ಗೋಕಾಕ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ನ. 29 ರಂದು ಬಾಗಲಕೋಟೆ ನಗರದಲ್ಲಿ ಬೆಳಗಾವಿ ವಿಭಾಗ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ ಹೇಳಿದ್ದಾರೆ.
ಗೋಕಾಕ ನಗರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಭಾಗ 6 ಜಿಲ್ಲೆಯ ಸುಮಾರು 10 ಸಾವಿರ ಜನರು ನ. 29 ರಂದು ಬಾಗಲಕೋಟೆಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ತೀರಾ ಹಿಂದುಳಿದಿರುವ ಕುರುಬ ಸಮುದಾಯಕ್ಕೆ ಕೇಂದ್ರ, ರಾಜ್ಯ ಸರ್ಕಾರ ಎಸ್ಟಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಬಾಗಲಕೋಟೆ ಪ್ರತಿಭಟನೆ ಬಳಿಕ ಜ. 14 ರಂದು ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರುವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ 10 ಲಕ್ಷ ಜನ ಸೇರಿಲಿದ್ದಾರೆ ಎಂದು ತಿಳಿಸಿದರು.
ಅಮರೇಶ್ವರ್ ಮಹರಾಜ, ಮಾಜಿ ಸಂಸದ ವಿರೂಪಾಕ್ಷ, ರಾಜೇಂದ್ರ ಸಣ್ಣಕ್ಕಿ ಸೇರಿದಂತೆ ಮುಂತಾದವರು ಇದ್ದರು.