ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.
ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬಿಡಿಸಿಸಿ ಬ್ಯಾಂಕ್ ನ ಮೂರು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವುದು ಶತಸಿದ್ದ. ಸಂಜೆ ನಾಲ್ಕಕ್ಕೆ ಫಲಿತಾಂಶ ಬರಲಿದೆ. ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ವಿಷಯ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಚಿವರು ಹೇಳಿದರು.
CKNEWSKANNADA / BRASTACHARDARSHAN CK NEWS KANNADA