ಯಾದಗಿರಿ: ಹನಿ ನೀರಾವರಿ ಯೋಜನೆಯಡಿ ಸಬ್ಸಿಡಿ ಹಣ ಬಿಡುಗಡೆ ಮಾಡಲು 5 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಎವರ್ ಗ್ರೀನ್ ಕಂಪನಿಯ ಸಬ್ಸಿಡಿ ಹಣ 1.77 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಮಲ್ಲಿಕಾರ್ಜುನ ಮೊದಲ ಕಂತಿನಲ್ಲಿ 5 ಸಾವಿರ ರೂ ಬೇಡಿಕೆ ಇಟ್ಟಿದ್ದ. ಹೀಗಾಗಿ ರೈತರಿಂದ ದೂರು ಸ್ವೀಕರಿಸಿದ ಎಸಿಬಿ ಅಧಿಕಾರಿಗಳು ವಿರೂಪಾಕ್ಷಪ್ಪ ಶಿವರಾಜಪ್ಪ ಪೊಲೀಸ್ ಪಾಟೀಲ ಎಂಬವರಿಂದ ಲಂಚ ಪಡೆಯುವಾಗ ದಾಳಿ ನಡೆಸಿದ್ದಾರೆ.
ಈ ವೇಳೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಬಾಬು ತಮ್ಮಿಂದ ತಪ್ಪಾಗಿದೆ. ಬಿಟ್ಟು ಬಿಡಿ ಎಂದು ಎಸಿಬಿ ಎಸ್ಪಿ ಮಹೇಶ ಮೇಘಣ್ಣವರ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಘಟನೆಯೂ ನಡೆದಿದೆ.
CKNEWSKANNADA / BRASTACHARDARSHAN CK NEWS KANNADA