ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ.
ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ ಗಮನಿಸಿದ್ದೇನೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ದಿನಾಂಕ 12-10-2020ರಿಂದ ಮೂರು ವಾರಗಳ ಕಾಲ ಅಂದರೆ ದಿನಾಂಕ 30-10-2020ರವರೆಗೆ ಮದ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂಬುದಾಗಿ ತಿಳಿಸಿದ್ದಾರೆ.