Breaking News

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ


ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. ಹಿರಿಯ ಮುತ್ಸದ್ಧಿ ಮತ್ತು ಮೌಲ್ಯಾಧಾರಿತ ವ್ಯಕ್ತಿಯನ್ನು ಕಳೆದುಕೊಂಡು ಭಾರತ ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಭಾರತ ರತ್ನ, ಪದ್ಮವಿಭೂಷಣ ಸೇರಿದಂತೆ ಹಲವು ಉನ್ನತ ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿದ್ದವು. ಇವರ ಸ್ಮರಣ ಶಕ್ತಿ ಎಂತಹವರನ್ನು ವಿಸ್ಮಯಗೊಳಿಸುತ್ತಿತ್ತು. ಅಂತಹ ಅಪಾರ ಜ್ಞಾನಶಕ್ತಿಯನ್ನು ಹೊಂದಿದ್ದರಲ್ಲದೇ ಹಲವು ಭಾಷೆಗಳಲ್ಲಿ ಪಾಂಡಿತ್ಯ ಸಾಧಿಸಿದ್ದರು. ದೇಶಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಪ್ರಣಬ್ ಮುಖರ್ಜಿ ಒಬ್ಬರಾಗಿದ್ದರು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪದಲ್ಲಿ ತಿಳಿಸಿದ್ದಾರೆ.


About cknewskannada brastachardarshannews

ಭ್ರಷ್ಟಾಚಾರ ದರ್ಶನ ರಾಷ್ಟ್ರೀಯ ಪತ್ರಿಕೆ EDITOR/CEO : LAXMAN KHADAKBHANVI_____ MD : CHETAN KHADAKBHANVI.___________ Head office : Markhandeya Nager, near Dysp office falls road GOKAK. DIST:BELAGAVI STATE: KARNATAKA Mob : 9342271100, 9148026876

Check Also

ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರ ರಾಜ್ಯಸಭೆಗೆ ನಾಮನಿರ್ದೇಶನ!

ನವದೆಹಲಿ: ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ