ಬೆಂಗಳೂರು,ಅ.6: ಬರೋಬರಿ 5 ಲಕ್ಷ ಲಂಚ ಪಡೆಯುವ ವೇಳೆ ನಗರದ ಮಹಿಳಾ ವಿಶೇಷ ತಹಶೀಲ್ದಾರ್ ಒಬ್ಬರು ಭ್ರಷ್ಟಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕೆಜಿ ರಸ್ತೆಯಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು.
ಅಜಂ ಪಾಷಾ ಎಂಬುವರ ಬಳಿ 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ತಹಶೀಲ್ದಾರ್ ಲಕ್ಷ್ಮೀ, 5 ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಜಮೀನು ಆರ್.ಟಿ.ಸಿ ಮಾಡಿ ಕೊಡುವ ಕೆಲಸಕ್ಕೆ ಲಕ್ಷ್ಮೀ ಮತ್ತು ಪ್ರಸನ್ನ ಕುಮಾರ್ ಸೇರಿಕೊಂಡು 7 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರಿಗೆ ಎಂದು ಹಂಚಿಕೊಂಡಿದ್ದಾರೆ.
ಈ ವೇಳೆ ಲಕ್ಷ್ಮೀ 5 ಲಕ್ಷ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಜೊತೆಗೆ 2 ಲಕ್ಷ ಲಂಚ ಪಡೆದ ಪ್ರಸನ್ನಕುಮಾರ್ ಕೂಡ ಎಸಿಬಿ ಬಲೆಗೆ ಬಿದ್ದಿದ್ದಾರೆ. ಇನ್ನೂ ಕೇವಲ 20 ದಿನದಲ್ಲಿ ವಿಶೇಷ ತಹಶೀಲ್ದಾರ್ ಲಕ್ಷ್ಮೀ ನಿವೃತ್ತಿ ಹೊಂದಬೇಕಿತ್ತು. ಇವರು ಕೆ.ಜಿ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿರುವ ವಿಶೇಷ ತಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
CKNEWSKANNADA / BRASTACHARDARSHAN CK NEWS KANNADA