
ಹಾವೇರಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ನಾಳೆ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಹಾವೇರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಕುರಿತು ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಪಿ.ಬಿ. ರೋಡ್ ಕಾಂಗ್ರೆಸ್ ಕಚೇರಿ ಬಳಿ ಇರುವ ಸಜ್ಜನ ಫಂಕ್ಷನ್ ಹಾಲ್ ನಲ್ಲಿ ಸಂಜೆ 4 ಗಂಟೆಗೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಾಜಿ ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು.ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು,ಮಹಿಳಾ ಘಟಕದ ಅಧ್ಯಕ್ಷರು,ಯುವ ಕಾಂಗ್ರೇಸ್ ಅಧ್ಯಕ್ಷರು,ಎಸ್.ಸಿ.ಎಸ್.ಟಿ ಘಟಕಗಳ ಅಧ್ಯಕ್ಷರು ಭಾಗಿಯಾಗಲಿದ್ದಾರೆ.
CKNEWSKANNADA / BRASTACHARDARSHAN CK NEWS KANNADA