಜರುಗಿದ 19ನೇ ವಾರ್ಷಿಕ ಸರ್ವ ಸಾಧಾರಣಾ ಮಹಾಸಭೆಯಲ್ಲಿ ಬೆಳಗಾಂ …

Read More »

ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ವಿರುದ್ಧ ಪ್ರತಿಭಟನೆ

ಹುಕ್ಕೇರಿ: ನಿರಂತರ ಜ್ಯೋತಿ ಯೋಜನೆಯಡಿ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ವಿವಿಧ ಗ್ರಾಮಸ್ಥರು ಹುಕ್ಕೇರಿ ಪಟ್ಟಣದ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ನೂರಾರು ಜನರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಪ್ರತಿಭಟನೆಗೆ ರೈತ ಹಾಗೂ ದಲಿತ ಸಂಘಗಳು ಬೆಂಬಲ ನೀಡಿದ್ದವು. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ತಕ್ಷಣ ನಿರಂತರ …

Read More »

ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಬಿಡುಗಡೆ

ಮೇ. 18 ರಿಂದ 28 ರತನಕ ಚಿಕ್ಕೋಡಿ ಉಪ ಕಾಲುವೆಗೆ ಒಟ್ಟು 0.475 ಟಿಎಂಸಿ ನೀರು. ಮೇ. 22 ರಿಂದ 10 ದಿನಗಳವರೆಗೆ ಒಟ್ಟು 2.289 ಟಿಎಂಸಿ ನೀರು ಘಟಪ್ರಭಾ ಎಡದಂಡೆ ಕಾಲವೆಗೆ ನೀರು ಹರಿವು. ಸಚಿವ ಸತೀಶ್ ಜಾರಕಿಹೊಳಿಯವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ. ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆಗೆ ಬರುವ ದಿ. 22 ಮತ್ತು ಚಿಕ್ಕೋಡಿ …

Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ್ ಜಾರಕಿಹೊಳಿ ಅವರಿಂದ ಸತ್ಕಾರ

ಗೋಕಾಕ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ ಬಂದ ವಿದ್ಯಾರ್ಥಿಗಳು ಹಾಗೂ ಗೋಕಾಕ ವಲಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ100ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯೋಪಾಧ್ಯಾಯರನ್ನು ರವಿವಾರದಂದು ಶಾಸಕ ರಮೇಶ್ ಜಾರಕಿಹೊಳಿ ಅವರು ಸತ್ಕರಿಸಿ, ಗೌರವಿಸಿದರು. ನಂತರ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ತಾಲೂಕು ಅಧಿಕಾರಿಗಳು ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ತಹಶೀಲದಾರ ಡಾ.ಮೋಹನ ಭಸ್ಮ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ,ಕ್ಷೇತ್ರ ಶಿಕ್ಷಣಾಧಿಕಾರಿ ಜಿ …

Read More »