Breaking News

Monthly Archives: ಜುಲೈ 2026

ರೈತರ ಹೋರಾಟಕ್ಕೆ ಮಣಿದ ಅಧಿಕಾರಿಗಳು ಅಂತ್ಯಗೊಂಡ ಮಾಸ್ತಿಹೊಳಿ ರೈತರ ಅಹೋರಾತ್ರಿ ಧರಣಿ

ಬೆಳಗಾವಿ: ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರ ನೀರಾವರಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡುವುದರೊಂದಿಗೆ ಅಂತ್ಯಕಂಡಿದೆ. ಹಿಡಕಲ್ ಜಲಾಶಯ ಯೋಜನೆಯಿಂದ ಭೂಮಿ ಕಳೆದುಕೊಂಡ 24 ಗ್ರಾಮಗಳ ಸಂತ್ರಸ್ತ ರೈತರು ನ್ಯಾಯಯುತ ಪರಿಹಾರ ಹಾಗೂ ದಾಖಲೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಜಾನುವಾರುಗಳೊಂದಿಗೆ ಕರ್ನಾಟಕ ನೀರಾವರಿ ನಿಗಮದ ಬೆಳಗಾವಿ …

Read More »

ಘಟಪ್ರಭಾ ಕಾಲುವೆಗೆ ಕೂಡಲೇ ನೀರು ಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ

ಮೂಡಲಗಿ; ಬರಗಾಲದ ಛಾಯೆಗೆ ಒಳಗಾಗಿರುವ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗೆ ಕೂಡಲೇ ನೀರು ಹರಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರಲ್ಲಿ ಮನವಿ ಮಾಡಿಕೊಂಡರು. ಗುರುವಾರ, ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಅಶೋಕ ಖಂಡ್ರಟ್ಟಿ ಅಭಿಮಾನಿ ಬಳಗದವರು ನೀಡಿರುವ ಅದ್ದೂರಿಯಾದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ದನ- …

Read More »

*ಹೊಸಟ್ಟಿ ಗ್ರಾಮದಲ್ಲಿ 1.16 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ : ಗ್ರಾಮದ ಅಭಿವೃದ್ಧಿಯಲ್ಲಿ ನಾಗರೀಕರ ಸಹಕಾರ ಅಗತ್ಯವಾಗಿದ್ದು, ಈ ದಿಸೆಯಲ್ಲಿ ಹೊಸಟ್ಟಿ ಗ್ರಾಮಸ್ಥರು ಒಂದಾಗಿ ಸೇರಿಕೊಂಡು ಗ್ರಾಮಾಭಿವೃದ್ಧಿಗೆ ದುಡಿಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಶಾಸಕ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ತಾಲ್ಲೂಕಿನ ಹೊಸಟ್ಟಿ ಗ್ರಾಮದಲ್ಲಿ ಸೋಮವಾರದಂದು ಒಟ್ಟು 1.16 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ನೆರವೇರಿಸಿ ಅವರು ಮಾತನಾಡಿದರು. ಹೊಸಟ್ಟಿ ಗ್ರಾಮದ ಅಭಿವೃದ್ಧಿಗೆ ಹತ್ತು- ಹಲವಾರು ಯೋಜನೆಗಳನ್ನು ಜಾರಿ ಮಾಡಲಾಗಿದೆ. …

Read More »

ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರವಚನದ ಸಮಾರೋಪದ ಸಮಾವೇಶ

*ಗಂಗಾಮತಸ್ಥ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ಧನಸಹಾಯ: ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಹಿಂದುಳಿದ ಗಂಗಾಮತಸ್ಥ ಸಮಾಜಕ್ಕೆ ಅನುಕೂಲವಾಗಲು ಗೋಕಾಕದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ 10 ಲಕ್ಷ ರೂಪಾಯಿಗಳ ಧನ ಸಹಾಯ ಮಾಡುತ್ತೇನೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಸೋಮವಾರದಂದು ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ದಿ. ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಕಪರಟ್ಟಿ- …

Read More »