ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.
ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿ ರಾಗಿಣಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
CKNEWSKANNADA / BRASTACHARDARSHAN CK NEWS KANNADA