Breaking News

ಸರ್ಕಾರದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌! ಆದರೆ ಹೊಸ ನಿಯಮ.


ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅವಕಾಶ ನೀಡಬೇಕೆಂಬ ಹಲವರ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೆಲವು ನಿಯಮಗಳೊಂದಿಗೆ ಆಚರಣೆಗೆ ಅವಕಾಶ ನೀಡಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೋವಿಡ್ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳ ಅನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಬೇಕೆಂದು ಮನವಿ ಮಾಡಿದ್ದಾರೆ.

ನಿಯಮಗಳು

1.ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ತಮ್ಮ ಮನೆಗಳಲ್ಲಿ, ದೇವಸ್ಥಾನದ ಒಳಗೆ ,ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯ ಭಕ್ತರೊಂದಿಗೆ ಆಚರಿಸಬಹುದು.

2ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವವರು ಮೂರ್ತಿಯು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಪ್ರತಿಷ್ಠಾಪನೆ ಮಾಡುವವರು ಎರಡು ಅಡಿ ಮೀರದಂತೆ ಪ್ರತಿಷ್ಠಾಪನೆ ಮಾಡಬೇಕು.

3. ಪಾರಂಪರಿಕವಾಗಿ ಗಣೇಶೋತ್ಸವ ಮಾಡುವಲ್ಲಿ ಗಣೇಶೋತ್ಸವ ಸಮಿತಿ ಅಥವಾ ಮಂಡಳಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್‌ ಕಾರ್ಪೋರೇಷನ್‌ ಅಥವಾ ಸ್ಥಳೀಯ ಆಡಳಿತದಿಂದ ಪೂರ್ವ ಅನುಮತಿಯನ್ನು ಪಡೆಯಬೇಕು. ಒಂದು ವಾರ್ಡ್ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.

4.ಗಣೇಶೋತ್ಸವದ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಾಣ ಮಾಡಬೇಕು. ಒಮ್ಮೆಲೆ 20 ಕ್ಕಿಂತ ಅಧಿಕ ಜನರು ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

5.ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹೀಗೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶವಿಲ್ಲ.

6.ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜನೆ ಮಾಡುವುದು ಮತ್ತು ಸರ್ಕಾರಿ ಅಥವಾ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪನ ಮಾಡಿವವರು ಗಣೇಶ ಮೂರ್ತಿಯನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ ಅಥವಾ ಜಿಲ್ಲಾಡಳಿತ ಅಥವಾ ಹತ್ತಿರದ ಸ್ಥಳೀಯ ಸಂಸ್ಥೆಗಳ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್‌ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಏಕಾಏಕಿ ವಾಹಣ ತಡೆಯುವಂತಿಲ್ಲ; ಪೋಲಿಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ!

ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ