ಗೋಕಾಕ: ಬೆಳಗಾವಿಯ ಪೀರನವಾಡಿ ವೃತ್ತದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ಘಟಪ್ರಭಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೇರಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಪೀರಣವಾಡಿ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತವಾಗಿದ್ದು, ರಾಯಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯ ಹೋರಾಟಗಾರನ ತವರು ಜಿಲ್ಲೆಯಲ್ಲಿಯೇ ಪ್ರತಿಮೆ ಸ್ಥಾಪನೆಗೆ ಅಡಚನೆಯಾದುದ್ದರಿಂದ ರಾಜ್ಯ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
CKNEWSKANNADA / BRASTACHARDARSHAN CK NEWS KANNADA