ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ
ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ಅವರನ್ನು ಆಯ್ಕೆ ಮಾಡಿದ್ದಾರೆ.
ಸಭೆ ಬಳಿಕ ಡಿಸಿಎಂ ಲಕ್ಷ್ಮಣ ಸವದಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಸೂಚನೆಯಂತೆ ಬ್ಯಾಂಕ್ ಚುನಾವಣೆಯ ನಡೆಯದೆ ಒಮ್ಮತದ ನಿರ್ಣಯ ಮೂಲಕ ಆಗಬೇಕು ಎನ್ನುವುದಾಗಿತ್ತು. ಅದೇ ರೀತಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲಾಗಿದೆ ಎಂದು ಹೇಳಿದರು.
ಶಾಸಕ ಉಮೇಶ್ ಕತ್ತಿ, ಮಾಜಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕ ಆನಂದ ಮಾಮನಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಇತರರು ಇದ್ದರು.
CKNEWSKANNADA / BRASTACHARDARSHAN CK NEWS KANNADA